Homeಮುಖಪುಟಬುಲ್ಡೋಜರ್‌ಗಳು ಪರಿಹಾರವಲ್ಲ: ರೈಲ್ವೆ ಇಲಾಖೆಯ ಒಕ್ಕಲೆಬ್ಬಿಸುವಿಕೆ ಕ್ರಮಕ್ಕೆ ಬಾಂಬೆ ಹೈಕೋರ್ಟ್ ಅಸಮಾನಧಾನ

ಬುಲ್ಡೋಜರ್‌ಗಳು ಪರಿಹಾರವಲ್ಲ: ರೈಲ್ವೆ ಇಲಾಖೆಯ ಒಕ್ಕಲೆಬ್ಬಿಸುವಿಕೆ ಕ್ರಮಕ್ಕೆ ಬಾಂಬೆ ಹೈಕೋರ್ಟ್ ಅಸಮಾನಧಾನ

- Advertisement -
- Advertisement -

ಅಕ್ರಮ ಪ್ರವೇಶದ ಆರೋಪದ ಮೇಲೆ ಅಧಿಕಾರಿಗಳು ಜನರನ್ನು ಅತಿಕ್ರಮಣಕಾರರು ಎಂದು ಕರೆಯುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿರುವ ಬಾಂಬೆ ಹೈಕೋರ್ಟ್ ಅವರನ್ನು ತೆರವುಗೊಳಿಸಲು ಬುಲ್ಡೋಜರ್‌ಗಳು ಪರಿಹಾರವಲ್ಲ ಎಂದಿದೆ.

ಜಸ್ಟೀಸ್ ಗೌತಮ್ ಪಟೇಲ್ ಮತ್ತು ಜಸ್ಟೀಸ್ ನೀಲಾ ಗೋಖಲೆ ಅವರಿದ್ದ ಪೀಠವು ಮುಂಬೈನ ಪಶ್ಚಿಮ ರೈಲ್ವೇಯ ಭೂಮಿಯಲ್ಲಿನ 101 ಅಕ್ರಮ ಕಟ್ಟಗಳನ್ನು ನೆಲಸಮಗೊಳಿಸಲು ಅಧಿಕಾರಿಗಳು ಬುಲ್ಡೋಜರ್ ಬಳಿಸಿದ್ದಕ್ಕೆ ಅಸಮಾಧಾ ವ್ಯಕ್ತಪಡಿಸಿದೆ. ಅನಧಿಕೃತ ಒತ್ತುವರಿ ತೆರವು ಕಾಯಿದೆ, 1971ರ ಅಡಿಯಲ್ಲಿ ಯಾವುದೇ ಸಮೀಕ್ಷೆಯಿಲ್ಲದೆ ಮತ್ತು ಸಂಬಂಧಪಟ್ಟವರಿಗೆ ಅಗತ್ಯ ನೋಟಿಸ್‌ ಸಹ ನೀಡದೆ ಒಕ್ಕಲೆಬ್ಬಿಸುತ್ತಿರುವುದು ಸರಿಯಲ್ಲ ಎಂದಿದೆ.

ಸುಪ್ರೀಂ ಕೋರ್ಟ್ ನಿಯಮಾವಳಿಗಳನ್ನು ಉಲ್ಲಂಘಿಸಿ ಇನ್ನು ಮುಂದೆ ಯಾವುದೇ ಧ್ವಂಸ ಕಾರ್ಯಾಚರಣೆ ನಡೆಸದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ ಪೀಠ, ಆಪಾದಿತ ಅತಿಕ್ರಮಣಗಾರರ ಮೇಲೆ ಬೇರೆ ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದೆ. ಅವರನ್ನು ಒಕ್ಕಲೆಬ್ಬಿಸುವುದು ಗಂಭೀರ ಸಮಸ್ಯೆಯಾಗಿದ್ದು, ಕೆಲವೊಮ್ಮೆ ಈ ಸ್ಥಳಾಂತರ ನಮ್ಮ ಊಹೆಗೂ ಮೀರಿದ್ದಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಬುಲ್ಡೋಜರ್‌ಗಳ ಬದಲಾಗಿ ಬೇರೆ ಮಾರ್ಗದಲ್ಲಿ ಜನರನ್ನು ಮನವೊಲಿಸಬೇಕು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಯಾವುದೇ ಪುನರ್ವಸತಿ ಕಲ್ಪಿಸದೆ, ಅವರಿಗೆ ಮನೆ ವ್ಯವಸ್ಥೆ ಮಾಡದೇ ಏಕಾಏಕಿ ಮನೆ ಕೆಡವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ.

ಏಕ್ತಾ ವೆಲ್ಫೇರ್ ಟ್ರಸ್ಟ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲವು ತಕ್ಷಣವೇ ಒಕ್ಕಲೆಬ್ಬಿಸುವಿಕೆ ಕಾರ್ಯಾಚರಣೆ ನಿಲ್ಲಿಸಬೇಕೆಂದು ಆಗ್ರಹಿಸಿದೆ. ಅಲ್ಲದೆ ಮನೆ ಕಡೆವಿದ ನಂತರ ತ್ಯಾಜ್ಯಗಳನ್ನು ತಗ್ಗು ಪ್ರದೇಶಗಳಿಗೆ ಸುರಿಯವುದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...