Homeಕರ್ನಾಟಕಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪ್ರತಿದೂರು : ಇಂದು ಬಿಜೆಪಿ-ಕಾಂಗ್ರೆಸ್ ಪ್ರತಿಭಟನೆ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪ್ರತಿದೂರು : ಇಂದು ಬಿಜೆಪಿ-ಕಾಂಗ್ರೆಸ್ ಪ್ರತಿಭಟನೆ

- Advertisement -
- Advertisement -

ವಿಧಾನಪರಿಷತ್‌ನಲ್ಲಿ ಗುರುವಾರ (ಡಿ.19) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ ರವಿ ಅವಾಚ್ಯ ಶಬ್ಧ ಬಳಸಿ ನಿಂದಿಸಿದ್ದಾರೆ ಎಂಬ ವಿಚಾರ ರಾಜ್ಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ.

ನಿನ್ನೆ (ಡಿ.19) ಸಂಜೆ ಬೆಳಗಾವಿಯ ಸುವರ್ಣಸೌಧದಲ್ಲಿ ಬಂಧನಕ್ಕೊಳಗಾದ ಸಿ.ಟಿ ರವಿ ಅವರನ್ನು ತಡರಾತ್ರಿ ಬೆಳಗಾವಿಯಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ವರದಿಯಾಗಿತ್ತು. ಆದರೆ, ಇಂದು ಮುಂಜಾನೆಯ ವರದಿಗಳು ರವಿ ಅವರನ್ನು ರಾತ್ರಿಯಿಡೀ ಬೆಳಗಾವಿ ಜಿಲ್ಲೆಯಲ್ಲೇ ಸುತ್ತಾಡಿಸಲಾಗಿದೆ. ಪ್ರಸ್ತುತ ಅವರು ಜಿಲ್ಲೆಯ ಯರಗಟ್ಟಿ ಸಮೀಪ ಇದ್ದಾರೆ ಎಂದು ಹೇಳಿವೆ.

ಇಂದು ಸಿ.ಟಿ ರವಿ ಅವರನ್ನು ಬೆಳಗಾವಿಯಲ್ಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದಾ?, ಇಲ್ಲಾ ಬೆಂಗಳೂರಿಗೆ ಕರೆತಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರಾ? ಎಂಬುವುದು ತಿಳಿದು ಬರಬೇಕಿದೆ.

ಸಿ.ಟಿ ರವಿ ಪ್ರತಿದೂರು

ಅವಾಚ್ಯ ಪದ ಬಳಸಿ ನನ್ನನ್ನು ನಿಂದಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿನ್ನೆ ಸಂಜೆ ಸಿ.ಟಿ ರವಿ ವಿರುದ್ದ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬೆನ್ನಲ್ಲೇ ಅವರ ಬಂಧನವಾಗಿದೆ. ನಂತರ ರಾತ್ರಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಸಿ.ಟಿ ರವಿ ಪ್ರತಿದೂರು ದಾಖಲಿಸಿದ್ದಾರೆ. “ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಸಿ.ಟಿ ರವಿ ತಲೆಗೆ ಗಾಯ

ತಡರಾತ್ರಿ ಖಾನಾಪುರ ಪೊಲೀಸ್ ಠಾಣೆಯಿಂದ ಹೊರ ಬಂದಾಗ ಸಿ.ಟಿ ರವಿ ತಲೆಯಲ್ಲಿ ಗಾಯ ಆಗಿರುವುದು ಕಂಡು ಬಂದಿದೆ. ಆದರೆ, ಅದಕ್ಕೆ ಕಾರಣ ಏನು ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ. ಬಿಜೆಪಿಯವರು ಪೊಲೀಸರು ಸಿ.ಟಿ ರವಿ ಮೇಲೆ ಠಾಣೆಯಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ವಿರುದ್ದ ತಡರಾತ್ರಿ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ ಸಿ.ಟಿ ರವಿ

ನನಗಾಗುವ ತೊಂದರೆಗೆ ಸರ್ಕಾರ ಕಾರಣ-ಸಿ.ಟಿ ರವಿ

ಇಂದು (ಡಿ.20) ಮುಂಜಾನೆ 5.30ರ ಸುಮಾರಿಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿ.ಟಿ ರವಿ “ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು. ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್‌ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೇಸ್ ಸರ್ಕಾರವೇ ಕಾರಣ” ಎಂದು ಬರೆದುಕೊಂಡಿದ್ದಾರೆ.

ರಕ್ತ ಬರುವಂತೆ ಹೊಡೆದಿದ್ದಾರೆ -ಆರ್‌. ಅಶೋಕ್

ಪೊಲೀಸರು ಸಿ.ಟಿ ರವಿಗೆ ರಕ್ತ ಬರುವಂತೆ ಹೊಡೆದಿದ್ದಾರೆ. ಈ ಕಾಂಗ್ರೆಸ್​ನವರು ಏನು ಮಾಡುವುದಕ್ಕೂ ಹಿಂಜರಿಯುವುದಿಲ್ಲ. ಸರ್ಕಾರ ಬೆಳಗಾವಿಯನ್ನು ಮಿನಿ ಪಾಕಿಸ್ತಾನ ಮಾಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.

ಇಂದು ಕಾಂಗ್ರೆಸ್-ಬಿಜೆಪಿ ಪ್ರತಿಭಟನೆ, ಚಿಕ್ಕಮಗಳೂರು ಬಂದ್‌ಗೆ ಕರೆ

ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದ ಬಳಸಿ ನಿಂದಿಸಿರುವುದನ್ನು ಖಂಡಿಸಿ ಮತ್ತು ಸಿ.ಟಿ ರವಿ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿಯ ಕ್ವೀನ್ಸ್ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಮಾಹಿತಿ ದೊರೆತಿದೆ. ಇದರ ಜೊತೆಗೆ ರಾಜ್ಯದ ವಿವಿದೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಸಿ.ಟಿ ರವಿ ವಿರುದ್ದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.

ಮತ್ತೊಂದೆಡೆ, ಸಿ.ಟಿ ರವಿ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಇಂದು ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಚಿಕ್ಕಮಗಳೂರು ಬಿಜೆಪಿ ಇಂದು ಜಿಲ್ಲಾ ಬಂದ್‌ಗೆ ಕರೆ ಕೊಟ್ಟಿದೆ.

ಇದನ್ನೂ ಓದಿ : ಮುಡಾ ಪ್ರಕರಣ| ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...