Homeಮುಖಪುಟಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR

ಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR

- Advertisement -
- Advertisement -

ಪ್ರದೀಪ್ ಎಂಬ ಉದ್ಯಮಿಯೊಬ್ಬರು ಹಣಕಾಸಿನ ವಂಚನೆಯಾಗಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸರು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR ದಾಖಲಿಸಿದ್ದಾರೆ.

ಮೃತ ಪ್ರದೀಪ್ ಪತ್ನಿ ನೀಡಿದ ದೂರಿನ ಅನ್ವಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಅರವಿಂದ ಲಿಂಬಾವಳಿ ಸೇರಿದಂತೆ ಡೆತ್‌ನೋಟ್‌ನಲ್ಲಿ ಹೆಸರಿದ್ದ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಡಾ.ಜಯರಾಮ್ ರೆಡ್ಡಿ, ರಾಘವ ಭಟ್​ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರೆಸಾರ್ಟ್ ನಿರ್ಮಾಣಕ್ಕೆ ಹೂಡಿಕೆ ಮಾಡಿದ್ದ ಹಣವನ್ನು ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿ, ಇವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ 6 ಜನರ ಹೆಸರು ಬರೆದಿಟ್ಟು ಉದ್ಯಮಿಯೊಬ್ಬರು ಕಗ್ಗಲಿಪುರ ಬಳಿಯ ನೆಟ್ಟಿಗೆರೆ ಗ್ರಾಮದ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೈಸೂರು ನಿವಾಸಿ ಪ್ರದೀಪ್ (47) ಎಂಬ ಉದ್ಯಮಿಯೊಬ್ಬರು ಜನವರಿ 1 ರ ಭಾನುವಾರದಂದು ಕಾರಿನಲ್ಲಿ ಕುಳಿತು ತಮ್ಮ ತಲೆಗೆ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾರೆ. ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಶಾಸಕ ಅರವಿಂದ ಲಿಂಬಾವಳಿ ಸಹಿತ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಡಾ.ಜಯರಾಮ್ ರೆಡ್ಡಿ, ರಾಘವ ಭಟ್​ ಎಂಬವರ ಹೆಸರಿನ ಜೊತೆಗೆ ಅವರ ಮೊಬೈಲ್ ಸಂಖ್ಯೆಯನ್ನು ಸಹ ನಮೂದಿಸಲಾಗಿದೆ.

“ಈ ಕೆಳಕಂಡ ವ್ಯಕ್ತಿಗಳ ಕಾರಣದಿಂದಾಗಿ ನಾನು ಈ ಅತಿಯಾದ ನಿರ್ಧಾರಕ್ಕೆ ಬರುತ್ತಿದ್ದೇನೆ. ನನ್ನ ಸಾವಿನ ನಂತರ ಈ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ನನ್ನ ಸಾವಿಗೆ ನ್ಯಾಯ ದೊರಕಿಸಿಕೊಡಿ. ಕೊನೆಯದಾಗಿ ನನ್ನ ಕುಟುಂಬದ ವ್ಯಕ್ತಿಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಐವರು ಸ್ನೇಹಿತರ ಜೊತೆ ಸೇರಿ ರೆಸಾರ್ಟ್ ನಿರ್ಮಾಣಕ್ಕೆ ಪ್ರದೀಪ್ ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಆದರೆ ಹಣವನ್ನು ವಾಪಸ್ ಮಾಡದೆ ಆ ಸ್ನೇಹಿತರು ಮೋಸ ಮಾಡಿದ್ದರು ಎಂದು ಪ್ರದೀಪ್ ಆರೋಪಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಮಧ್ಯಸ್ಥಿಕೆ ವಹಿಸಿದ್ದ ಬೆಂಗಳೂರಿನ ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ ಅವರು ಸಹ ನನಗೆ ಮೋಸ ಮಾಡಿದ್ದಾರೆ. ಅವರಿಗೆ ಅರವಿಂದ್ ಲಿಂಬಾವಳಿ ಸಹಕರಿಸಿದ್ದಾರೆ ಎಂದು ಪ್ರದೀಪ್ ದೂರಿದ್ದಾರೆ.

ಮಧ್ಯಸ್ಥಿಕೆ ವಹಿಸಿದ್ದ ಲಿಂಬಾವಳಿಯವರು ಕೆಲವು ತಿಂಗಳು ಕಾಲವಕಾಶ ಪಡೆದು ಪ್ರತಿ ತಿಂಗಳು 10 ಲಕ್ಷ ರೂ ನೀಡಲು ಸೂಚಿಸಿದ್ದರು. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು. ಸಾಲ ತೀರಿಸಲು ಮನೆ ಮಾರಿದ್ದೆ. ಮತ್ತೆ ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ ಸ್ನೇಹಿತರು ಕೇವಲ ಒಂದು ತಿಂಗಳು ಮಾತ್ರ ಪಾವತಿಸಿ, ಬಳಿಕ ಹಣ ನೀಡದೇ ಮತ್ತೆ ಮೋಸ ಮಾಡಿದ್ದಾರೆ. ಅರವಿಂದ ನಿಂಬಾವಳಿಯವರು ಅವರ ಪರ ವಹಿಸಿದ್ದಾರೆ ಎಂದು ಡೆತ್​ನೋಟ್​ನಲ್ಲಿ ಆರೋಪಿಸಲಾಗಿದೆ.

ಉದ್ಯಮಿಯ ಆತ್ಮಹತ್ಯೆ ವಿಷಯ ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದೆ. “ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರ ರಕ್ಷಣೆ ಮಾಡಲಾಯಿತು. ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳ ರಕ್ಷಣೆ ಮಾಡಲಾಗಿದೆ. ಈಗ ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ರಕ್ಷಣೆ ಮಾಡಲು ಸಿಎಂ ಬೊಮ್ಮಾಯಿ ಮುಂದಾಗಿದ್ದಾರೆ. ಅವರು CCM (“ಕ್ರಿಮಿನಲ್ಸ್ ಕೇರ್‌ಟೇಕರ್ ಮಿನಿಸ್ಟರ್”) ಆಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

ಜೀವ ಅಮೂಲ್ಯವಾಗಿದೆ ಮತ್ತು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಖಿನ್ನತೆ ಎನಿಸಿದರೆ ದಯವಿಟ್ಟು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮತ್ತು ಭಾವನಾತ್ಮಕ ಬೆಂಬಲ ಪಡೆಯಿರಿ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...