Homeಮುಖಪುಟಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

ಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

- Advertisement -
- Advertisement -

ಯಾವುದೇ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುದು ಭಾರತದ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸುವುದಕ್ಕೆ ಸಮಾನ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠದ ಹೊಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ, “ನ್ಯಾಯಾಲಯಗಳು ಪ್ರಕರಣದ ಬಗ್ಗೆ ಅಂತಿಮ ತೀರ್ಪು ನೀಡುವ ಮುನ್ನವೇ ಆರೋಪಿಗಳ ಮನೆಗಳು ಸೇರಿದಂತೆ ಇತರ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಪರಿಪಾಠ ಕೆಲ ರಾಜ್ಯಗಳಲ್ಲಿ ಇದೆ. ಇದು ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ. ಕಾನೂನಿನ ಆಳ್ವಿಕೆಯ ಪರಿಕಲ್ಪನೆಯ ನಿರಾಕರಣೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸದಿದ್ದರೆ, ನಮ್ಮ ನ್ಯಾಯ ವಿತರಣಾ ವ್ಯವಸ್ಥೆಯೇ ನಾಶವಾಗಲಿದೆ” ಎಂದಿದ್ದಾರೆ.

ಬುಲ್ಡೋಝರ್ ಕ್ರಮ ಕಾನೂನುಬಾಹಿರ ಎಂದು ಘೋಷಿಸಿದ ಮತ್ತು ಅಕ್ರಮ ಕಟ್ಟಡಗಳ ತೆರವಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “ಈ ವಿಷಯವು ಆರೋಪಿಯ ನ್ಯಾಯಯುತ ವಿಚಾರಣೆಯ ಹಕ್ಕನ್ನು ಮಾತ್ರವಲ್ಲದೆ, ಸಂವಿಧಾನದ ವಿಧಿ 21ರ ಅಡಿಯಲ್ಲಿ ಕಲ್ಪಿಸಲಾದ ಬದುಕುವ ಹಕ್ಕಿನ ಭಾಗವಾಗಿ ಗುರುತಿಸಲ್ಪಟ್ಟ ಆಶ್ರಯದ ಹಕ್ಕನ್ನೂ ಕಸಿದುಕೊಳ್ಳುತ್ತದೆ. ಆರೋಪಿಯ ಮನೆ ಕಡೆವಿದರೆ, ಆತನ ಮುಗ್ಧ ಕುಟುಂಬ ಸದಸ್ಯರು ಕೂಡ ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಮನೆಯ ಮಾಲೀಕ ಆರೋಪಿ, ಅಪರಾಧಿ ಆಗಿರಬಹುದು. ಆದರೆ, ಆತನ ಜೊತೆಗೆ ತಾಯಿ, ತಂಗಿ, ಹೆಂಡತಿ, ಮಕ್ಕಳು ವಾಸಿಸುತ್ತಾರೆ. ಅವರು ಮಾಡಿದ ತಪ್ಪೇನು? ಮನೆ ಕೆಡವಿದರೆ ಅವರು ಎಲ್ಲಿಗೆ ಹೋಗಬೇಕು? ಅವರ ತಲೆಯ ಮೇಲಿನ ಸೂರು ಕಿತ್ತುಕೊಳ್ಳುವುದು ಎಷ್ಟು ಸರಿ? ಆರೋಪಿ, ಅಪರಾಧಿ ಆದ ತಕ್ಷಣ, ಅವರ ಮನೆ ಕೆಡವಬೇಕು ಎಂದರ್ಥವಲ್ಲ” ಎಂದಿದ್ದಾರೆ.

“ಭಾರತೀಯ ನ್ಯಾಯಾಂಗದಲ್ಲಿ ಕೋರ್ಸ್ ಕರೆಕ್ಷನ್‌ಗೆ ಸಾಕಷ್ಟು ಅವಕಾಶವಿದೆ ಎಂದ ನ್ಯಾಯಮೂರ್ತಿ ಭುಯಾನ್, ಸುಪ್ರೀಂ ಕೋರ್ಟ್ ಅಂತಿಮ ನ್ಯಾಯಾಲಯವಾಗಿರುವುದರಿಂದ ಅದು ‘ಸುಪ್ರೀಂ’ ಆಗಿದೆ. ಅದರ ಮೇಲೆ ನ್ಯಾಯಾಲಯ ಇದ್ದಿದ್ದರೆ, ಸುಪ್ರೀಂ ಕೋರ್ಟ್‌ನ ಅನೇಕ ತೀರ್ಪುಗಳನ್ನು ಮರುಪರಿಶೀಲಿಸಲಾಗುತ್ತಿತ್ತು” ಎಂದು ಹೇಳಿದ್ದಾರೆ.

