Homeಮುಖಪುಟಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

"ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ" ಎಂದು ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ ಅವಧಿಯನ್ನು ಪ್ರಸ್ತುತ ಎರಡು ವರ್ಷಗಳಿಂದ ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ತಮ್ಮ 12 ಸದಸ್ಯರ ಅಮಾನತು ಪ್ರಶ್ನಿಸಿದ ಪ್ರತಿಪಕ್ಷಗಳು ಸಭಾ ತ್ಯಾಗ ಮಾಡಿದ ನಡುವೆಯೇ ಮಂಗಳವಾರ ರಾಜ್ಯಸಭೆಯಲ್ಲಿ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ‘ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ, 2021’ ಮಂಡಿಸಿದರು.

ಮಂಡಿಸಲಾದ ಮಸೂದೆಯನ್ನು ಮೇಲ್ಮನೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯು ಈಗಾಗಲೇ ಡಿಸೆಂಬರ್ 3, 2021ರಂದು ಮಸೂದೆಯನ್ನು ಅಂಗೀಕರಿಸಿದೆ.

ಜಾರಿ ನಿರ್ದೇಶನಾಲಯದ ನಿರ್ದೇಶಕರ ಅವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ಡಿಸೆಂಬರ್ 9ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೇಂದ್ರ ಜಾಗೃತ ಆಯೋಗದ (ತಿದ್ದುಪಡಿ) ಮಸೂದೆ, 2021 ಅನ್ನು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಧ್ವನಿ ಮತದ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದರು.

ಜಾರಿ ನಿರ್ದೇಶನಾಲಯ (ಇ.ಡಿ.) ನಿರ್ದೇಶಕರ ಅವಧಿಯನ್ನು ಎರಡು ವರ್ಷದಿಂದ ಐದು ವರ್ಷಕ್ಕೆ ವಿಸ್ತರಿಸಲು ಮಸೂದೆ ಪ್ರಯತ್ನಿಸುತ್ತದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ ಪರಿಚಯಿಸಿದ ಸಚಿವ ಜೀತೇಂದ್ರ ಸಿಂಗ್‌, “ಈ ತಿದ್ದುಪಡಿಗಳನ್ನು ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿ ಮತ್ತು ಆರ್ಥಿಕ ಸ್ಥಿರತೆಗಾಗಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಭ್ರಷ್ಟಾಚಾರವನ್ನು ತಡೆಗಟ್ಟಲು, ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿನ ಪಾರದರ್ಶಕತೆಗಾಗಿ ಸರ್ಕಾರ ಕೆಲಸ ಮಾಡುತ್ತಿದೆ” ಎಂದರು.

ಇತ್ತೀಚಿನ ವರ್ಷಗಳಲ್ಲಿ ದೇಶವು ಭ್ರಷ್ಟಾಚಾರ, ಕಪ್ಪುಹಣ, ಮಾದಕವಸ್ತು ಕಳ್ಳಸಾಗಣೆ, ಭಯೋತ್ಪಾದನೆ ಮತ್ತು ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದ ಆತಂಕಗಳನ್ನು ಎದುರಿಸುತ್ತಿದೆ. ಇವೆಲ್ಲವೂ ದೇಶದ ಭದ್ರತೆ ಮತ್ತು ಆರ್ಥಿಕ ರಚನೆಗೆ ಆತಂಕಕಾರಿಯಾಗಿವೆ ಎಂದು ಹೇಳಿದರು.

ಅಪರಾಧದ ವಿಧಾನವು ಬದಲಾಗಿದೆ. ಅದು ಹೆಚ್ಚು ಅತ್ಯಾಧುನಿಕ ಮತ್ತು ರಚನಾತ್ಮಕವಾಗಿದೆ. ಹೀಗಾಗಿ ಅಪರಾಧ ತನಿಖೆ ಹೆಚ್ಚು ಕಷ್ಟಕರವಾಗಿದೆ. ಈ ಮಸೂದೆಯು ತನಿಖೆಯ ವೇಗವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಸಭಾತ್ಯಾಗ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್) ಅವರು ಅಮಾನತು ರದ್ದುಗೊಳಿಸುವಂತೆ ಮತ್ತು ಅಮಾನತುಗೊಂಡ 12 ಸದಸ್ಯರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಸಭಾಪತಿಯನ್ನು ಕೋರಿದರು. ಡಿಎಂಕೆಯ ತಿರುಚಿ ಶಿವ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರೂ ಅವರನ್ನು ಬೆಂಬಲಿಸಿದರು. ಆದರೆ, ಇದಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬಹುತೇಕ ಪ್ರತಿಪಕ್ಷ ಸದಸ್ಯರು ಮೇಲ್ಮನೆಯಿಂದ ಹೊರ ನಡೆದರು.

ಪ್ರಜಾಪ್ರಭುತ್ವದ ಹತ್ಯೆ: ರಾಹುಲ್ ಕಿಡಿ

ಸದಸ್ಯರ ಅಮಾನತು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, “ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಭಾರತದ ಜನರ ಧ್ವನಿಯನ್ನು ದಮನ ಮಾಡಿರುವ ಸಂಕೇತವಿದು. ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಸಂಸತ್ತಿನಲ್ಲಿ ಗದ್ದಲದ ನಡುವೆ ವಿಧೇಯಕ ಅಂಗೀಕಾರವಾಗುತ್ತಿದೆ. ಇದು ಸಂಸತ್ತನ್ನು ನಡೆಸುವ ವಿಧಾನವಲ್ಲ. ಪ್ರಧಾನಿ ಸದನಕ್ಕೆ ಬರುವುದಿಲ್ಲ. ರಾಷ್ಟ್ರೀಯ ಮಹತ್ವದ ಯಾವುದೇ ವಿಷಯವನ್ನು ಪ್ರಸ್ತಾಪಿಸಲು ನಮಗೆ ಅವಕಾಶವಿಲ್ಲ. ಇದು ಪ್ರಜಾಪ್ರಭುತ್ವದ ಹತ್ಯೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: 12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...