ಡಿಸೆಂಬರ್ 19 ರಂದು ಸುವರ್ಣಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅಶ್ಲೀಲವಾಗಿ ನಿಂದಿಸಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಕಲಬುರ್ಗಿಯಲ್ಲಿ ಹೇಳಿದ್ದಾರೆ. ಅಷ್ಟೆ ಅಲ್ಲದೆ, ಘಟನೆಗೆ ಹಲವು ಎಂಎಲ್‌ಸಿಗಳು ಕೂಡಾ ಸಾಕ್ಷಿಯಾಗಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಸಿ.ಟಿ. ರವಿ ಅಶ್ಲೀಲ
“ಅದು ಕ್ರಿಮಿನಲ್ ಅಪರಾಧವಾಗಿದ್ದು, ನಾವು ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದೇವೆ. ಹಾಗಾದರೆ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಕೇಳುತ್ತಿದ್ದಾರೆ?” ಎಂದು ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕರ ನಡೆ ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಅವರು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಪುರಾವೆಗಳಿವೆ. ಅನೇಕ ಎಂಎಲ್‌ಸಿಗಳು ಅವರನ್ನು ಕೇಳಿದ್ದಾರೆ. ಇದು ಕ್ರಿಮಿನಲ್ ಅಪರಾಧಕ್ಕೆ ಸಮಾನವಾಗಿದೆ, ಅಲ್ಲವೇ?” ಎಂದು ಸಿಎಂ ಕೇಳಿದ್ದಾರೆ. ಸಿ.ಟಿ. ರವಿ ಅಶ್ಲೀಲ
ಡಿಸೆಂಬರ್ 19 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪಿಸಲಾಗಿದೆ. ಈ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು, ಸಚಿವರ ಅಭಿಮಾನಿಗಳು ಸುವರ್ಣಸೌಧದ ಮೊಗಸಾಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದರು.
ಬಿಜೆಪಿಯ ಸಿ.ಟಿ. ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದು, ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ ಎಂದು ವರದಿಯಾಗಿತ್ತು. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದ್ದು, ಹತ್ತು ಬಾರಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ : ಸಿಎಂ ಸಿದ್ದರಾಮಯ್ಯ


