Homeಕರ್ನಾಟಕಉಪಚುನಾವಣೆ - ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ..... ಹೋದ್ರೆ....

ಉಪಚುನಾವಣೆ – ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ….. ಹೋದ್ರೆ….

- Advertisement -
- Advertisement -

ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಚಾರಕ್ಕೆ ಅಣಿಯಾಗುತ್ತಿದ್ದರೆ ಬಿಜೆಪಿ ಪಾಳೆಯದಲ್ಲಿ ಸದ್ದೇ ಇಲ್ಲ. ಅದರಲ್ಲೂ ಬೆಳಗಾವಿಯಲ್ಲಿ (ಈ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ) ಬೃಹತ್ ಪ್ರತಿಭಟನೆ ಮತ್ತು ಹೊಸಕೋಟೆಯಲ್ಲಿ ಸಮಾವೇಶ ಮಾಡಿರುವ ಕಾಂಗ್ರೆಸ್ ‘ಇವರನ್ನು ಸೋಲಿಸಿಯೇ ಸಿದ್ಧ’ ಎಂದು ಪಣ ತೊಟ್ಟಂತಿದೆ. ಕೆಪಿಸಿಸಿ ಕಚೇರಿಯಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕಾತಿಯಾಗಿಯೇ ಒಂದು ತಿಂಗಳಾಗಿದೆ. ಜೆಡಿಎಸ್ ಸಹಾ ಅದರ ಸಾರಥಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದೆ. ಯಡಿಯೂರಪ್ಪನವರು ಮತ್ತು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚಿಸಿದ್ದಾರಾದರೂ, ಬಿಜೆಪಿ ಕಚೇರಿ ಹಾಗೂ ಸಂಘಟನೆಗೂ ಈ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲದಂತೆ ಇವೆ.

ಈ ಉಪಚುನಾವಣೆ ಏನಿದ್ದರೂ ಆಯಾ ಅನರ್ಹ ಶಾಸಕರು ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದು ಎಂಬಂತೆ ಬಿಜೆಪಿಯು ವರ್ತಿಸುತ್ತಿದೆ. ಬಿಜೆಪಿ ಯಾವಾಗಲೂ ಗೆಲ್ಲುತ್ತಾ ಬಂದಿರುವುದು ಮತದಾರರು ತಮ್ಮಂತೆ ತಾವೇ ಆ ಪಕ್ಷದ ಜೊತೆಗೆ ಇದ್ದಾರೆ ಎಂಬ ಕಾರಣಕ್ಕಲ್ಲ. ಸಂಘಪರಿವಾರದ ಸಂಘಟನೆಗಳು ಮತ್ತು ಚುನಾವಣಾ ಯಂತ್ರಾಂಗ ವ್ಯವಸ್ಥಿತವಾಗಿ ಫೀಲ್ಡಿಗಿಳಿಯುತ್ತಾರೆ. ಈ ಸಾರಿ ಆ ರೀತಿ ಆಗಲಿಕ್ಕಿಲ್ಲ ಎಂಬ ಸ್ಪಷ್ಟ ಸೂಚನೆಗಳು ಈಗಾಗಲೇ ಸಂಭವಿಸಿವೆ.

ಇದಕ್ಕೆ ಕಾರಣಗಳು ಮೂರು. ಒಂದು, ಸದರಿ ಅನರ್ಹ ಶಾಸಕರು ಸಂಘಪರಿವಾರದ ಮೂಲದವರಲ್ಲ. ಬಹಳ ಕೆಟ್ಟ ರೀತಿಯಲ್ಲಿ ಆಮಿಷಕ್ಕೊಳಗಾಗಿ ಬಿಜೆಪಿಯ ಕಡೆಗೆ ಬಂದವರು. ಹಾಗಾಗಿ ಮುಂದೆಯೂ ಇವರ ನಿಷ್ಠೆ ಸಂಶಯಾಸ್ಪದ. ಎರಡು, ಇವರು ಗೆದ್ದ ಬಂದರೆ ಬಿಜೆಪಿ ಪ್ರಬಲವಾಗುತ್ತದೆ ಎಂಬುದಕ್ಕಿಂತ ಯಡಿಯೂರಪ್ಪನವರು ಪ್ರಬಲರಾಗುತ್ತಾರೆ; ಇದು ಬಿಜೆಪಿಯ ತ್ರೈಕಮ್ಯಾಂಡ್‍ಗೆ (ಮೋದಿ, ಶಾ, ಸಂತೋಷ್) ಬೇಕಿಲ್ಲ.

