Homeಮುಖಪುಟಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

ಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

- Advertisement -
- Advertisement -

2018 ರಲ್ಲಿ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಲ್ಲಿ ಸಂಚು ರೂಪಿಸದ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಅವರಿಗೆ ಬುಲಂದ್‌ಶಹರ್ ಬಿಜೆಪಿ ಮುಖಂಡ ಅನಿಲ್ ಸಿಸೋಡಿಯಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ವಿತರಿಸಿ ವಿವಾದ ಸೃಷ್ಠಿಸಿದ್ದಾರೆ.

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

ಜುಲೈ 14 ರಂದು “ಪ್ರಧಾನ್ ಮಂತ್ರಿ ಜನ್ ಕಲ್ಯಾಣ್‌ಕಾರಿ ಯೋಗಿ ಜಾಗೃತ ಅಭಿಯಾನ” ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬುಲಂದ್‌ಶಹರ್‌ನ ಬಿಜೆಪಿ ಅಧ್ಯಕ್ಷ ಅನಿಲ್ ಸಿಸೋಡಿಯಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂಘಟನೆಯು ದೇಶಾದ್ಯಂತ ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರಚಾರ ಮಾಡುವ ಉದ್ದೇಶ ಹೊಂದಿದ್ದು ಬಿಜೆಪಿಯ ಉನ್ನತ ನಾಯಕರನ್ನು ಅದರ ಮಾರ್ಗದರ್ಶಕರಾಗಿ ಹೊಂದಿದೆ ಎಂದು ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಕೊಂದ ಆರೋಪಿ ಶಿಖರ್ ಅಗರ್‌ವಾಲ್‌ಗೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಂಬ ಪ್ರಮಾಣ ಪತ್ರವನ್ನು ಬಿಜೆಪಿ ಮುಖಂಡ ಹಸ್ತಾಂತರಿಸಿದ್ದಾರೆ. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೊಲೆಗಾರರನ್ನು ಬಿಜೆಪಿ ಅಭಿನಂದಿಸುತ್ತದೆ ಎಂದು ಟೀಕಿಸಲಾಗಿದೆ.

2018 ರಲ್ಲಿ, ಅಕ್ರಮ ಗೋಹತ್ಯೆಯ ವದಂತಿಗಳ ಮೇಲೆ ಹಿಂಸಾಚಾರ ಭುಗಿಲೆದ್ದ ನಂತರ ಈ ಪ್ರದೇಶದಲ್ಲಿ ಶಾಂತತೆಯನ್ನು ಪುನಃಸ್ಥಾಪಿಸಲು ಹೋದಾಗ ಸುಮಾರು 400 ಜನರ ಗುಂಪಿನಿಂದ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಲಾಯಿತು. ಕೊಡಲಿಯಿಂದ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಅವರ ಎರಡು ಬೆರಳುಗಳನ್ನು ಕತ್ತರಿಸಿ ಪೊಲೀಸರ ತಲೆಗೆ ಹೊಡೆದು ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಕಳೆದ ವರ್ಷದ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆತ ಜೈಲಿನಿಂದ ಹೊರಬಂದ ಸಂಧರ್ಭದಲ್ಲಿಯೂ ಸಹ ಯುವ ಬಿಜೆಪಿ ಘಟಕ ಸೇರಿದಂತೆ ಹಲವಾರು ಹಿಂದುತ್ವಪರ ಕಾರ್ಯಕರ್ತರು ಹೂವಿನ ಹಾರ ಹಾಕಿ, ಜೈ ಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸಿದ್ದರು.


ಇದನ್ನೂ ಓದಿ: ಪೊಲೀಸ್ ಅಧಿಕಾರಿ ಕೊಂದ ಆರೋಪಿಗೆ ಹೂಮಾಲೆ ಹಾಕಿ ಭವ್ಯ ಸ್ವಾಗತ, ಜೈ ಶ್ರೀರಾಂ ಘೋಷಣೆಗಳ ಅಬ್ಬರ


ಈಗ ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಸಿಸೋಡಿಯಾ “ಆ ಸಂಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಮುಖ್ಯ ಅತಿಥಿಯಾಗಿ ಮಾತ್ರ ಆಹ್ವಾನಿಸಲಾಗಿತ್ತು. ಇನ್ನು ಶಿಖರ್ ಅಗರ್ವಾಲ್‌ಗೂ ಬಿಜೆಪಿಗೂ ಕೂಡ ಸಂಬಂಧವಿಲ್ಲ. ನಾವು ಶುದ್ಧತೆಯ ರಾಜಕೀಯವನ್ನು ಮಾತ್ರ ಉತ್ತೇಜಿಸುತ್ತೇವೆ. ನಮ್ಮ ಮಾನದಂಡಗಳನ್ನು ಒಪ್ಪಿದವರೊಂದಿಗೆ ಮಾತ್ರ ಸಹಭಾಗಿತ್ವ ಮಾಡಿಕೊಳ್ಳುತ್ತೇವೆ” ಎಂದಿದ್ದಾರೆ.

ಶಿಖರ್ ಅಗರ್ವಾಲ್ ಮಾತನಾಡಿ “ಆರೋಪ ಮಾಡುವುದಕ್ಕೂ, ಪ್ರಕರಣವನ್ನು ಸಾಬೀತುಪಡಿಸುವುದಕ್ಕೂ ವ್ಯತ್ಯಾಸವಿದೆ. ನನ್ನ ಜೀವನದಲ್ಲಿ ನಾನು ಯಾವತ್ತೂ ತಪ್ಪು ಮಾಡಿಲ್ಲ” ಎಂದು ತಿಳಿಸಿದ್ದಾನೆ.


ವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...