Homeರಾಜಕೀಯಉಪಚುನಾವಣೆ: 5 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಹೀನಾಯ ಸೋಲು - ಗೆಲುವಿನ ನಗೆ ಬೀರಿದ TMC, RJD,...

ಉಪಚುನಾವಣೆ: 5 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಹೀನಾಯ ಸೋಲು – ಗೆಲುವಿನ ನಗೆ ಬೀರಿದ TMC, RJD, ಕಾಂಗ್ರೆಸ್

- Advertisement -
- Advertisement -

ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರ ಮತ್ತು ಚತ್ತೀಸ್‌ಘಡ ರಾಜ್ಯಗಳಲ್ಲಿನ ನಾಲ್ಕು ವಿಧಾನಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಐದು ಕಡೆಗಳಲ್ಲಿಯೂ ಬಿಜೆಪಿ ಹೀನಾಯ ಸೋಲು ಕಂಡಿದೆ.

ಪಶ್ಚಿಮ ಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರ ಎರಡೂ ಕಡೆ ಟಿಎಂಸಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಉತ್ತರ ಮತ್ತು ಚತ್ತೀಸ್‌ಘಡದ ಖೈರಾಘರ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಬಿಹಾರದ ಬೋಛಾಹ ವಿಧಾನಸಭಾ ಕ್ಷೇತ್ರದಲ್ಲಿ ಆರ್‌ಜೆಡಿ ಅಭ್ಯರ್ಥಿ ಜಯಗಳಿಸಿದ್ದಾರೆ.

ಅಸಾನ್ಸೋಲ್ ಲೋಕಸಭಾ ಕ್ಷೇತ್ರ

ಪಶ್ಚಿಮ ಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿತ್ತು. 2019ರ ಚುನಾವಣೆಯಲ್ಲಿ ಬಿಜೆಪಿಯಿಂದ ಬಬುಲ್ ಸುಪ್ರಿಯೋ ಗೆಲುವು ಸಾಧಿಸಿದ್ದರು. ಆದರೆ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯದಿಂದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದು ಅವರು ಟಿಎಂಸಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಹಾಗಾಗಿ ತೆರವಾದ ಸ್ಥಾನಕ್ಕೆ ಟಿಎಂಸಿಯು ಹಿರಿಯ ನಾಯಕ ಶತ್ರುಘ್ನ ಸಿನ್ಹರನ್ನು ಕಣಕ್ಕಿಳಿಸಿತ್ತು. ಅವರು ಬಿಜೆಪಿ ಅಭ್ಯರ್ಥಿ ಅಗ್ನಿಮಿತ್ರ ಪೌಲ್ ವಿರುದ್ದ 1.5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಟಿಎಂಸಿ ಜಯಗಳಿಸಿದೆ.

ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರ

ಪಶ್ಚಿಮ ಬಂಗಾಳದ ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯ ಬಬುಲ್ ಸುಪ್ರಿಯೋ ಜಯಗಳಿಸಿದ್ದಾರೆ. ಸಚಿವರಾಗಿದ್ದ ಸುಬ್ರತ ಮುಖರ್ಜಿಯವರ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಇಲ್ಲಿ ಬಿಜಪಿಯು ಖೆಯಾ ಘೋಷ್ ಎಂಬುವವರನ್ನು ಕಣಕ್ಕಿಳಿಸಿತ್ತು. ಆದರೆ ಅವರು ಸೋಲನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಖೈರಾಘರ್‌ ವಿಧಾನಸಭಾ ಕ್ಷೇತ್ರ

ಚತ್ತೀಸ್‌ಘಡದ ಖೈರಾಘರ್‌ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಜನತ ಕಾಂಗ್ರೆಸ್‌ನ ದೇವ್ರತ್ ಸಿಂಗ್ ಎಂಬುವವರು ನಿಧನರಾಗಿದ್ದರು. ಹಾಗಾಗಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಶೋದ ನಿಲಂಬರ್ ವರ್ಮಾರವರು 20,000 ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ.

ಕೊಲ್ಲಾಪುರ ಉತ್ತರ

ಮಹಾರಾಷ್ಟ್ರದ ಕೊಲ್ಲಾಪುರ ಉತ್ತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಶ್ರೀ ಜಾಧವ್‌ರವರು ಬಿಜೆಪಿಯ ಸತ್ಯಜಿತ್ ಕದಮ್ ವಿರುದ್ಧ 18,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಬೋಛಾಹ ವಿಧಾನಸಭಾ ಕ್ಷೇತ್ರ

ಬಿಹಾರದ ಬೋಛಾಹ ವಿಧಾನಸಭಾ ಕ್ಷೇತ್ರವು ಎಸ್‌ಸಿ ಮೀಸಲು ಕ್ಷೇತ್ರವಾಗಿದೆ. ಇಲ್ಲಿ ವಿಕಾಸಶೀಲ ಇನ್ಸಾನ್ ಪಾರ್ಟಿಯಿಂದ ಶಾಸಕರಾಗಿದ್ದ ಮುಖೇಶ್ ಸಹಾನಿಯವರು ಸಾವನಪ್ಪಿದ್ದರು. ಹಾಗಾಗಿ ನಡೆದ ಉಪಚುನಾವಣೆಯಲ್ಲಿ ಆರ್‌ಜೆಡಿಯ ಅಮರ್ ಕುಮಾರ್ ಪಾಸ್ವಾನ್‌ರವರು ಜಯಗಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...