Homeಕರ್ನಾಟಕಉಪ ಚುನಾವಣೆ: ಶಿಗ್ಗಾಂವಿಯಿಂದ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಬಿಜೆಪಿಯಿಂದ ಕಣಕ್ಕೆ

ಉಪ ಚುನಾವಣೆ: ಶಿಗ್ಗಾಂವಿಯಿಂದ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಬಿಜೆಪಿಯಿಂದ ಕಣಕ್ಕೆ

- Advertisement -
- Advertisement -

ರಾಜ್ಯದ ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಇನ್ನೂ ಹೆಸರಿಸಲಾಗಿಲ್ಲ. ಅಕ್ಟೋಬರ್ 19ರ ಶನಿವಾರದಂದು ಪಕ್ಷವು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬಿ. ಬೊಮ್ಮಾಯಿ ಅವರನ್ನು ಶಿಗ್ಗಾಂವಿ ಕ್ಷೇತ್ರದಿಂದ ಮತ್ತು ರಾಜ್ಯ ಎಸ್ಟಿ ಮೋರ್ಚಾ ಮುಖ್ಯಸ್ಥ ಬಂಗಾರು ಹನುಮಂತು ಅವರನ್ನು ಸಂಡೂರು ಕ್ಷೇತ್ರದಿಂದ ಕಣಕ್ಕಿಳಿಸಿದೆ. ಶಿಗ್ಗಾಂವಿ ಉಪ ಚುನಾವಣೆ

ಶಿಗ್ಗಾಂವಿ ಕ್ಷೇತ್ರವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಗೆದ್ದ ನಂತರ ತೆರವಾಗಿತ್ತು. ಭರತ್ ಬೊಮ್ಮಾಯಿ ಅವರು ಯುಎಸ್‌ನ ಪರ್ಡ್ಯೂ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದ ನಂತರ ಸಿಂಗಾಪುರ್ ಮ್ಯಾನೇಜ್‌ಮೆಂಟ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿಯನ್ನು ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಂಗಾರು ಹನುಮಂತು ಬಿಎ, ಬಿಎಡ್ ಮಾಡಿದ್ದಾರೆ. ಸಂಡೂರು (ಎಸ್‌ಟಿ ಮೀಸಲು) ಕ್ಷೇತ್ರದಿಂದ ಬಿಜೆಪಿ ಪಕ್ಷ ಎಂದಿಗೂ ಗೆದ್ದಿಲ್ಲ. ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ.ವೈ. ರಾಘವೇಂಧ್ರೆ ಅವರು ಈ ಸ್ಥಾನವನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸುವಂತೆ ಕಾರ್ಯಕ್ರಮವೊಂದರಲ್ಲಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಶಿಗ್ಗಾಂವಿ ಉಪ ಚುನಾವಣೆ

ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾದ ಭರತ್ ಬೊಮ್ಮಾಯಿ ಮತ್ತು ಬಂಗಾರು ಹನುಮಂತು ಅವರನ್ನು ವಿಜಯೇಂದ್ರ ಅಭಿನಂದಿಸಿದ್ದು, ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಈ ಕ್ಷಣದಿಂದಲೇ ಯೋಧರಂತೆ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ಸ್ಥಾನವನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಬಿಜೆಪಿ ಸೇರಿರುವ ಗಣಿ ಉದ್ಯಮಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಂಡೂರು ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಸಂಡೂರು ಕ್ಷೇತ್ರವನ್ನು ಹಾಲಿ ಕಾಂಗ್ರೆಸ್ ಸಂಸದ ಇ.ತುಕಾರಾಂ ಪ್ರತಿನಿಧಿಸಿದ್ದರು. ಲೋಕಸಭೆ ಚುನಾವಣೆಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರದಲ್ಲಿ ತುಕಾರಾಂ ಅವರು ಬಿಜೆಪಿಯ ಅಭ್ಯರ್ಥಿ ಬಿ.ಶ್ರೀರಾಮುಲು ಅವರನ್ನು ಸೋಲಿಸಿದ್ದರು. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ, ಈ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಹಿರಿಯ ನಾಯಕ ಸಿ.ಪಿ. ಯೋಗೇಶ್ವರ ಚನ್ನಪಟ್ಟಣದಿಂದ ಕಣಕ್ಕಿಳಿಸಲು ಕುಮಾರಸ್ವಾಮಿ ಅವರೊಂದಿಗೆ ಬಿಜೆಪಿ ಮಾತುಕತೆ ನಡೆಸುತ್ತಿದೆ. ಆದರೆ, ಕುಮಾರಸ್ವಾಮಿ ತಮ್ಮ ಪಕ್ಷ ಜೆಡಿಎಸ್‌ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒತ್ತಾಯಿಸುತ್ತಿದ್ದಾರೆ. ಮೂಲಗಳ ಪ್ರಕಾರ ಚನ್ನಪಟ್ಟಣದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಬಯಸಿದ್ದು, ಇನ್ನೆರಡು ದಿನದಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ

ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...