Homeಮುಖಪುಟಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ - ಬಿಜೆಪಿ 2, AJSU 1 ಕಡೆ...

ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ – ಬಿಜೆಪಿ 2, AJSU 1 ಕಡೆ ಗೆಲುವು

- Advertisement -
- Advertisement -

ಐದು ರಾಜ್ಯಗಳ ಆರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮೂರು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಎರಡು ಕಡೆ ಬಿಜೆಪಿ ಮತ್ತು ಒಂದು ಕಡೆ AJSU ಪಕ್ಷ ಗೆಲುವು ಸಾಧಿಸಿದೆ.

ಮಹಾರಾಷ್ಟ್ರದ ಎರಡು ಕ್ಷೇತ್ರಗಳು, ತಮಿಳುನಾಡು, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ತಲಾ ಒಂದೊಂದು ಕ್ಷೇತ್ರಗಳಿಗೆ ಫೆಬ್ರವರಿ ತಿಂಗಳಿನಲ್ಲಿ ಉಪ ಚುನಾವಣೆ ನಡೆದಿತ್ತು.

ಪುಣೆ ನಗರದ ಹೃದಯಭಾಗದಲ್ಲಿರುವ, ಬಿಜೆಪಿಯ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟ ಕಸ್ಬಾ ಪೇಠ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಸುಮಾರು ಮೂರು ದಶಕ ಕಾಲ ಕಬ್ಬಾ ಪೇಠ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿದೆ. ಮಹಾ ವಿಕಾಸ್ ಅಘಾಡಿ ಬೆಂಬಲದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರವೀಂದ್ರ ಧಾಂಗೇಕರ್ ಅವರು ಚುನಾವಣೆಯಲ್ಲಿ ಗೆದ್ದಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ತಿಲಕ್ ಅವರ ಮರಿ ಮೊಮ್ಮಗಳು, ಬಿಜೆಪಿ ಶಾಸಕಿ ಮುಕ್ತಾ ತಿಲಕ್ ಅವರು ನಿಧನರಾಗಿದ್ದರಿಂದ ಕ್ಷೇತ್ರದಲ್ಲಿ ಚುನಾವಣೆ ನಿಗದಿಯಾಗಿತ್ತು. ಮುಕ್ತಾ ಅವರು 2019ರ ಚುನಾವಣೆಯಲ್ಲಿ ಗೆದ್ದಿದ್ದರು.

ಬಿಜೆಪಿ ಶಾಸಕರಾದ ಲಕ್ಷ್ಮಣ್ ಜಗತಾಪ್ ಅವರು ನಿಧನರಾಗಿದ್ದರಿಂದ ಚಿಂಚವಾಡ್ ಕ್ಷೇತ್ರಕ್ಕೂ ಚುನಾವಣೆ ನಿಗದಿಯಾಗಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ತಮಿಳುನಾಡಿನ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ ಗೆಲುವು ಸಾಧಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ತಿರುಮಹನ್ ಎವೆರಾ ನಿಧನದ ನಂತರ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.

ಪಶ್ಚಿಮ ಬಂಗಾಳದ ಪಶ್ಚಿಮ ಬಂಗಾಳದ ಸಾಗರ್ದಿಘಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಪಕ್ಷದ ಅಭ್ಯರ್ಥಿ ಬೈರಾನ್‌ರವರು ಟಿಎಂಸಿ ಅಭ್ಯರ್ಥಿ ಎದುರು 22986 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅರುಣಾಚಲ ಪ್ರದೇಶದ ಲುಮ್ಲಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೇರಾಲ್ಬೋರ್ನ್ ಸೈಯಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಾರ್ಖಂಡ್‌ನ ರಾಮಗಢಕ್ಕೆ ಕ್ಷೇತ್ರದ ಶಾಸಕಿ ಮಮತಾ ದೇವಿ ಅವರ ಅನರ್ಹತೆಯಿಂದಾಗಿ ಆ ಸ್ಥಾನವು ತೆರವಾಗಿತ್ತು. ಅಲ್ಲಿ AJSU ಪಕ್ಷದ ಅಭ್ಯರ್ಥಿ ಸುನೀತಾ ಚೌಧರಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಉಪಚುನಾವಣೆ; ಬಿಜೆಪಿ ಭದ್ರಕೋಟೆ ಕಸ್ಬಾ ಪೇಠ್‌ನಲ್ಲಿ ಕಾಂಗ್ರೆಸ್‌ ಜಯಭೇರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...