Homeಕರ್ನಾಟಕಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ 'ಭೂತ' ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು.

- Advertisement -
- Advertisement -

ಶಿರಾ ಉಪಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ಕೆ ತೆರೆ ಬಿದ್ದಿದೆ. ಮನೆಮನೆ ಪ್ರಚಾರ ಆರಂಭವಾಗಿದೆ. ಯಾವ ಅಭ್ಯರ್ಥಿ ನಮಗೆ ಸುಲಭವಾಗಿ ಕೈಗೆಟುಕುತ್ತಾರೆ..? ಯಾರಿಂದ ಅಭಿವೃದ್ಧಿ, ಯಾವ ಅಭ್ಯರ್ಥಿ ಗೆದ್ದರೆ ಕ್ಷೇತ್ರದಲ್ಲಿ ಉಳಿಯುವುದಿಲ್ಲ, ಯಾರು ನಮ್ಮ ನೋವು ಆಲಿಸಬಲ್ಲರು ಎಂಬ ಸ್ಪಷ್ಟನೆ ಮತದಾರರಿಗೆ ಸಿಕ್ಕಿದೆ. ಈವರೆಗೆ ಎಲ್ಲಾ ಪಕ್ಷಗಳ ಮುಖಂಡರು ಆಡಿದ ನಾಟಕಗಳಿಗೆ ತಲೆದೂಗಿರುವ ಮತದಾರರು ತೀರ್ಪು ಕಾಯ್ದಿರಿಸಿದ್ದಾರೆ. ನವೆಂಬರ್ 3ರಂದು ಮತಯಂತ್ರದ ಗುಂಡಿ ಒತ್ತುವ ಮತದಾರರ ತೀರ್ಪು ನವೆಂಬರ್ 10ರಂದು ಹೊರಬೀಳಲಿದೆ.

ಇಷ್ಟು ದಿನದ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಮುಖಂಡರು ಜಾತಿ ಲೆಕ್ಕಾಚಾರವನ್ನೇ ಪ್ರಮುಖ ಅಸ್ತ್ರವಾಗಿ ಪ್ರಯೋಗ ಮಾಡಿರುವುದು ಇದುವರೆಗಿನ ಬೆಳವಣಿಗೆಗಳಿಂದ ದೃಢಪಟ್ಟಿದೆ. ಪ್ರತಿ ಜಾತಿ ಸಮುದಾಯದ ಮತಗಳನ್ನು ಸೆಳೆಯುವ ಕಸರತ್ತುಗಳೂ ನಡೆದಿವೆ. ಬಿಜೆಪಿ ಒಳಮೀಸಲಾತಿ ಜಾರಿ, ಕಾಡುಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ವಿಷಯಗಳನ್ನು ಪ್ರಸ್ತಾಪಿಸಿ ಈ ಸಮುದಾಯದ ಮತಗಳನ್ನು ಛಿದ್ರಗೊಳಿಸಿದೆ.

ಇನ್ನು, ಸಚಿವ ಬಿಎಂಟಿ ನಾಗರಾಜ್ ಅವರನ್ನು ಕರೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಕುರುಬರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸಿದ್ದರಾಮಯ್ಯ ಈ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿಸುವ ಮೂಲಕ ಕುರುಬ ಸಮುದಾಯದ ಮತಗಳು ಒಂದು ಕಡೆ ಹೋಗದಂತೆ ಮಾಡಿದೆ. ಶಿರಾ ಸುತ್ತಮುತ್ತಲ ಪ್ರದೇಶದಲ್ಲಿ ಕುಂಚಿಟಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆಯನ್ನೂ ನೀಡಿ ಆ ಮತಗಳ ಬುಟ್ಟಿಗೂ ಬಿಜೆಪಿ ಕೈ ಹಾಕಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊನೆ ಗಳಿಗೆಯಲ್ಲಿ ಶಿರಾ ಕ್ಷೇತ್ರಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ನೀರಿನ ರಾಜಕೀಯವನ್ನು ಮುನ್ನೆಲೆಗೆ ತಂದು ಆರು ತಿಂಗಳಲ್ಲಿ ಮದಲೂರು ಕೆರೆಗೆ ನೀರು ಹರಿಸುವ ಮತ್ತು ಗಂಗಾ ಪೂಜೆ ಮಾಡುವ ಭರವಸೆಯನ್ನು ನೀಡಿ ಹೋಗಿರುವುದು ಬಿಜೆಪಿಗೆ ಒಂದಿಷ್ಟು ಮತಗಳು ಬರಲಿವೆ ಎಂಬ ಭರವಸೆ ನೀಡಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಇತ್ತ ಮದಲೂರು ಗ್ರಾಮ ಮತ್ತು ಶಿರಾ ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಮಾಡಿತ್ತು. ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಆದರೆ ಈ ಸಮಾವೇಶದಲ್ಲಿ ಭಾಗಿಯಾಗಿದ್ದವರ ಪೈಕಿ ಶೇ 65ರಷ್ಟು ಮಂದಿ ಹೊರಗಿನವರು ಎಂದು ಹೇಳಲಾಗುತ್ತಿದೆ.

ಆಡಳಿತಾರೂಢ ಬಿಜೆಪಿ ಬಹಿರಂಗ ವಿಜಯ ಸಂಕಲ್ಪ ಸಮಾವೇಶಕ್ಕೆ ಹಿರಿಯೂರು, ಮಧುಗಿರಿ, ಚಿಕ್ಕನಾಯನಹಳ್ಳಿ, ಹುಳಿಯಾರು ಭಾಗಗಳಿಂದ ಸಾವಿರಾರು ಜನರನ್ನು ಹಣ ಕೊಟ್ಟು ಕರೆತರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮದಲೂರಿನ ಸಮಾವೇಶದಲ್ಲಿ ಭಾಗವಹಿಸಿದ್ದ ಜನರನ್ನು ಕರೆದುಕೊಂಡು 300ಕ್ಕೂ ಹೆಚ್ಚು ವಾಹನಗಳು ಹಿರಿಯೂರಿನತ್ತ ಸಾಗಿವೆ. ಈ ವಾಹನಗಳು ಜವಗೊಂಡನಹಳ್ಳಿ ಮತ್ತು ಆದಿವಾಲದತ್ತ ಪ್ರಯಾಣ ಬೆಳೆಸಿವೆ. ವಿಜಯ ಸಂಕಲ್ಪ ಸಮಾವೇಶ ಮುಗಿದ ಬಳಿಕ ಮದ್ಯವನ್ನು ಮದಲೂರು ಕೆರೆಯ ಅಂಗಳದಲ್ಲಿ ಹಂಚಿಕೆ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಕಾಂಗ್ರೆಸ್ ಕೂಡ ಬೇರೆ ಬೇರೆ ಜಾತಿಯ ಮತಗಳನ್ನು ಸೆಳೆಯಲು ತಂತ್ರಗಳನ್ನು ಅನುಸರಿಸಿದೆ. ಎಲ್ಲಾ ವಿಭಾಗಗಳ ಮುಖಂಡರನ್ನು ಕ್ಷೇತ್ರಕ್ಕೆ ಕರೆಸಿ ಪ್ರಚಾರ ಕೈಗೊಂಡಿದೆ. ಕಾಂಗ್ರೆಸ್ ಮುಖಂಡರು ಜೆಡಿಎಸ್ ಅಭ್ಯರ್ಥಿಯ ಕುರಿತು ಎಲ್ಲಿಯೂ ಟೀಕೆಗಳನ್ನು ವ್ಯಕ್ತಪಡಿಸಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಬಿ.ಕೆ.ಹರಿಪ್ರಸಾದ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ, ಷಡಕ್ಷರಿ, ಡಾ.ಜಿ.ಪರಮೇಶ್ವರ್, ಉಮಾಶ್ರೀ, ಜಯಮಾಲ ಹೀಗೆ ಎಲ್ಲಾ ನಾಯಕರೂ ಬಂದು ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಶಿರಾ ಕ್ಷೇತ್ರಕ್ಕೆ ಟಿ.ಬಿ.ಜಯಚಂದ್ರ ಮಾಡಿರುವ ಕಾರ್ಯಗಳು, ಮದಲೂರು ಕೆರೆಗೆ ನೀರು ಹರಿಸುವ ಕುರಿತು ಬಿಜೆಪಿ ದ್ವಂದ್ವ, ನೀರಿನ ಸಮಸ್ಯೆ ಇದ್ದಾಗ ಶಿರಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದನ್ನು ಪ್ರಸ್ತಾಪಿಸಿ ಮತದಾರರ ಮನಸ್ಸು ಗೆಲ್ಲುವ ಯತ್ನಗಳನ್ನು ಮಾಡುತ್ತಿದೆ.

