Homeಕರ್ನಾಟಕಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

ಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಅಂತಹ ಹೆಚ್ಚಿನ ಕುತೂಹಲವಿರಲಿಲ್ಲ. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಸುಧಾಕರ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.. ಕ್ಷೇತ್ರದಲ್ಲಿ ಈಗಾಗಲೇ ಮೂರು ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಅಭ್ಯರ್ಥಿಗಳ ಪರ ಮತಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಮೂರು ಪಕ್ಷಗಳು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಪಡೆಯುವ ಅಭ್ಯರ್ಥಿ ಗೆಲುವು ಖಚಿತ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಂದಿ ಆಂಜಿನಪ್ಪ, ಜೆಡಿಎಸ್ ಪಕ್ಷದಿಂದ ಯುವ ಮುಖಂಡ ರಾಧಾಕೃಷ್ಣ, ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಸ್ಪರ್ಧೆಗಿಳಿದಿದ್ದಾರೆ. ಚಿಕ್ಕಬಳ್ಳಾಪುರ ಕೇಂದ್ರ ಮತ್ತು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಬಂದಿವೆ. ಈ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಾ.ಸುಧಾಕರ್ ಗೆಲುವು ಸಾಧಿಸಿದ್ದು. 2013ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವ ಬಳಸಿ ಸುಧಾಕರ್ ಟಿಕೆಟ್ ಗಿಟ್ಟಿಸಿಕೊಂಡಿದ್ದರಲ್ಲದೆ ಗೆದ್ದೂ ಬಂದಿದ್ದರು. 2018ರ ಹೊತ್ತಿಗೆ ಅವರು ಸಿದ್ದರಾಮಯ್ಯ ‘ಆಪ್ತ’ರಾಗಿ ಬದಲಾಗಿದ್ದರು. ಬದಲಾದ ಕಾಲಘಟ್ಟದಲ್ಲಿ ಸುಧಾಕರ್ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಮತಭಿಕ್ಷೆಗೆ ಬಂದಿದ್ದಾರೆ. ಸುಧಾಕರ್‍ರ ಕ್ಷಣಕ್ಕೊಂದು ಬಣ್ಣ ಬದಲಿಸುವ ಊಸರವಳ್ಳಿ ನಡವಳಿಕೆಯು ಅವಕಾಶವಾದಿಯೆಂಬುದನ್ನು ಸಾಬೀತುಪಡಿಸಿದೆ. ಆದರೆ, ಕ್ಷೇತ್ರದಲ್ಲೂ ಅದೇ ಅಭಿಪ್ರಾಯ ಇದೆಯೆಂದು ಹೇಳಲಾಗದು. ಈ ಅವಧಿಯಲ್ಲಿ ತನ್ನ ಅಗ್ರೆಸಿವ್ ರಾಜಕಾರಣದಿಂದ ತನ್ನದೇ ಪಡೆಯನ್ನು ಕಟ್ಟಿಕೊಂಡಿದ್ದಾರೆ.

ಸುಧಾಕರ್‌ಗಿರುವ ಪ್ಲಸ್ ಪಾಯಿಂಟ್ಸ್

ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಹೋಬಳಿಗಳಿವೆ. ಅವುಗಳೆಂದರೆ ನಂದಿ, ಮಂಚೇನಹಳ್ಳಿ, ಮಂಡಿಕಲ್ಲು ಮತ್ತು ಕಸಬಾ. ಈ ನಾಲ್ಕು ಹೋಬಳಿಗಳ ಪೈಕಿ ಸುಧಾಕರ್ ಅವರಿಗೆ ಕಸಬಾ, ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಟೌನ್‍ನಲ್ಲಿ ಲೀಡ್ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ಮಂಚೇನಹಳ್ಳಿ ಹೋಬಳಿಯನ್ನು ತಾಲೂಕನ್ನಾಗಿ ಮಾಡುವ ಆದೇಶ ನೀಡಿರುವುದು ಸುಧಾಕರ್‍ಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗುತ್ತದಾ ಎಂಬುದನ್ನು ನೋಡಬೇಕು. ಜೊತೆಗೆ ಬಿಜೆಪಿ ಮುಖಂಡ ಪಿ.ಸಿ.ಮೋಹನ್ ಸುಧಾಕರ್ ಪರ ಪ್ರಚಾರ ಮಾಡುತ್ತಿರುವುದರಿಂದ ಬಲಜಿಗರ ಮತಗಳು ಇತ್ತ ವಾಲಬಹುದು.

ಸುಧಾಕರ್ ಬೆಂಬಲಿಗ ಕಾಂಗ್ರೆಸ್‍ನ ಪ್ರಕಾಶ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ನೀಡಿ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸೆಳೆಯಲು ನೋಡಿದ್ದರು. ಆದರೆ, ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅವರ ಕೈಲಿ ಆಗಲಿಲ್ಲ. ಬದಲಿಗೆ ಬಂಡಾಯ ಅಭ್ಯರ್ಥಿ ಚಿನ್ನಿ ಜಿ.ಪಂ ಅಧ್ಯಕ್ಷರಾಗಿಬಿಟ್ಟರು. ಈ ಹಿನ್ನೆಲೆಯಲ್ಲಿ ಪ್ರಕಾಶ್‍ಗೆ ಸ್ಥಾನ ಸಿಕ್ಕರೆ ಸುಧಾಕರ್‍ರನ್ನು ಬಿಡುವ ಸಾಧ್ಯತೆಯಿದ್ದ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮರಳುಕುಂಟೆ ಕೃಷ್ಣಮೂರ್ತಿ ಈಗ ಡಾ.ಸುಧಾಕರ್ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಾಗ ಸುಧಾಕರ್ 82 ಸಾವಿರ ಮತ ಪಡೆದಿದ್ದರು. ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ 50 ಸಾವಿರ ಮತ ಗಳಿಸಿದ್ದರು. ಅಂದರೆ ಸುಧಾಕರ್ 30 ಸಾವಿರ ಓಟುಗಳ ಅಂತರದಿಂದ ವಿಜಯ ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಕೇವಲ 5 ಸಾವಿರ ಮತ ಪಡೆಯಲು ಸಾಧ್ಯವಾಗಿತ್ತು. ಆಚೆಗಿನ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತ ಪಡೆದಿದ್ದರು. ಹೀಗಾಗಿ ಬಿಜೆಪಿಯ ಸಾಂಪ್ರದಾಯಿಕ ಮತಗಳು ಎಂಬುದು ಈ ಕ್ಷೇತ್ರದಲ್ಲಿಲ್ಲ. ಆದ್ದರಿಂದಲೇ ಸುಧಾಕರ್ ತಿಣುಕಾಡುತ್ತಿದ್ದಾರೆ. ಈಗ ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ ಸುಧಾಕರ್ ತನ್ನ ಸಾಯಿಕೃಷ್ಣ ಟ್ರಸ್ಟ್ ಮೂಲಕ ಮನೆಮನೆಗೂ ಟಿವಿ, ಕುಕ್ಕರ್, ಮಿಕ್ಸಿ, ಮಹಿಳೆಯರಿಗೆ ಸೀರೆ ಕೊಟ್ಟಿರುವುದಲ್ಲದೆ ಜನರಿಗೆ ಸಾಲವನ್ನೂ ಕೊಡಿಸಿದ್ದಾರೆ. ಇವೆಲ್ಲವನ್ನೂ ‘ಸರಿಯಾಗಿ’ ತಲುಪಿಸಲು ಅವರು ಸೂಚಿಸಿರುವ ಆಡಿಯೋ ಎಲ್ಲೆಡೆ ಓಡಾಡುತ್ತಿದೆ.

