Homeಮುಖಪುಟತಮ್ಮ ಜೀವನದಲ್ಲಿ ಎಂದೂ ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಮಾಡಿಲ್ಲ ಎಂದ ಉದ್ಯಮಿ ರಾಜ್ ಕುಂದ್ರಾ

ತಮ್ಮ ಜೀವನದಲ್ಲಿ ಎಂದೂ ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಮಾಡಿಲ್ಲ ಎಂದ ಉದ್ಯಮಿ ರಾಜ್ ಕುಂದ್ರಾ

- Advertisement -
- Advertisement -

’ತಮ್ಮ ಜೀವನದಲ್ಲಿ ಎಂದೂ ಕೂಡ ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆಯಲ್ಲಿ ಭಾಗಿಯಾಗಿಲ್ಲ ಎಂದ ಉದ್ಯಮಿ ರಾಜ್ ಕುಂದ್ರಾ ಹೇಳಿದ್ದಾರೆ. ಈ ವರ್ಷದ ಜುಲೈನಲ್ಲಿ ಅಶ್ಲೀಲ ಚಿತ್ರಗಳನ್ನು ತಯಾರಿಸುವುದು ಮತ್ತು ಮೊಬೈಲ್ ಆ್ಯಪ್‌ಗಳ ಮೂಲಕ ಅದನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಬಂಧನಕ್ಕೆ ಒಳಗಾಗಿದ್ದರು.

ಪ್ರಕರಣದಲ್ಲಿ ಜಾಮೀನು ಪಡೆದಿರುವ ಉದ್ಯಮಿ ರಾಜ್ ಕುಂದ್ರಾ ಸೋಮವಾರ ಈ ಕುರಿತು ಮಾತನಾಡಿದ್ದಾರೆ. ತಮ್ಮ ಜೀವನದಲ್ಲಿ ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ವಿತರಣೆಯಲ್ಲಿ ಭಾಗಿಯಾಗಿಲ್ಲ. ಇದು ಒಂದು ಷಡ್ಯಂತ್ರ. ಮಾಧ್ಯಮಗಳು ಈಗಾಗಲೇ ನನ್ನನ್ನು ‘ತಪ್ಪಿತಸ್ಥ’ ಎಂದು ಘೋಷಿಸಿವೆ ಎಂದು ಹೇಳಿಕೊಂಡಿದ್ದಾರೆ.

“ನನ್ನ ಮೌನವನ್ನು ದೌರ್ಬಲ್ಯ ಎಂದುಕೊಂಡು ಹಲವು ಆಧಾರವಿಲ್ಲದ, ತಪ್ಪುದಾರಿಗೆಳೆಯುವ ಮತ್ತು ಬೇಜವಾಬ್ದಾರಿ ಹೇಳಿಕೆಗಳು ಮತ್ತು ಲೇಖನಗಳು ಬರುತ್ತಿವೆ. ಹೀಗಾಗಿ ನಾನು ಮಾತನಾಡುತ್ತಿದ್ದೇನೆ. ನಾನು ಎಂದಿಗೂ ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆಯಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ಮೂಲಕ ನನ್ನ ಮಾತು ಪ್ರಾರಂಭಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಚೆನ್ನೈ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

“ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಈಗ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಹೆಚ್ಚಿನ ವಿಷಯಗಳನ್ನು ಸ್ಪಷ್ಟಪಡಿಸಲಾರೆ. ಆದರೆ ನಾನು ವಿಚಾರಣೆಯನ್ನು ಎದುರಿಸಲು ಸಿದ್ಧನಿದ್ದೇನೆ. ನ್ಯಾಯಾಂಗದಲ್ಲಿ ನನಗೆ ಸಂಪೂರ್ಣ ನಂಬಿಕೆಯಿದೆ. ಅಲ್ಲಿ ಸತ್ಯ ಗೆಲ್ಲುತ್ತದೆ” ಎಂದಿದ್ದಾರೆ.

ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಹಾಟ್‌ಶಾಟ್‌ ಸೇರಿದಂತೆ ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಕುಂದ್ರಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಲಾಗಿತ್ತು.

ಎಫ್‌ಐಆರ್‌ನಲ್ಲಿ ನಟಿಯರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಅವರನ್ನು ಸಹ ಆರೋಪಿಗಳೆಂದು ಹೆಸರಿಸಲಾಗಿದೆ. ರಾಜ್ ಕುಂದ್ರಾಗೆ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕಳೆದ ವಾರ ಸುಪ್ರೀಂ ಕೋರ್ಟ್ ಬಂಧನದಿಂದ ರಕ್ಷಣೆ ನೀಡಿದೆ.


ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ...

0
ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ...