ಫೇಸ್ ಬುಕ್ ಇಂಡಿಯಾ ಬಗ್ಗೆ ವಿಚಾರಣೆ: ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ
Courtesy: hindusthan times

ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಳ ನಂತರ ಕಾಂಗ್ರೆಸ್ ಪಕ್ಷವು ಜೂನ್ ವೇಳೆಗೆ ಚುನಾಯಿತ ಅಧ್ಯಕ್ಷರನ್ನು ಹೊಂದಲಿದೆ ಎಂದು ಪಕ್ಷದ ನಾಯಕ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆ ನಡೆಯಲಿದ್ದು ಶೀಘ್ರದಲ್ಲಿಯೇ ಹೊಸ ಅಧ್ಯಕ್ಷರನ್ನು ಪಡೆಯಲಿದ್ದೇವೆ ಎಂದಿದ್ದಾರೆ.

ಸಿಡಬ್ಲ್ಯುಸಿ ಸಭೆಯಲ್ಲಿ ಹಿರಿಯ ನಾಯಕರಾದ ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪಿ ಚಿದಂಬರಂ ಅವರು ತಕ್ಷಣದ ಸಾಂಸ್ಥಿಕ ಚುನಾವಣೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ ಬಂಗಾಳ, ತಮಿಳುನಾಡು ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆಯ ನಂತರ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆಯಬೇಕು ಎಂದು ಗಾಂಧಿ ಕುಟುಂಬಕ್ಕೆ ಹತ್ತಿರರಾದ ಅಶೋಕ್ ಗೆಹ್ಲೋಟ್, ಅಮರಿಂದರ್ ಸಿಂಗ್, ಎ.ಕೆ ಆಂಟನಿ, ತಾರಿಕ್ ಅನ್ವರ್ ಮತ್ತು ಉಮ್ಮನ್ ಚಾಂಡಿ ಹೇಳಿದ್ದಾರೆ. ಮೊದಲ ಆದ್ಯತೆ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಸಂಘಟನಾ ಚುನಾವಣೆ ಎಂದು ಅಭಿಪ್ರಾಯಪಟ್ಟಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನಪ್ಪಿದಾಗ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಅಂದಿನಿಂದ ಸೋನಿಯಾಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯುತ್ತಿದ್ದಾರೆ.

ಸೋನಿಯಾಗಾಂಧಿ ಬಹಳ ದಿನ ಅಧ್ಯಕ್ಷರಾಗಿ ಮುಂದುವರೆಯಲು ಸಾಧ್ಯವಿಲ್ಲ. ಹೊಸ ಅಧ್ಯಕ್ಷರು ಬೇಕು ಎಂಬ ಚರ್ಚೆ ಹಲವು ತಿಂಗಳಿನಿಂದ ಚಾಲ್ತಿಯಲ್ಲಿದೆ. ತಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಮತ್ತು ಗಾಂಧಿ ಕುಟುಂಬದ ಹೊರತಾದವರು ಅಧ್ಯಕ್ಷರಾಗಬೇಕೆಂದು ರಾಹುಲ್ ಉಚ್ಚರಿಸಿದ್ದಾರೆ.


ಇದನ್ನೂ ಓದಿ: ಅರ್ನಾಬ್ ವಾಟ್ಸಾಪ್ ಚಾಟ್ಸ್‌ ಕುರಿತು ಸರ್ಕಾರ ಮೌನವಾಗಿರುವುದೇಕೆ: ಸೋನಿಯಾ ಗಾಂಧಿ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here