ಆದರೆ ಕ್ಷೇತ್ರದಲ್ಲಿ ಸುತ್ತಾಡಿ ಜನರನ್ನು ಮಾತನಾಡಿಸಿದರೆ ಸುಧಾಕರ್ ಬಗ್ಗೆ ಅಷ್ಟೊಂದು ಒಲವು ವ್ಯಕ್ತಪಡಿಸುತ್ತಿಲ್ಲ. ಸುಧಾಕರ್ ಅಭಿವೃದ್ಧಿ ಕೆಲಸಗಳು ಮಾಡಿರುವ ಕುರಿತು ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಜೊತೆಗೆ ಸುಧಾಕರ್ ಸಮಯಸಾಧಕ. ವಿಶ್ವಾಸಕ್ಕೆ ಅರ್ಹನಲ್ಲದ ವ್ಯಕ್ತಿ. ಗಿಮಿಕ್ ಮಾಡುವುದರಲ್ಲಿ ಎತ್ತಿದ ಕೈ. ಸುಧಾಕರ್ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನಪಟ್ಟಿಲ್ಲ. ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡು 7 ವರ್ಷವಾಯಿತು. ಇದುವರೆಗೂ ಜಿಲ್ಲೆಗೆ ನೀರು ತರಲು ಸಾಧ್ಯವಾಗಿಲ್ಲ. ನೀರಾವರಿಗೆ ಸೌಲಭ್ಯ ಕಲ್ಪಿಸಿಲ್ಲ. ಒಂದೇ ಒಂದು ಇಂಡಸ್ಟ್ರಿ ತಂದಿಲ್ಲ. ಎಚ್.ಎನ್. ವ್ಯಾಲಿ ಮೂಲಕ ಕುಡಿಯುವ ನೀರು ತರುವ ಭರವಸೆ ನೀಡಿದ ಸುಧಾಕರ್ ಅದನ್ನು ಕೊಡಲು ಸಾಧ್ಯವಾಗಿಲ್ಲ ಎಂಬುದು ಜೆಡಿಎಸ್ ಸ್ಥಳೀಯ ಮುಖಂಡರ ಆರೋಪ.

ಸದ್ಯಕ್ಕೆ ಜೆಡಿಎಸ್ ನಿಂದ ಕೆ.ಪಿ.ಬಚ್ಚೇಗೌಡ ಮತ್ತು ಯುವ ಮುಖಂಡ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಹಣವಿರುವ ಕುಳ. ಎಷ್ಟು ಬೇಕಾದರೂ ಖರ್ಚು ಮಾಡಬಲ್ಲ ಸಾಮಥ್ರ್ಯವಿರುವ ವ್ಯಕ್ತಿ. ಆದರೆ ಕಣದಲ್ಲಿ ಯಾರು ಉಳಿಯುತ್ತಾರೆಂಬುದರ ಮೇಲೆ ಮತಗಳು ಬೀಳಲಿವೆ. ಇನ್ನು ಕಾಂಗ್ರೆಸ್ ನಂದಿ ಅಂಜನಪ್ಪ ಅವರನ್ನು ಕಣಕ್ಕಿಳಿಸಿದೆ. ಮೂವರು ಅಭ್ಯರ್ಥಿಗಳು ಒಕ್ಕಲಿಗರಾಗಿರುವುದರಿಂದ ಒಕ್ಕಲಿಗ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಕಾಂಗ್ರೆಸ್ ತನ್ನ ಸಾಂಪ್ರದಾಯಕ ಮತಗಳನ್ನು ನೆಚ್ಚಿಕೊಂಡಿದೆ. ಕುರುಬರ ಮತಗಳು ಕಾಂಗ್ರೆಸ್‍ಗೆ ಬೀಳಲಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಮತಗಳು ಯಾರಿಗೆ ಬೀಳಲಿವೆ ಎಂಬುದರ ಮೇಲೆ ಫಲಿತಾಂಶ ನಿಶ್ಚಯವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...