Homeಕರ್ನಾಟಕ29 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್‌ ನಡುವೆ ಭಾರೀ ಫೈಟ್‌

29 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್‌ ನಡುವೆ ಭಾರೀ ಫೈಟ್‌

- Advertisement -
- Advertisement -

13 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ಸೇರಿ ಒಟ್ಟು 29 ವಿಧಾನಸಭಾ ಕ್ಷೇತ್ರ, ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.

29 ಕ್ಷೇತ್ರಗಳಲ್ಲಿ ಬಿಜೆಪಿ 6 ಮತ್ತು ಕಾಂಗ್ರೆಸ್ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಅಸ್ಸಾಂನ ಐದು ಸ್ಥಾನಗಳ ಪೈಕಿ ಬಿಜೆಪಿ ಮೂರರಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಒಂದರಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿಯ ಮೈತ್ರಿಕೂಟದ ಯುಪಿಪಿಎಲ್‌ಗೆ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ ಒಂದು ಸ್ಥಾನದಲ್ಲಿ ಮುಂದಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ 2 ಸ್ಥಾನಗಳಲ್ಲಿ ಮುಂದಿದೆ. ಈ ಚುನಾವಣೆಯು ಅಶೋಕ್ ಗೆಹ್ಲೋಟ್ ಸರ್ಕಾರದ ಕಾರ್ಯಕ್ಷಮತೆಯ ಮೇಲಿನ ಜನಾಭಿಪ್ರಾಯ ಎಂದು ಬಿಂಬಿಸಲಾಗಿದೆ.

ಬಂಗಾಳದ ಎಲ್ಲಾ ನಾಲ್ಕು ಸ್ಥಾನಗಳಲ್ಲಿ ತೃಣಮೂಲ ಕಾಂಗ್ರೆಸ್ ಮುಂದಿದೆ. ಏಪ್ರಿಲ್-ಮೇನಲ್ಲಿ ನಡೆದ ರಾಜ್ಯ ಚುನಾವಣೆಯಲ್ಲಿ ತೃಣಮೂಲದ ಭರ್ಜರಿ ಗೆಲುವಿನ ನಂತರ ಪ್ರಸ್ತುತ ಶಾಸಕರು ಮತ್ತು ಹಿರಿಯ ನಾಯಕರ ವಲಸೆ ಹೊರಟರು. ಹೀಗಾಗಿ ದೀನ್‌ಹಟಾ ಮತ್ತು ಶಾಂತಿಪುರದ ಉಪಚುನಾವಣೆಗಳು ಬಿಜೆಪಿಗೆ ಪ್ರತಿಷ್ಠೆಯ ಕಣಗಳಾಗಿವೆ.

ಕರ್ನಾಟಕದ ಎರಡು ಸ್ಥಾನಗಳಲ್ಲಿ ಬಿಜೆಪಿ ಒಂದು ಸ್ಥಾನದಲ್ಲಿ, ಕಾಂಗ್ರೆಸ್ ಒಂದರಲ್ಲಿ ಮುಂದಿದೆ. ಬಿ.ಎಸ್.ಯಡಿಯೂರಪ್ಪ ಅವರ ನಂತರ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಸಿಂದಗಿ ಮತ್ತು ಹಾನಗಲ್‌ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದೆ.

ಅಸ್ಸಾಂನಲ್ಲಿ ಐದು, ಬಂಗಾಳದಲ್ಲಿ ನಾಲ್ಕು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ತಲಾ ಮೂರು, ಬಿಹಾರ, ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಮತ್ತು ಆಂಧ್ರಪ್ರದೇಶ, ಹರಿಯಾಣ, ಮಹಾರಾಷ್ಟ್ರದಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆದಿದೆ.

ದಾದ್ರಾ ಮತ್ತು ನಗರ ಹವೇಲಿ, ಹಿಮಾಚಲ ಪ್ರದೇಶದ ಮಂಡಿ, ಮಧ್ಯಪ್ರದೇಶದ ಖಾಂಡ್ವಾ ಲೋಕಸಭಾ ಕ್ಷೇತ್ರಗಳಲ್ಲಿ ಹಾಲಿ ಸದಸ್ಯರು ಸಾವನ್ನಪ್ಪಿದ್ದರು. ಹೀಗಾಗಿ ಚುನಾವಣೆ ನಡೆದಿದೆ.

ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್‌ಎಸ್‌, ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಹುಜೂರಾಬಾದ್ ವಿಧಾನಸಭಾ ಕ್ಷೇತ್ರಕ್ಕಾಗಿ ಸೆಣಸಾಡುತ್ತಿವೆ. ಭೂಕಬಳಿಕೆ ಆರೋಪದ ನಂತರ ಶಾಸಕ ಈಟಾಲ ರಾಜೇಂದರ್ ರಾಜೀನಾಮೆ ನೀಡಿದ್ದಾರೆ. ಆರೋಪವನ್ನು ತಳ್ಳಿಹಾಕಿರುವ ರಾಜೇಂದರ್, ಟಿಆರ್‌ಎಸ್‌ ತೊರೆದು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.


ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...