Homeಮುಖಪುಟಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

- Advertisement -
- Advertisement -

ಸೆಪ್ಟಂಬರ್ 30 ರಂದು ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಹಾಲಿ ಸಿಎಂ ಮತ್ತು ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಎದುರು ಅಭ್ಯರ್ಥಿ ಹಾಕದಿರಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಿಎಂ ಆಗಿ ಮುಂದುವರೆಯಲು ಶಾಸಕರಾಗಿ ಆಯ್ಕೆಯಾಗಲೇಬೇಕಿದೆ. ಹಾಗಾಗಿ ಅವರು ತಮ್ಮ ಭದ್ರಕೋಟೆ  ಭವಾನಿಪುರದಿಂದ ಚುನಾವಣೆಗೆ ಇಳಿಯುತ್ತಿದ್ದಾರೆ. ಇಲ್ಲಿ ಅವರಿಗೆ ಅನುಕೂಲ ಮಾಡಿಕೊಡಲು ಕಾಂಗ್ರೆಸ್ ಅಭ್ಯರ್ಥಿ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ಪಕ್ಷವು ಒಂದು ವೇಳೆ ಅಭ್ಯರ್ಥಿ ಕಣಕ್ಕಿಳಿಸಿದರೆ ಮಮತಾ ಬ್ಯಾನರ್ಜಿಗೆ ಹಿನ್ನಡೆಯುಂಟಾಗುವ ಸಂಭವವಿದೆ. ಹಾಗಾಗಿ ಅವರ ವಿರುದ್ದ ಸ್ಪರ್ಧಿಸದಂತೆ ಹೈಕಮಾಂಡ್ ಸೂಚಿಸಿದೆ ಎಂದು ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

2024 ರ ಲೋಕಸಭಾ ಚುಣಾವಣೆಯ ದೃಷ್ಟಿಯಿಂದಲೂ ಬಿಜೆಪಿಯನ್ನು ಸಂಘಟಿತವಾಗಿ ಎದುರಿಸಲು ಕಾಂಗ್ರೆಸ್ ಮತ್ತು ಟಿಎಂಸಿ ನೋಡುತ್ತಿವೆ. ಹಾಗಾಗಿ ಸೌಜನ್ಯದ ದೃಷ್ಟಿಯಿಂದ ಮಮತಾ ಬ್ಯಾನರ್ಜಿ ಆಯ್ಕೆಗೆ ಕಾಂಗ್ರೆಸ್ ಸಹಕರಿಸುತ್ತಿದೆ.

ಈ ಮೊದಲು ಕಾಂಗ್ರೆಸ್ ಟಿಎಂಸಿಯ ಮಮತಾ ಬ್ಯಾನರ್ಜಿ ಎದುರು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಹಲವು ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಹಾಗಾಗಿ ಅಂತಿಮ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡಲಾಗಿತ್ತು. ಹೈಕಮಾಂಡ್ ಸ್ಪರ್ಧಿಸದಂತೆ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದವು. ಆದರೆ ಇಬ್ಬರಿಗೂ ತೀವ್ರ ಸೋಲು ಉಂಟಾಗಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸದಿದ್ದರೆ ತಾವು ಸ್ಪರ್ಧಿಸುವುದಾಗಿ ಎಡಪಕ್ಷಗಳು ತಿಳಿಸಿದ್ದವು. ಈಗ ಕಾಂಗ್ರೆಸ್ ತೀರ್ಮಾನದ ನಂತರ ಅವರು ಯಾವ ನಿಲುವು ತೆಗೆದುಕೊಳ್ಳುತ್ತಾರೆ ಎಂಬುದು ಕುತೂಹಲ ಹುಟ್ಟಿಸಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತನ್ನ ಸ್ವಕ್ಷೇತ್ರ ಭವಾನಿಪುರ ಬಿಟ್ಟು, ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿ ವಿರುದ್ಧ ನಂದಿಗ್ರಾಮದಿಂದ ಮಮತಾ ಬ್ಯಾನರ್ಜಿ ಸ್ಪರ್ಧಿಸಿದ್ದರು. ಕಡಿಮೆ ಅಂತರದಲ್ಲಿ ಸೋಲುಂಡಿದ್ದರು. ನಂದಿಗ್ರಾಮ ಫಲಿತಾಂಶದ ವಿರುದ್ಧ ಮಮತಾ ಬ್ಯಾನರ್ಜಿಯವರು ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ. ಇದೇ ಸಮಯದಲ್ಲಿ ತಮ್ಮ ಸಿಎಂ ಸ್ಥಾನ ಉಳಿಸಿಕೊಲ್ಳುವ ಸಲುವಾಗಿ ತಮ್ಮ ಭದ್ರಕೋಟೆ ಭವಾನಿಪುರದಿಂದ ಕಣಕ್ಕಿಳಿಯುತ್ತಿದ್ದಾರೆ.

ಸದ್ಯ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಸೆಪ್ಟಂಬರ್ 30 ರಂದು ನಡೆಯಲಿರುವ ಉಪಚುನಾವಣೆಗೆ ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅಕ್ಟೋಬರ್ 3 ರಂದು ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ; ಕರ್ನಾಲ್‌: ಮುಂದುವರೆದ ರೈತ ಪ್ರತಿಭಟನೆ, ಸರ್ಕಾರಿ ಕಚೇರಿಗಳ ಹೊರಗೆ ಜಮಾಯಿಸಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮಗೆ ತಿಳಿಯಲಾರದ ಏಷ್ಟೋ ವಿಚಾರಗಳನ್ನು ತಿಳಿಸುತ್ತಿರುವ ನಿಮಗೆ ಎನ್ನ ಹೃದಯ ಪೂರ್ವಕ ಅಭಿನಂದನೆಗಳು ಸರ್.

  2. ಇ ನಿರ್ದಾರ ಅಸೆಂಬ್ಲಿ ಚುನಾವಣೇಲಿ ತಗೋಬೇಕಾಗಿತ್ತು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...