ಮೂರನೆಯದ್ದೇ ಮುಖ್ಯವಾದುದು. ಪ್ರತಿ ಕ್ಷೇತ್ರದಲ್ಲಿರುವ ಬಿಜೆಪಿಯ ಹಳೆಯ ಕಾರ್ಯಕರ್ತರು, ಪಕ್ಷವನ್ನು ಈ ಪಕ್ಷಾಂತರಿಗಳ ಗೆಲುವಿಗೆ ದುಡಿಸಿದರೆ ಮುಂದೆ ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೋ ಇಲ್ಲವೋ ಹೇಳಲು ಬರುವುದಿಲ್ಲ. ಇವರುಗಳು ಸೋಲಲೂಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರವೇ ಬಿದ್ದು ಹೋಗಿ, ಅನರ್ಹ ಶಾಸಕರೂ ಬಿಜೆಪಿಯಲ್ಲಿ ಉಳಿಯದೇ, ಹಳೆಯ ಕಾರ್ಯಕರ್ತರೂ ಮುನಿಸಿಕೊಂಡರೆ ಪಕ್ಷಕ್ಕೆ ಡ್ಯಾಮೇಜು. ಅದರ ಬದಲಿಗೆ, ನಮ್ಮ ಸಂಘಟನೆ ನಾವು ಉಳಿಸಿಕೊಂಡರೆ ಮುಂದಿನ ಚುನಾವಣೆಯಲ್ಲಾದರೂ ಅನುಕೂಲವಾಗುತ್ತದೆ. ಸರ್ಕಾರ ಬಿದ್ದು ಹೋದರೆ ಒಳ್ಳೆಯದೇ. ಮಧ್ಯಂತರ ಚುನಾವಣೆಯಲ್ಲಿ ಗೆದ್ದು ಬರೋಣ ಎಂಬುದು ಬಿಜೆಪಿ ಪಕ್ಷದ ಇರಾದೆ.

ಒಂದು ವೇಳೆ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದರೆ ಅದೂ ಒಳ್ಳೆಯದೇ. ಸರ್ಕಾರ ಉಳಿದುಕೊಳ್ಳುತ್ತದೆ. ಮೂವರು ಉಪಮುಖ್ಯಮಂತ್ರಿಗಳ ಮೂಲಕ ಯಡಿಯೂರಪ್ಪನವರನ್ನು ನಿಯಂತ್ರಿಸುತ್ತಾ, ಪಕ್ಷವನ್ನು ಬೆಳೆಸಿಕೊಳ್ಳೋಣ. ನಂತರ ನೋಡೋಣ ಎಂದು ಬಿಜೆಪಿಯು ಭಾವಿಸಿದೆ. ಹಾಗಾಗಿಯೇ ತಳಮಟ್ಟದಲ್ಲಾಗಲೀ, ಮೇಲ್ಮಟ್ಟದಲ್ಲಾಗಲೀ ಬಿಜೆಪಿ ಪಕ್ಷವು ಯಾವ ತಯಾರಿಯನ್ನೂ ನಡೆಸದೇ ಸುಮ್ಮನೇ ಕುಳಿತಿದೆ. ಹಾಗಾಗಿಯೇ ಅವರ ಮಟ್ಟಿಗೆ ಇದೊಂಥರಾ ಬಂದ್ರೆ ಬೆಟ್ಟ, ಹೋದ್ರೆ . .. .. ಎಂಬಂತಿದೆ ಎಂಬುದು ಬಿಜೆಪಿಯ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...