Homeಕರ್ನಾಟಕಉಪಚುನಾವಣಾ ಫಲಿತಾಂಶ: RR ನಗರದಲ್ಲಿ BJP; ಶಿರಾದಲ್ಲಿ ಇನ್ನೂ ಪೈಪೋಟಿ!

ಉಪಚುನಾವಣಾ ಫಲಿತಾಂಶ: RR ನಗರದಲ್ಲಿ BJP; ಶಿರಾದಲ್ಲಿ ಇನ್ನೂ ಪೈಪೋಟಿ!

- Advertisement -
- Advertisement -

ರಾಜ್ಯದಲ್ಲಿ ನಡೆದ ಎರಡು ಉಪಚುನಾವಣೆಯಲ್ಲಿ ಆರ್‌‌.ಆರ್. ನಗರದಲ್ಲಿ ನಿರೀಕ್ಷಯಂತೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರಿ ಮುನ್ನಡೆಯಲ್ಲಿದ್ದು ಬಾಗಶಃ ವಿಜಯಿಯಾಗಿದ್ದಾರೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್‌ಗೌಡ ನಡುವೆ ನಿಕಟ ಪೈಪೋಟಿ ನಡೆಯುತ್ತಿದೆ.

ಶಿರಾ ಕ್ಷೇತ್ರದ 24 ಸುತ್ತಿನಲ್ಲಿ ಇದುವರೆಗೂ 19 ಸುತ್ತಿನ ಎಣಿಕೆ ಮುಗಿದಿದ್ದು, ಬಿಜೆಪಿಯ ರಾಜೇಶ್ ಗೌಡ 59437 ಮತಗಳನ್ನು ಪಡೆದಿದ್ದು ಮೊದಲನೇ ಸ್ಥಾನದಲ್ಲಿದ್ದಾರೆ. ಕಾಂಗ್ರೆಸ್‌‌ನ ಟಿ.ಬಿ. ಜಯಚಂದ್ರ 50544 ಮತಗಳನ್ನು ಪಡೆದಿದ್ದಾರೆ. ಮುಂದಿನ ಐದು ಸುತ್ತುಗಳು ಇನ್ನೂ ನಿರ್ಣಾಯವಾಗಿದ್ದು ಬಿಜೆಪಿ ಹಾಗೂ ಕಾಂಗ್ರೆಸ್ ಭಾರಿ ಪೈಪೋಟಿ ನಡೆಸುತ್ತಿದೆ. ಇನ್ನು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 27462 ಮತ ಪಡೆದಿದ್ದು ಭಾರಿ ಮುಖಭಂಗ ಅನುಭವಿಸಿದ್ದಾರೆ.

ಇದನ್ನೂ ಓದಿ: Bihar Election Results: JNU ಮಾಜಿ ವಿದ್ಯಾರ್ಥಿ ನಾಯಕನಿಗೆ‌ ಭಾರಿ ಮುನ್ನಡೆ!

ನವೆಂಬರ್ 3 ರಂದು ಆರ್‌.ಆರ್‌. ನಗರ ಮತ್ತು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು, ಹಾಗೂ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಂದ ಅಕ್ಟೋಬರ್ 28 ರಂದು ಚುನಾವಣೆ ನಡೆದಿತ್ತು.

ಎರಡು ವಿಧಾನ ಸಭಾದಲ್ಲಿ ಆರ್‌‌. ಆರ್‌‌. ನಗರ ಬಿಜೆಪಿಯ ಪಾಲಾಗುವುದು ಭಾಗಶಃ ನಿಚ್ಚಳವಾಗಿದ್ದು, ಶಿರಾ ಕ್ಷೇತ್ರದಲ್ಲಷ್ಟೇ ಮತದಾರರು, ಕೈ ಹಿಡಿಯಲಿದ್ದಾರಾ ಅಥವಾ ಕಮಲ ಮುಡಿಯಲಿದ್ದಾರಾ ಎಂಬುದು ಕೆಲವೇ ಕ್ಷಣದಲ್ಲಿ ತಿಳಿದುಬರುತ್ತದೆ.

ಇದನ್ನೂ ಓದಿ: Bihar Election Results: ಸ್ಪರ್ಧಿಸಿದ್ದ 19 ಕ್ಷೇತ್ರದಲ್ಲಿ 14 ರಲ್ಲಿ ಮುನ್ನಡೆ ಸಾಧಿಸಿದ ಸಿಪಿಐ(ಎಂ-ಎಲ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...