Homeಚಳವಳಿಯುಪಿಯಲ್ಲಿ ಬುಲ್ಡೋಜರ್ ದಾಳಿ: ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದ ಮಾಜಿ IAS, IPS ಅಧಿಕಾರಿಗಳು

ಯುಪಿಯಲ್ಲಿ ಬುಲ್ಡೋಜರ್ ದಾಳಿ: ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದ ಮಾಜಿ IAS, IPS ಅಧಿಕಾರಿಗಳು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಪ್ರತಿಭಟನಾಕಾರರ ಮೇಲೆ ಯೋಗಿ ಆದಿತ್ಯನಾಥ್ ಸರ್ಕಾರ ನಡೆಸುತ್ತಿರುವ ಬುಲ್ಡೋಜರ್ ಪ್ರಹಾರಗಳ ಬಗ್ಗೆ ಗಮನ ಹರಿಸುವಂತೆ ಮಾಜಿ ನಾಗರಿಕ ಸೇವಾ ಅಧಿಕಾರಿಗಳ ಗುಂಪೊಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣರಿಗೆ ಪತ್ರ ಬರೆದಿದ್ದಾರೆ.

ಅಮಾನತುಗೊಂಡಿಎಉವ ಬಿಜೆಪಿ ವಕ್ತಾರರು ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೀಡಿದ್ದ ಅವಹೇಳನಾಕಾರಿ ಹೇಳಿಕೆಗಳನ್ನು ವಿರೋಧಿಸಿ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿ ಹಿಂಸಾತ್ಮ ರೂಪ ಪಡೆದಿತ್ತು. ಇದಾದ ಮೇಲೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಪ್ರತಿಭಟನೆ ನಡೆಸಿದವರ ಆಸ್ತಿಗಳ ಮೇಲೆ ಬುಲ್ಡೋಜರ್‌ ಪ್ರಹಾರ ನಡೆಸಿತ್ತು.

ಈ ಪ್ರತಿಭಟನಾಕಾರರ ಆತಿಗಳು ಅಕ್ರಮ ಎಂದು ಆರೋಪಿಸಿ ಧ್ವಂಸಗೊಳಿಸಲಾಗಿತ್ತು. ಈ ಬಗ್ಗೆ ಭಾರಿ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಆಸ್ತಿಯನ್ನು ಧ್ವಂಸಗೊಳಿಸಿರುವ ಬಗ್ಗೆ ಗಮನ ಹರಿಸುವಂತೆ ಮಾಜಿ ನಾಗರಿಕ ಸೇವಾ ಅಧಿಕಾರಿಗಳ ಗುಂಪು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ.

ಇದನ್ನೂ ಓದಿ: ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ: ಬುಲ್ಡೋಜರ್‌ಗಳಿಂದ ಮನೆಗಳ ನಾಶಕ್ಕೆ ತೀವ್ರ ವಿರೋಧ

ಜೂನ್ 20 ರಂದು ಬರೆದಿರುವ ಬಹಿರಂಗ ಪತ್ರದಲ್ಲಿ,”ಬುಲ್ಡೋಜರ್ ನ್ಯಾಯ”ವು ದೇಶದಲ್ಲಿ ಕಾನೂನುಬದ್ಧವಾಗಿ ಪ್ರತಿಭಟಿಸಲು ಅಥವಾ ಸರ್ಕಾರವನ್ನು ಟೀಕಿಸಲು ಧೈರ್ಯವಿರುವ ನಾಗರಿಕರಿಗೆ ಕ್ರೂರ ಶಿಕ್ಷೆಯನ್ನು ವಿಧಿಸುವ ಕಲ್ಪನೆಯಾಗಿ ದೇಶದಲ್ಲಿ ರೂಢಿಯಾಗುತ್ತಿದೆ ಎಂದು ಟೀಕಿಸಿದೆ.

“ಕಾನೂನಿನ ನಿಯಮ, ಸರಿಯಾದ ಪ್ರಕ್ರಿಯೆಯ ಕಲ್ಪನೆಯಾದ ’ತಪ್ಪಿತಸ್ಥ ಎಂದು ಸಾಬೀತುಪಡಿಸುವವರೆಗೂ ನಿರಪರಾಧಿ’ ಎಂದು ಪರಿಗಣಿಸುವ ಕಲ್ಪನೆಯನ್ನು ಇಲ್ಲಿ ತಲೆಕೆಳಗಾಗಿ ಮಾಡಲಾಗುತ್ತಿದೆ” ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಜಿಕೆ ಪಿಳ್ಳೈ, ಮಾಜಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಭಾರತೀಯ ಪೊಲೀಸ್ ಸೇವೆಯ ಮಾಜಿ ಅಧಿಕಾರಿಗಳಾದ ಜೂಲಿಯೊ ರಿಬೇರೊ, ಅವಿನಾಶ್ ಮೋಹನಾನೆ, ಮ್ಯಾಕ್ಸ್‌ವೆಲ್ ಪೆರೇರಾ ಮತ್ತು ಎ.ಕೆ ಸಮಂತಾ ಮತ್ತು ಮಾಜಿ ಸಾಮಾಜಿಕ ನ್ಯಾಯ ಕಾರ್ಯದರ್ಶಿ ಅನಿತಾ ಅಗ್ನಿಹೋತ್ರಿ ಸೇರಿದಂತೆ 90 ನಿವೃತ್ತ ಅಧಿಕಾರಿಗಳು ಪತ್ರಕ್ಕೆ ಸಹಿ ಹಾಕಿದ್ದಾರೆ.

ಮೇ 26 ರಂದು ಟೈಮ್ಸ್ ನೌ ಟೆಲಿವಿಷನ್ ಚಾನೆಲ್‌ನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಇದು ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಾಕ್ಷಿಯಾಯಿತು. ಉತ್ತರ ಪ್ರದೇಶವೊಂದರಲ್ಲೇ 10 ಜಿಲ್ಲೆಗಳಿಂದ 415 ಮಂದಿಯನ್ನು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲಾಗಿದೆ.

ಬಿಜೆಪಿಯ ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥರಾಗಿದ್ದ ನವೀನ್ ಜಿಂದಾಲ್ ಅವರು ಜೂನ್ 1 ರಂದು ಪ್ರವಾದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಟ್ವೀಟ್ ಮಾಡಿದ್ದರು. ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದ್ದು, ನವೀನ್ ಜಿಂದಾಲ್ ಅವರನ್ನು ಉಚ್ಚಾಟಿಸಲಾಗಿದೆ.


ಇದನ್ನೂ ಓದಿ: ’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಭ್ರಷ್ಟಾಚಾರದ ಕಾರಣದಿಂದ ಹಲವಾರು ಐಎಎಸ್, ಐಪಿಎಸ್ ಅಧಿಕಾರಿಗಳು ರಾಜೀನಾಮೆ ನೀಡಿದ್ದರು. ಎರಡನೆಯದಾಗಿ ಸುಪ್ರೀಂ ಕೋರ್ಟ್ ಯೋಗಿ ಆದಿತ್ಯನಾಥ್ ಅವರಿಗೆ ಅಕ್ರಮವಾಗಿ ನಿರ್ಮಿಸಿದ ಕಟ್ಟಡ ಮತ್ತು ಅತಿಕ್ರಮಣಕ್ಕೆ ನೀಡಲಾದ ನೋಟಿಸ್‌ಗಳ ಪುರಾವೆಗಳನ್ನು ತೋರಿಸಲು ಆದೇಶಿಸಿತ್ತು. ನಿಮ್ಮ ಮಾಧ್ಯಮಗಳು ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಬಗ್ಗೆಯೇ?

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...