Homeಮುಖಪುಟಮುಸ್ಲಿಂ ಮಹಿಳೆಯರಿಗೆ ಆನ್‌ಲೈನ್‌ ಕಿರುಕುಳ ಆರೋಪ: ಬುಲ್ಲಿ ಬಾಯ್, ಸುಲ್ಲಿ ಡೀಲ್ಸ್‌ ಆರೋಪಿಗಳಿಗೆ ಜಾಮೀನು

ಮುಸ್ಲಿಂ ಮಹಿಳೆಯರಿಗೆ ಆನ್‌ಲೈನ್‌ ಕಿರುಕುಳ ಆರೋಪ: ಬುಲ್ಲಿ ಬಾಯ್, ಸುಲ್ಲಿ ಡೀಲ್ಸ್‌ ಆರೋಪಿಗಳಿಗೆ ಜಾಮೀನು

ಆರೋಪಿಗಳು ಮೊದಲ ಬಾರಿಗೆ ಅಪರಾಧವೆಸಗಿದ್ದಾರೆ. ನಿರಂತರ ಸೆರೆವಾಸವು ಅವರ ಒಟ್ಟಾರೆ ಯೋಗಕ್ಷೇಮಕ್ಕೆ ಹಾನಿಕಾರಕವಾಗಿದೆ ಎಂದು ನ್ಯಾಯಾಲಯ ಪರಿಗಣಿಸಿದೆ.

- Advertisement -
- Advertisement -

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚಾರಿತ್ರ್ಯ ಹರಣ ಮಾಡಲು ಸೃಷ್ಟಿಸಲಾಗಿದ್ದ “ಬುಲ್ಲಿ ಬಾಯಿ” ಮತ್ತು “ಸುಲ್ಲಿ ಡೀಲ್ಸ್” ಆಪ್‌ ತಯಾರಕ ಆರೋಪಿಗಳಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬುಲ್ಲಿ ಬಾಯ್‌ ಅಪ್ಲಿಕೇಶನ್ ರಚಿಸಿದ ನೀರಜ್ ಬಿಷ್ಣೋಯ್ ಎಂಬಾತನನ್ನು ಪ್ರಮುಖ ಆರೋಪಿಯಾಗಿ ಗುರುತಿಸಿ ಜನವರಿ 6ರಂದು ಬಂಧಿಸಲಾಯಿತು. ಸುಲ್ಲಿ ಡೀಲ್ಸ್ ಅಪ್ಲಿಕೇಶನ್‌ನ ಸೃಷ್ಟಿಕರ್ತ ಓಂಕಾರೇಶ್ವರ್ ಠಾಕೂರ್ ಎಂದು ಗುರುತಿಸಿ ಜನವರಿ 8 ರಂದು ದೆಹಲಿ ಪೊಲೀಸರು ಬಂಧಿಸಿದ್ದರು. ಅವರಿಬ್ಬರಿಗೂ ಜಾಮೀನು ನೀಡಿರುವ ನ್ಯಾಯಾಲಯ ‘ಆರೋಪಿಗಳು ಮೊದಲ ಬಾರಿಗೆ ಅಪರಾಧವೆಸಗಿದ್ದಾರೆ. ನಿರಂತರ ಸೆರೆವಾಸವು ಅವರ ಒಟ್ಟಾರೆ ಯೋಗಕ್ಷೇಮಕ್ಕೆ ಹಾನಿಕಾರಕವಾಗಿದೆ’ ಎಂದು ಹೇಳಿದೆ.

ಬುಲ್ಲಿ ಬಾಯ್ ಆ್ಯಪ್ ಅನ್ನು ನವೆಂಬರ್ 2021 ರಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು ಡಿಸೆಂಬರ್‌ನಲ್ಲಿ ನವೀಕರಿಸಲಾಗಿದೆ ಎಂದು ವಿಚಾರಣೆಯ ಸಮಯದಲ್ಲಿ ಬಿಷ್ಣೋಯ್ ಬಹಿರಂಗಪಡಿಸಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆ್ಯಪ್ ಬಗ್ಗೆ ಮಾತನಾಡಲು ಅವನು ಟ್ವಿಟರ್ ಖಾತೆಯನ್ನು ಸಹ ರಚಿಸಿದ್ದ ಎಂದು ಆರೋಪಿಸಲಾಗಿದೆ.

ಪತ್ರಕರ್ತರು, ಸಮಾಜ ಸೇವಕರು, ವಿದ್ಯಾರ್ಥಿಗಳು, ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ ಹಲವಾರು ಮುಸ್ಲಿಂ ಮಹಿಳೆಯರ 100ಕ್ಕೂ ಹೆಚ್ಚು ಚಿತ್ರಗಳನ್ನು ಬುಲ್ಲಿ ಬಾಯ್‌ ಅಪ್ಲಿಕೇಷನ್‌ನಲ್ಲಿ ಪೋಸ್ಟ್‌‌ ಮಾಡಿ ಅವಹೇಳನಕಾರಿ ಬರೆದು ಹರಾಜಿಗಿಡಲಾಗಿತ್ತು. ಈ ವಿಷಯದ ಕುರಿತು ದೂರು ದಾಖಲಾದ ನಂತರ ಆಪ್‌ಗಳನ್ನು ನಿರ್ಬಂಧಿಸಲಾಗಿತ್ತು. ಈ ಪ್ರಕರಣವನ್ನು ಮುಂಬೈ ಸೈಬರ್ ಸೆಲ್ ಡಿಸಿಪಿ ರಶ್ಮಿ ಅವರು ತನಿಖೆಯ ನೇತೃತ್ವ ವಹಿಸಿ ಬೇಧಿಸಿದ್ದರು. ಈಗ ಅವರನ್ನು ಸಹ ಸೈಬ್ ಸೆಲ್ ವಿಭಾಗದಿಂದ ವರ್ಗಾವಣೆ ಮಾಡಲಾಗಿದೆ.

ಈಗ ಈ ಸೂಕ್ಷ್ಮ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಸಾಕ್ಷ್ಯ ನಾಶ ಮಾಡಬಾರದು, ಅನುಮತಿಯಿಲ್ಲದೆ ವಿದೇಶಕ್ಕೆ ತೆರಳಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.


ಇದನ್ನೂ ಓದಿ; ’ಬುಲ್ಲಿ ಬಾಯ್’ – ಗುಂಪುದಾಳಿ ಮನಸ್ಥಿತಿ ವರ್ಚುವಲ್ ಸ್ಪೇಸ್‌ನೊಳಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...