ದೇಶದ 11 ರಾಜ್ಯಗಳಲ್ಲಿ 58 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದೆ. ಸಾಂಕ್ರಾಮಿಕ ರೋಗದ ಮಧ್ಯೆ ನಡೆದ ಮೊದಲ ಪ್ರಮುಖ ಚುನಾವಣಾ ಪ್ರಕ್ರಿಯೆ ಬಿಹಾರದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯ ಜೊತೆಗೆ ಈ ಉಪಚುನಾವಣೆಯ ಮತ ಎಣಿಕೆಯನ್ನೂ ನಡೆಸಲಾಗುತ್ತಿದೆ.
ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳ ಫಲಿತಾಂಶವು ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯವನ್ನು ನಿರ್ಧರಿಸುತ್ತದೆ. ಇದಕ್ಕೆ ರಾಜ್ಯ ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತಕ್ಕಾಗಿ ಕನಿಷ್ಠ ಎಂಟು ಶಾಸಕರ ಅಗತ್ಯವಿದೆ. ಆದರೆ ಬಿಜೆಪಿ ಇಲ್ಲಿ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಗುಜರಾತ್‌ನ 8 ವಿಧಾನಸಭಾ ಕ್ಷೇತ್ರಗಳಿಗೆ ಮತ ಎಣಿಕೆ ಪ್ರಾರಂಭವಾಗಿದೆ. 7 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಒಂದರಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.
ಇದನ್ನೂ ಓದಿ: ದೇಶದ ರಾಜಕೀಯಕ್ಕೆ ತಿರುವು ನೀಡುವುದೇ ಬಿಹಾರ ಚುನಾವಣೆ?
ಮಣಿಪುರದಲ್ಲಿ 5 ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, 2 ರಲ್ಲಿ ಬಿಜೆಪಿ ಮುನ್ನೆಡೆಯಲ್ಲಿದೆ.
ಉತ್ತರ ಪ್ರದೇಶದ 7 ಸ್ಥಾನಗಳಲ್ಲಿ 2 ರಲ್ಲಿ ಬಿಜೆಪಿ, ಎಸ್‌ಪಿ 1, ಬಿಎಸ್‌ಪಿ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಒಡಿಶಾ, ನಾಗಾಲ್ಯಾಂಡ್, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ತಲಾ 2 ಸ್ಥಾನಗಳಿಗೆ ಉಪಚುನಾವಣೆ ನಡೆದಿದ್ದು, ನಾಗಾಲ್ಯಾಂಡ್‌ನಲ್ಲಿ ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಕರ್ನಾಟಕದಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆಯಲ್ಲಿದೆ. ಒಡಿಶಾದಲ್ಲಿ ಬಿಜು ಜನತಾ ದಳ 2 ಕ್ಷೇತ್ರದಲ್ಲಿಯೂ ಮುನ್ನಡೆಯಲ್ಲಿದೆ. ಜಾರ್ಖಂಡ್‌ನಲ್ಲಿ 1 ಬಿಜೆಪಿ, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಚತ್ತೀಸ್‌ಗಢ, ತೆಲಂಗಾಣ ಮತ್ತು ಹರಿಯಾಣ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆದಿದೆ. ತೆಲಂಗಾಣದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಚತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಹರಿಯಾಣದಲ್ಲಿಯೂ ಕಾಂಗ್ರೆಸ್ ಮುನ್ನಡೆಯಲ್ಲಿದೆ.
ಇದನ್ನೂ ಓದಿ: ಬಿಹಾರ ಚುನಾವಣೆ: ಕಣದಲ್ಲಿರುವ 1157 ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿ!


