Homeಮುಖಪುಟಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಸೇರಿದಂತೆ 6 ರಾಜ್ಯಗಳಲ್ಲಿ ಉಪಚುನಾವಣೆಗೆ ದಿನ ನಿಗದಿ

ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಸೇರಿದಂತೆ 6 ರಾಜ್ಯಗಳಲ್ಲಿ ಉಪಚುನಾವಣೆಗೆ ದಿನ ನಿಗದಿ

- Advertisement -
- Advertisement -

ಲೋಕಸಭೆ ಚುನಾವಣೆ ಸಂಬಂಧ ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ‘ಬಿಹಾರ, ಹರಿಯಾಣ, ಗುಜರಾತ್, ಜಾರ್ಖಂಡ್, ಮಹಾರಾಷ್ಟ್ರ, ತೆಲಂಗಾಣ, ತ್ರಿಪುರಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಉಪಚುನಾವಣೆ ನಡೆಯುವ ರಾಜ್ಯಗಳ ಮಾಹಿತಿ ನೀಡಿದರು.

ವೇಳಾಪಟ್ಟಿಯ ಪ್ರಕಾರ, ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, 25 ಮೇ ಮತ್ತು ಜೂನ್ 1ರ ಲೋಕಸಭಾ ಚುನಾವಣೆಯ ದಿನಾಂಕಗಳೊಂದಿಗೆ ಉಪ ಚುನಾವಣೆಗೆ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆ ಜತೆಗೆ ಜೂನ್ 4ರಂದು ಮತ ಎಣಿಕೆ ಘೋಷಣೆಯಾಗಲಿದೆ.

ಮುಖ್ಯ ಚುನಾವಣಾ ಆಯುಕ್ತರು ಶನಿವಾರ 17ನೇ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದರು; ಮತದಾನವು ಏಪ್ರಿಲ್ 19 ರಿಂದ 7 ಹಂತಗಳಲ್ಲಿ ನಡೆಯಲಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆಯ ಜೊತೆಗೆ ನಾಲ್ಕು ರಾಜ್ಯಗಳಾದ ಸಿಕ್ಕಿಂ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ಒಡಿಶಾದಲ್ಲಿ ಏಕಕಾಲಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ; ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...