Homeಮುಖಪುಟ’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

- Advertisement -
- Advertisement -

ಮುಸ್ಲಿಂ ಮಹಿಳೆಯರನ್ನು ಆನ್‌ಲೈನ್‌ನಲ್ಲಿ ಹರಾಜು ಹಾಕಿದ್ದ ’ಬುಲ್ಲಿ ಬಾಯ್’ ಆಪ್ ಪ್ರಕರಣದ ಪ್ರಮುಖ ಸಂಚುಕೋರನನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

“ದೆಹಲಿ ಪೊಲೀಸ್ ವಿಶೇಷ ಘಟಕದ ಐಎಫ್‌ಎಸ್‌ಒ ತಂಡವು ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ಬುಲ್ಲಿ ಬಾಯ್‌ ಆಪ್ ರಚನೆ ಮಾಡಿದ್ದ ಸೃಷ್ಟಿಕರ್ತ, ಸಂಚುಕೋರ ನೀರಜ್ ಬಿಷ್ಣೋಯ್ ಎಂಬುವವರನ್ನು ಅಸ್ಸಾಂನಲ್ಲಿ ಬಂಧಿಸಿದೆ. ಈ ಅಪ್ಲಿಕೇಶನ್‌ನ ಮುಖ್ಯ ಟ್ವಿಟರ್ ಖಾತೆದಾರ ಇತನೇ” ಎಂದು IFSO ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.

21 ವರ್ಷದ ನೀರಜ್ ಬಿಷ್ಣೋಯ್ ಭೋಪಾಲ್ ಮೂಲದ ಶಿಕ್ಷಣ ಸಂಸ್ಥೆಯಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯನ್ನು ಅಸ್ಸಾಂನ ಜೋರ್ಹತ್‌ನಲ್ಲಿರುವ ಅವರ ಸ್ವಗ್ರಾಮದಿಂದ ಬಂಧಿಸಲಾಗಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಬುಲ್ಲಿ ಬಾಯ್‌’ ವಿಕೃತಿ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ದನಿಯೆತ್ತಿರುವ ಪ್ರಮುಖ ಮುಸ್ಲಿಂ ಮಹಿಳಾ ಪತ್ರಕರ್ತರು, ವಕೀಲರು ಮತ್ತು ಹೋರಾಟಗಾರ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿದ್ದ ಈ ಆಪ್‌ ಪ್ರಕರಣದಲ್ಲಿ ಇದು ನಾಲ್ಕನೇ ಬಂಧನವಾಗಿದೆ.

ಮುಂಬೈ ಪೊಲೀಸರ ಸೈಬರ್ ಸೆಲ್ ಈ ಹಿಂದೆ ಮೂವರನ್ನು ಬಂಧಿಸಿತ್ತು. 21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮಾಸ್ಟರ್ ಮೈಂಡ್ ಶ್ವೇತಾ ಸಿಂಗ್ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಪೊಲೀಸರು ಐಪಿಸಿ ಮತ್ತು ಐಟಿ ಕಾಯ್ದೆಯ ಹಲವು ಸೆಕ್ಷನ್ ಗಳ ಆಧಾರದಲ್ಲಿ ಬುಲ್ಲಿ ಆಪ್ ತಯಾರಕರು, ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡವರು, ಮುಂತಾದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಅಪ್ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆಪ್ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read