Homeಮುಖಪುಟಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಕೊರೊನಾ ಲಸಿಕಾ ಅಭಿಯಾನ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಜಾರಿ ಮಾಡುತ್ತೇವೆ ಎಂದು ಗೃಹಮಂತ್ರಿ ಅಮಿತ್ ಶಾ ಹೇಳಿದ್ದರು.

- Advertisement -
- Advertisement -

ಕೊರೊನಾ ಲಸಿಕಾ ಅಭಿಯಾನ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಜಾರಿ ಮಾಡುತ್ತೇವೆ ಎಂದು ಗೃಹಮಂತ್ರಿ ಅಮಿತ್ ಶಾ ಹೇಳಿದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಸಿಎಎ ಜಾರಿ ಮಾಡುವುದಿಲ್ಲ” ಎಂದು ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ್ದಾರೆ.

“ಕೋವಿಡ್ ಲಸಿಕೆ ಅಭಿಯಾನ ಮುಗಿದ ನಂತರ ಸಿಎಎ ಜಾರಿಗೆ ತರುವುದಾಗಿ ಗೃಹ ಸಚಿವರು ಹೇಳಿದ್ದಾರೆ. ನಾವು ಈಗಾಗಲೇ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ಕೇರಳದಲ್ಲಿ ಈ ಅನಾಹುತವನ್ನು ನಮ್ಮ ಸರ್ಕಾರ ಅನುಮತಿಸುವುದಿಲ್ಲ” ಎಂದು ಪಿಣರಾಯಿ ವಿಜಯನ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಮತ್ತು ಎನ್‌ಆರ್‌ಸಿ ಜಾರಿಯಿಂದಾಗುವ ಆರ್ಥಿಕ ನಷ್ಟವೆಷ್ಟು?

ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿರುವ ಅಮಿತ್ ಶಾ, ಮಟುವಾ ಸಮುದಾಯವನ್ನು ಉದ್ದೇಶಿಸಿ “ಹೊಸ ಪೌರತ್ವ ಕಾನೂನನ್ನು ತರುವುದಾಗಿ ಮೋದಿ ಸರ್ಕಾರ 2018 ರಲ್ಲಿ ಭರವಸೆ ನೀಡಿತ್ತು. ಹಾಗಾಗಿ 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ ಅದನ್ನು ಕಾನೂನು ಮಾಡಿತು. ಆದರೆ 2020 ರಲ್ಲಿ ದೇಶವು COVID-19 ಸಾಂಕ್ರಾಮಿಕಕ್ಕೆ ಒಳಗಾದ ನಂತರ ಸಿಎಎ ಅನುಷ್ಠಾನವನ್ನು ತಡೆಹಿಡಿಯಬೇಕಾಯಿತು. ಕೊರೊನಾ ಲಸಿಕಾ ಅಭಿಯಾನ ಮುಗಿದ ನಂತರ ದೇಶದಾದ್ಯಂತ ಸಿಎಎ ಜಾರಿ ಮಾಡಲಾಗುವುದು” ಎಂದು ತಿಳಿಸಿದ್ದರು.

ಸಿಎಎ ಜಾರಿಯನ್ನು ವಿರೋಧಿಸಿ 2019 ರಲ್ಲಿ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ಸಿಎಎ ಜಾರಿಯನ್ನು ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿದ ರಾಜ್ಯ ಕೇರಳ.

ಸಿಎಎ ಮತ್ತು ಎನ್‌ಆರ್‌ಸಿ ಜಾರಿಯಾದರೆ ಭಾರತದಲ್ಲಿರುವ ಮುಸ್ಲಿಮರು ಮಾತ್ರವಲ್ಲದೇ ಅನೆಕರು ಪೌರತ್ವವನ್ನು ಕಳೆದುಕೊಳ್ಳುತ್ತಾರೆ. ಅಷ್ಟೆ ಅಲ್ಲದೇ ಈ ಕಾಯ್ದೆಯು ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಹಲವಾರು ತಜ್ಞರು ಅಭಿಪ್ರಾಯಪಟ್ಟಿದ್ದರು.


ಇದನ್ನೂ ಓದಿ: ಸಿಎಎ, ಎನ್‌ಆರ್‌ಸಿ ಕುರಿತು …. ಐಎಎಸ್ ಅಧಿಕಾರಿಗಳು ಏನು ಹೇಳುತ್ತಾರೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...