Homeಮುಖಪುಟಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

- Advertisement -
- Advertisement -

ಭಾರೀ ಕೂತುಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಜೆಡಿಎಸ್‌ ಎರಡೂ ಕ್ಷೇತ್ರಗಳಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ.

ಸಿಂದಗಿಯ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ನೇ ಸುತ್ತಿನ ಬಳಿಕ 18,557 ಮತಗಳ ಅಂತರ ಸಾಧಿಸಿದ್ದಾರೆ. ಅವರು 50,050 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 34,688 ಮತಗಳನ್ನಷ್ಟೇ ಪಡೆದಿದ್ದಾರೆ. ಇನ್ನು 10 ಸುತ್ತುಗಳ ಮತ ಎಣಿಕೆ ಬಾಕಿ ಇದೆ.

ಹಾನಗಲ್‌ ನಲ್ಲಿ 6ನೇ ಸುತ್ತಿನ ಮತ ಎಣಿಕೆ ನಂತರ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 2,257 ಮತಗಳ ಮುನ್ನಡೆ ಸಾಧಿಸಿದ್ದಾರೆ. ಅವರು 31,620 ಮತ ಗಳಿಸಿದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ 29,368 ಮತಗಳನ್ನು ಗಳಿಸಿ ಪೈಪೋಟಿ ನೀಡುತ್ತಿದ್ದಾರೆ.

ಉಪಚುನಾವಣೆ ಎಂದಮೇಲೆ ಆಡಳಿತಾರೂಢ ಪಕ್ಷಕ್ಕೆ ಪ್ರತಿಷ್ಟೆಯದ್ದಾಗಿರುತ್ತದೆ. ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯೂ ಆಗಿರುವುದರಿಂದ ಅವರು ಹಾನಗಲ್ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ಆದರೂ ಅಲ್ಲಿ ಬಿಜೆಪಿ ಸ್ವಲ್ಪ ಹಿನ್ನಡೆ ಅನುಭವಿಸಿದೆ.

ಇನ್ನು ಸಿಂದಗಿಯಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುತ್ತಿತ್ತು ಎನ್ನಲಾಗುತ್ತಿತ್ತು. ಆದರೆ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.


ಇದನ್ನೂ ಓದಿ: ಹಾನಗಲ್: ಪ್ರತಿಷ್ಠೆಯ ಕಣದಲ್ಲಿ ’ಬಿ ಟೀಮ್’ಗಳದ್ದೇ ಸಂಕಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...