Homeರಾಜಕೀಯ5 ಕ್ಷೇತ್ರಗಳ ಉಪಚುನಾವಣೆ: ಟಿಎಂಸಿ, ಕಾಂಗ್ರೆಸ್, ಆರ್‌ಜೆಡಿಗೆ ಮುನ್ನಡೆ - ಎಲ್ಲಾ ಕಡೆ ಮುಗ್ಗರಿಸಿದ ಬಿಜೆಪಿ

5 ಕ್ಷೇತ್ರಗಳ ಉಪಚುನಾವಣೆ: ಟಿಎಂಸಿ, ಕಾಂಗ್ರೆಸ್, ಆರ್‌ಜೆಡಿಗೆ ಮುನ್ನಡೆ – ಎಲ್ಲಾ ಕಡೆ ಮುಗ್ಗರಿಸಿದ ಬಿಜೆಪಿ

ಬಿಜೆಪಿ ಆಡಳಿತವಿರುವ ಬಿಹಾರದಲ್ಲಿಯೂ ಬಿಜೆಪಿ ಅಭ್ಯರ್ಥಿ ಹಿನ್ನಡೆ ಸಾಧಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರ ಮತ್ತು ಚತ್ತೀಸ್‌ಘಡ ರಾಜ್ಯಗಳಲ್ಲಿನ ನಾಲ್ಕು ವಿಧಾನಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಪಶ್ಚಿಮ ಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರ ಎರಡೂ ಕಡೆ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೆ ಬಿಜೆಪಿ ಅಭ್ಯರ್ಥಿಗಳು ಹಿನ್ನಡೆ ಅನುಭವಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಉತ್ತರ ಮತ್ತು ಚತ್ತೀಸ್‌ಘಡದ ಖೈರಾಘರ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದರೆ, ಬಿಹಾರದ ಬೋಛಾಹ ವಿಧಾನಸಭಾ ಕ್ಷೇತ್ರದಲ್ಲಿ ಆರ್‌ಜೆಡಿ ಅಭ್ಯರ್ಥಿ ಮುಂದಿದ್ದಾರೆ. ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ತೀವ್ರ ಹಿನ್ನಡೆ ಅನುಭವಿಸಿದ್ದು ಸೋಲಿನತ್ತ ಮುಖ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರಕ್ಕೆ ಟಿಎಂಸಿ ಹಿರಿಯ ನಾಯಕ ಶತ್ರುಘ್ನ ಸಿನ್ಹರನ್ನು ಕಣಕ್ಕಿಳಿಸಿತ್ತು. ಅವರು ಬಿಜೆಪಿ ಅಭ್ಯರ್ಥಿ ವಿರುದ್ದ 1.35 ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಅವರು ಅಸಾನ್ಸೋಲ್ ನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ. ಅದೇ ರೀತಿ ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರದಲ್ಲಿ ನಟ ಬಬುಲ್ ಸುಪ್ರಿಯೋ ಸ್ಪರ್ಧೆ ಮಾಡಿದ್ದು ಅವರು ಮುನ್ನಡೆ ಸಾಧಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಚತ್ತೀಸ್‌ಘಡದ ಖೈರಾಘರ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 3000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಉತ್ತರದಲ್ಲಿ 14,000 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಂದಿದ್ದಾರೆ. ಬಿಹಾರದಲ್ಲಿ ಆರ್‌ಜೆಡಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...