ಅನುಕಂಪದ ಅಲೆಯನ್ನೇ ನೆಚ್ಚಿಕೊಂಡಿರುವ ಜೆಡಿಎಸ್‌ಗೆ ಪಕ್ಷದ ವರಿಷ್ಠರೇ ಬಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಮೊದಲಾದ ನಾಯಕರು ಶಿರಾದಲ್ಲಿ ನಾಲ್ಕು ದಿನಗಳು ಭರ್ಜರಿ ಪ್ರಚಾರ ನಡೆಸಿದ ಮೇಲೆ ಜೆಡಿಎಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಜ್ವಲ್ ರೇವಣ್ಣ ಅವರು ಹುಲಿಕುಂಟೆ ಭಾಗದಲ್ಲಿ ಪಕ್ಷದಿಂದ ಬಿಜೆಪಿಯತ್ತ ಮುಖ ಮಾಡಿದ್ದ ಹಿರಿಯ ಮುಖಂಡರ ಮನವೊಲಿಸಿ ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ದಿವಂಗತ ಶಾಸಕ ಸತ್ಯನಾರಾಯಣ್ ಅವರು 8 ಸಾವಿರ ಮಂದಿಗೆ ಸಾಗುವಳಿ ಚೀಟಿ ಕೊಡಿಸಿದ್ದು ಆ ಮತಗಳು ಜೆಡಿಎಸ್ ಬಿಟ್ಟು ಬೇರೆಡೆ ಹೋಗುವುದಿಲ್ಲ ಎಂಬ ಲೆಕ್ಕಾಚಾರವೂ ಇದೆ. ಹೀಗಾಗಿ ಜೆಡಿಎಸ್‌ಗೆ ಮೂರನೇ ಸ್ಥಾನ ನಿಶ್ಚಿತ ಎಂಬುದು ಈಗ ಸುಳ್ಳಾಗಿದೆ.

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ ‘ಭೂತ’ ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು. ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮೂರು ಪಕ್ಷಗಳ ಅಭ್ಯರ್ಥಿಗಳಿಗೂ ಒಳೇಟಿನ ಭಯ ಕಾಡುತ್ತಿದೆ.

ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಮೂರು ಪಕ್ಷಗಳ ಆತಂರಿಕ ಭಿನ್ನಮತ ಯಾರಿಗೆ ಹೊಡೆತ ಕೊಡುವುದೋ ಗೊತ್ತಿಲ್ಲ. ಆದರೆ ಹಿಂದುಳಿದ ವರ್ಗಗಳ ಮತಗಳ ಮೇಲೆ ಮೂರು ಪಕ್ಷಗಳೂ ಕಣ್ಣಿಟ್ಟಿವೆ. ಆದರೆ ಮತದಾರನ ಒಲವು ಯಾರ ಮೇಲಿದೆ ಎಂಬುದು ತಿಳಿಯಲು ಎಲ್ಲಾ ಪಕ್ಷಗಳು ನವೆಂಬರ್‌ 10 ರವರೆಗೆ ಕಾಯಲೇಬೇಕು.


ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು RTI ವಿನಾಯಿತಿ ಆದೇಶ ರದ್ದು ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ಹಿಂಪಡೆದುಕೊಂಡಿದೆ. ಸಾರ್ವಜನಿಕ (ಕಾನೂನು...

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ...

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...