Homeಮುಖಪುಟಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಹಿನ್ನಡೆ: ಕಾಂಗ್ರೆಸ್‌ಗೆ ಮುನ್ನಡೆ

ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಹಿನ್ನಡೆ: ಕಾಂಗ್ರೆಸ್‌ಗೆ ಮುನ್ನಡೆ

- Advertisement -
- Advertisement -

ಭಾರೀ ಕೂತುಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಸಿಂದಗಿಯಲ್ಲಿ ಬಿಜೆಪಿಯ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿ ಗೆಲುವಿನತ್ತ ಮುನ್ನುಗ್ಗುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯ ಹಾನಗಲ್‌ನಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಹಾನಗಲ್‌ ನಲ್ಲಿ 8ನೇ ಸುತ್ತಿನ ಮತ ಎಣಿಕೆ ನಂತರ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 4,413 ಮತಗಳ ಮುನ್ನಡೆ ಸಾಧಿಸಿದ್ದಾರೆ. ಅವರು 36,415 ಮತ ಗಳಿಸಿದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ 32,002 ಮತಗಳನ್ನು ಗಳಿಸಿ ಪೈಪೋಟಿ ನೀಡುತ್ತಿದ್ದಾರೆ.

ಉಪಚುನಾವಣೆ ಎಂದಮೇಲೆ ಆಡಳಿತಾರೂಢ ಪಕ್ಷಕ್ಕೆ ಪ್ರತಿಷ್ಟೆಯದ್ದಾಗಿರುತ್ತದೆ. ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯೂ ಆಗಿರುವುದರಿಂದ ಅವರು ಹಾನಗಲ್ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. 8 ದಿನಗಳ ಕಾಲ ಸತತ ಪ್ರಚಾರ ಮಾಡಿದ್ದರು. ಆದರೂ ಅಲ್ಲಿ ಬಿಜೆಪಿ ಸ್ವಲ್ಪ ಹಿನ್ನಡೆ ಅನುಭವಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿಯವರು, ಸಿಂದಗಿಯಲ್ಲಿ ನಾವು ಭರ್ಜರಿ ಮುನ್ನಡೆ ಸಾಧಿಸಿದ್ದೇವೆ. ಹಾನಗಲ್‌ನಲ್ಲಿ ಅಲ್ಪ ಹಿನ್ನಡೆ ಇದೆ. ಇನ್ನು ಅರ್ಧಕ್ಕಿಂತ ಹೆಚ್ಚು ಮತಗಳ ಎಣಿಕೆ ಬಾಕಿ ಇದೆ. ಅಲ್ಲಿಯೂ ನಾವು ಗೆಲುವು ಸಾಧಿಸುತ್ತೇವೆ ಎಂದಿದ್ದಾರೆ.

ಈ ಕ್ಷೇತ್ರದಲ್ಲಿ ಯಾವಾಗಲೂ ಪೈಪೋಟಿ ಇರುತ್ತದೆ. ಎರಡು ಜನರಲ್ ಎಲೆಕ್ಷನ್‌ನಲ್ಲಿ ನಾವು ಗೆದ್ದಿದ್ದೇವೆ. ಬೈ ಎಲೆಕ್ಷನ್ ಆದ್ದರಿಂದ ಸ್ವಲ್ಪ ಪೈಪೋಟಿ ಇದೆ ಎಂದಿದ್ದಾರೆ.

ಇನ್ನು ಸಿಂದಗಿಯ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ನೇ ಸುತ್ತಿನ ಬಳಿಕ 18,863 ಮತಗಳ ಅಂತರ ಸಾಧಿಸಿದ್ದಾರೆ. ಅವರು 57,484 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 38,621 ಮತಗಳನ್ನಷ್ಟೇ ಪಡೆದಿದ್ದಾರೆ. ಇನ್ನು ಹಲವು ಸುತ್ತುಗಳ ಮತ ಎಣಿಕೆ ಬಾಕಿ ಇದೆ.


ಇದನ್ನೂ ಓದಿ: ಹಾನಗಲ್: ಪ್ರತಿಷ್ಠೆಯ ಕಣದಲ್ಲಿ ’ಬಿ ಟೀಮ್’ಗಳದ್ದೇ ಸಂಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...