ಹಾನಗಲ್, ಸಿಂದಗಿ ಉಪಚುನಾವಣೆಗೆ ದಿನಾಂಕ ಘೋಷಣೆ: ಕಸರತ್ತು ಆರಂಭಿಸಿದ ಪಕ್ಷಗಳು
PC: OdishaTv

ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮೂರು ಕ್ಷೇತ್ರಗಳಿಗೂ ಮುಂದಿನ ತಿಂಗಳು ಏಪ್ರಿಲ್‌ 17ರಂದು ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳ ಮತ ಏಣಿಕೆ ಮೇ 2ರಂದು ನಡೆಯಲಿದೆ.

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ, ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಕ್ಷೇತ್ರದ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರ.

ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಬೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ. ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ಇನ್ನು ಉಪಚುನಾವಣೆ ಘೋಷಣೆಯಾಗಿಲ್ಲ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಮಾರ್ಚ್ 23ರಂದು ಉಪ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್‌ 3 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಚುನಾವಣೆ ಘೋಷಣೆ ಆದ ದಿನದಿಂದಲೇ ಮಾದರಿ ನೀತಿಸಂಹಿತೆ ಜಾರಿಯಲ್ಲಿರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ತಮಿಳುನಾಡು, ಅಸ್ಸಾಂ, ಕೇರಳ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೂ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.


ಇದನ್ನೂ ಓದಿ: ಲಾಕ್‌ಡೌನ್‌ ಬೇಡವೆಂದರೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಿಸಲು ಸಹಕರಿಸಿ: ಯಡಿಯೂರಪ್ಪ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here