Homeಮುಖಪುಟ13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ : ಮೂರರಲ್ಲಿ ಗೆದ್ದು 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡ...

13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ : ಮೂರರಲ್ಲಿ ಗೆದ್ದು 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡ ಇಂಡಿಯಾ ಒಕ್ಕೂಟ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಪೈಪೋಟಿ ನೀಡಿದ್ದ ಇಂಡಿಯಾ ಮೈತ್ರಿಕೂಟ, ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಲಕ್ಷಣ ಕಾಣುತ್ತಿದೆ.

ಈ ಸುದ್ದಿಯ ಬರೆಯುವ ಹೊತ್ತಿಗೆ (2:20 pm)ಇಂಡಿಯಾ ಮೈತ್ರಿಕೂಟ ಮೂರು ಸ್ಥಾನಗಳನ್ನು ಗೆದ್ದಿತ್ತು ಮತ್ತು ಇತರ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಎಎಪಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ, ಬಿಹಾರ ಮತ್ತು ತಮಿಳುನಾಡಿನ ವಿವಿಧ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಇಂಡಿಯಾ ಮೈತ್ರಿಕೂಟದ ಪಕ್ಷಗಳಾಗಿವೆ.

ಪಂಜಾಬ್‌ನಲ್ಲಿ ಎಎಪಿಯ ಮೊಹಿಂದರ್ ಭಗತ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ 23,000 ಮತಗಳಿಂದ ಗೆದ್ದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರು ಡೆಹ್ರಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದಾರೆ. ರಾಜ್ಯದ ಮತ್ತೊಂದು ಕ್ಷೇತ್ರ ನಲಗಢದಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೆ, ಹಮೀರ್‌ಪುರದಲ್ಲಿ ಬಿಜೆಪಿಯ ಆಶಿಶ್ ಶರ್ಮಾ ಮುಂದಿದ್ದಾರೆ.

ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೂರ್ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಮಧ್ಯ ಪ್ರದೇಶದ ಅಮರವಾರ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಧೀರನ್ ಶಾ ಇನ್ವಾಟಿ 4,000 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಹಾರದಲ್ಲಿ ಜೆಡಿಯುನ ಕಲಾಧರ್ ಪ್ರಸಾದ್ ಮಂಡಲ್ ರುಪೌಲಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆಯ ಅಣ್ಣಿಯುರ್ ಶಿವ 10,000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳ ಮತ ಎಣಿಕೆ ಇಂದು (ಜುಲೈ 13, ಶನಿವಾರ) ಬೆಳಗ್ಗೆ ಆರಂಭವಾಗಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯ ಪ್ರದೇಶ, ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಸ್ಥಾನಗಳಿಗೆ ಬುಧವಾರ (ಜುಲೈ 10) ಮತದಾನ ನಡೆದಿತ್ತು.

ಇದನ್ನೂ ಓದಿ : ಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ : ಕಾಂಗ್ರೆಸ್ ದಲಿತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...