Homeಮುಖಪುಟಸಿಎಎಯಿಂದ ಒಬ್ಬ ಮುಸ್ಲಿಮನಿಗೂ ದುಷ್ಪರಿಣಾಮ ಉಂಟಾಗುವುದಿಲ್ಲ: ಯಡಿಯೂರಪ್ಪ

ಸಿಎಎಯಿಂದ ಒಬ್ಬ ಮುಸ್ಲಿಮನಿಗೂ ದುಷ್ಪರಿಣಾಮ ಉಂಟಾಗುವುದಿಲ್ಲ: ಯಡಿಯೂರಪ್ಪ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ರಾಜ್ಯದ್ಯಂತ ಬಿಜೆಪಿ ಜಾಗೃತಿ ಮೂಡಿಸಲು ಕರ್ನಾಟಕದ ಮನೆ-ಮನೆ ಪ್ರಚಾರದ ಭಾಗವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಜನರನ್ನು ಭೇಟಿಯಾಗಿ ಸಂವಾದ ನಡೆಸಿದರು..

‘ಕಾಂಗ್ರೆಸ್ ಮುಸ್ಲಿಂ ಸಮುದಾಯದಲ್ಲಿ ಗೊಂದಲವನ್ನು ಸೃಷ್ಟಿಸುತ್ತಿದೆ. ಸಿಎಎ ಕಾರಣದಿಂದಾಗಿ ಒಬ್ಬ ಮುಸ್ಲಿಮರೂ ಸಹ ಪರಿಣಾಮ ಬೀರುವುದಿಲ್ಲ ಎಂದು ನಾನು ಜನರಿಗೆ ಹೇಳುತ್ತಿದ್ದೇನೆ’ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ತುಮಕೂರಿನಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌ ಅಭಿಯಾನಕ್ಕೆ ಚಾಲನೆ ನೀಡಿದರೆ, ಹೊಸಪೇಟೆಯಲ್ಲಿ ಡಿಸಿಎಂ ಲಕ್ಷ್ಮಣ್‌ ಸವದಿ ಉದ್ಘಾಟನೆ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಡಿಸಿಎಂ ಅಶ್ವಥ್‌ ನಾರಾಯಣ್‌ ಕೆಲವು ಏರಿಯಾಗಳಲ್ಲಿ ಮನೆ ಮನೆ ಪ್ರಚಾರ ಆರಂಭಿಸಿದ್ದಾರೆ. ಜ್ಞಾನಪೀಠ ಪ್ರಶಸ್ತಿ ವಿಜೇತ ಚಂದ್ರಶೇಖರ ಕಂಬಾರರ ಮನೆಗೆ ತೆರಳಿ ಅವರಿಗೆ ಸಿಎಎ ಕುರಿತ ಕಿರುಹೊತ್ತಿಗೆ ನೀಡಿ ಮಾತುಕತೆ ನಡೆಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read