“ನ್ಯಾಯಾಂಗ ನಿರ್ಧಾರಗಳಲ್ಲಿ ಸ್ಥಿರತೆ ಇರಬೇಕು. ಕಾನೂನನ್ನು ದಾವೆ ಹೂಡಿದವರಿಗೆ ಬೇಕಾದಂತೆ ಅನ್ವಯಿಸಲು ಆಗುವುದಿಲ್ಲ. ನಮ್ಮ ಹಕ್ಕು ಆಧಾರಿತ ನ್ಯಾಯಾಶಾಸ್ತ್ರ ಮಾನವ ಹಕ್ಕುಗಳನ್ನು ದೊರಕಿಸಿಕೊಡಬೇಕು. ಅಲ್ಲದೆ, ಹಕ್ಕುಗಳನ್ನು ಕಿತ್ತುಕೊಳ್ಳುವಂತಿರಬಾರದು” ಎಂದು ನ್ಯಾಯಮೂರ್ತಿ ಭುಯಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾನೂನು ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನಸ್ಥಿತಿಯನ್ನು ಬೆಳೆಸಿಕೊಳ್ಳುವಂತೆ ನ್ಯಾಯಮೂರ್ತಿ ಭುಯಾನ್ ಕಿವಿಮಾತು ಹೇಳಿದ್ದು, ನ್ಯಾಯಾಂಗದ ನಿರ್ಧಾರಗಳನ್ನು ಪ್ರಶ್ನಿಸುವ ಮತ್ತು ವಿಶ್ಲೇಷಿಸುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

“ಕಾನೂನು ವಿದ್ಯಾರ್ಥಿಗಳಾದ ನಾವು ವಿಮರ್ಶಾತ್ಮಕ ಮನಸ್ಥಿತಿ, ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಸುಪ್ರೀಂ ಕೋರ್ಟ್‌ನ ತೀರ್ಪುಗಳು ಸೇರಿದಂತೆ ಬರುವ ಎಲ್ಲವನ್ನೂ ನಿರ್ಲಕ್ಷಿಸಬಾರದು. ನಾವು ತೀರ್ಪುಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಬೇಕು. ಸಹಜವಾಗಿ, ತೀರ್ಪಿನ ಟೀಕೆ ದೃಢವಾದ ಕಾನೂನು ಆಧಾರದ ಮೇಲೆ ಇರಬೇಕು. ಅಲ್ಲದೆ ಯಾವುದೇ ಉದ್ದೇಶದಿಂದ ಖಂಡಿಸಲು ಸಾಧ್ಯವಿಲ್ಲ. ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ. ಅನೇಕ ತೀರ್ಪುಗಳನ್ನು ನಾವು ವಿಮರ್ಶಾತ್ಮಕವಾಗಿ ಪರೀಕ್ಷಿಸಬೇಕು” ಎಂದು ನ್ಯಾಯಮೂರ್ತಿ ಭುಯಾನ್ ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗುವ ಮುನ್ನವೇ ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಕ್ರಮವನ್ನು 2017ರಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಪ್ರಾರಂಭಿಸಿತು. ಯೋಗಿ ಸರ್ಕಾರ ಇದುವರೆಗೆ ಅನೇಕ ಆರೋಪಿಗಳ ಮನೆಗಳನ್ನು ಕೆಡವಿದೆ. ಇಂತಹ ಹಲವು ಪ್ರಕರಣಗಳಲ್ಲಿ ಹಲವು ಬಾರಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದೆ.

ಕಳೆದ ವರ್ಷದ (2024) ರ ನವೆಂಬರ್‌ 13ರಂದು ಈ ಸಂಬಂಧ ತೀರ್ಪೊಂದನ್ನು ಪ್ರಕಟಿಸಿರುವ ಸುಪ್ರೀಂ ಕೋರ್ಟ್ “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ. ಅಕ್ರಮ ಕಟ್ಟಡಗಳನ್ನು ಕೆಡವುದಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಆದರೆ, ಉತ್ತರ ಪ್ರದೇಶ ಸರ್ಕಾರ ಆರೋಪಿಗಳ ಮನೆ ಕೆಡವುವ ಪದ್ದತಿಯನ್ನು ಮುಂದುವರೆಸಿದೆ. ನಾಗ್ಪುರ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಬಂಧಿಸಲಾಗಿರುವ ಅಲ್ಪಸಂಖ್ಯಾತ ಪ್ರಜಾಸತ್ತಾತ್ಮಕ ಪಕ್ಷದ (MDP) ನಾಯಕ ಫಾಹೀಮ್ ಖಾನ್ ಅವರ ಮನೆಯನ್ನು ಸೋಮವಾರ (ಮಾ.24) ಅಧಿಕಾರಿಗಳು ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿದ್ದಾರೆ.

ಮನೆ ಕೆಡವುದಕ್ಕೆ ‘ಅಕ್ರಮ ನಿರ್ಮಾಣ’ ಎಂಬ ಕಾರಣವನ್ನು ಸರ್ಕಾರ ನೀಡುತ್ತದೆ. ಯಾವುದಾದರು ಪ್ರಕರಣದ ಆರೋಪಿಗಳಾದ ತಕ್ಷಣ ಅವರ ಕಟ್ಟಡ ಅಕ್ರಮವಾಗುವುದು ಹೇಗೆ? ಅಕ್ರಮವಾಗಿದ್ದರೆ ಅಧಿಕಾರಿಗಳು ಮೊದಲೇ ಕಾನೂನು ಪ್ರಕಾರ ತೆರವುಗೊಳಿಸಬೇಕಿತ್ತಲ್ಲವೇ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಸಾರ್ವಜನಿಕ ವಲಯದಲ್ಲಿದೆ.

ನಾಗಪುರ ಹಿಂಸಾಚಾರ ಪ್ರಕರಣ: ಆರೋಪಿ ಫಾಹೀಮ್ ಖಾನ್ ಮನೆ  ಧ್ವಂಸಗೊಳಿಸಿದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...