HomeಮುಖಪುಟCAA ಅಂತಿಮ ಕರಡು ಮಾ.30ರೊಳಗೆ ಸಿದ್ದವಾಗಲಿದೆ: ಸಚಿವ ಅಜಯ್ ಮಿಶ್ರಾ

CAA ಅಂತಿಮ ಕರಡು ಮಾ.30ರೊಳಗೆ ಸಿದ್ದವಾಗಲಿದೆ: ಸಚಿವ ಅಜಯ್ ಮಿಶ್ರಾ

- Advertisement -
- Advertisement -

ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು 2024ರ ಮಾ.30 ರೊಳಗೆ ಸಿದ್ಧವಾಗಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭಾನುವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ದಲಿತ ಮಟುವಾ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅಜಯ್ ಮಿಶ್ರಾ, ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಮಾಟುವಾ ಸಮುದಾಯದ ಜನರು ವಿಭಜನೆಯ ನಂತರ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ ಎಂದು ಹೇಳಲಾಗುತ್ತದೆ. ಮಾಟುವಾಗಳಿಂದ ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮುಂದಿನ ವರ್ಷ ಮಾರ್ಚ್ ವೇಳೆಗೆ ಸಿಎಎಯ ಅಂತಿಮ ಕರಡು ಜಾರಿಗೆ ಬರಲು ಸಿದ್ಧವಾಗಲಿದೆ ಎಂದು ಉತ್ತರಪ್ರದೇಶದ ಬಿಜೆಪಿ ಸಂಸದರು ಕೂಡ ಆಗಿರುವ ಅಜಯ್‌ ಮಿಶ್ರಾ, ಠಾಕೂರ್‌ ನಗರದಲ್ಲಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಟಿಎಂಸಿ ರಾಜ್ಯಸಭಾ ಸಂಸದ ಸಂತಾನು ಸೇನ್, ಬಿಜೆಪಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಮಟುವಾ ಸಮುದಾಯ ಮತ್ತು ಸಿಎಎ ನೆನಪಾಗುತ್ತದೆ. ಕೇಸರಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಗೆ ತರಲು ಸಾಧ್ಯವಾಗುವುದಿಲ್ಲ. 2024ರ ಚುನಾವಣೆಯಲ್ಲಿ ಕೇಸರಿ ಪಕ್ಷವು ಎಲ್ಲರಿಂದ ತಿರಸ್ಕರಿಸಲ್ಪಡುತ್ತದೆ. ಬಿಜೆಪಿಯ ಸುಳ್ಳು ಹೇಳಿಕೆಗಳನ್ನು ಮಟುವಾ ಸಮುದಾಯದ ಜನರು ಮತ್ತು ಇತರ ಸಮುದಾಯದ ಜನರು ಅರಿತಿದ್ದಾರೆ ಎಂದು ಹೇಳಿದ್ದಾರೆ.

ಮಟುವಾ ಸಮುದಾಯ ಪಶ್ಚಿಮ ಬಂಗಾಳದಲ್ಲಿ ಕನಿಷ್ಠ 6 ಸಂಸದೀಯ ಸ್ಥಾನಗಳನ್ನು ಹೊಂದಿರುವ ಪರಿಶಿಷ್ಟ ಜಾತಿ ಗುಂಪು. 2001ರ ಜನಗಣತಿಯ ಪ್ರಕಾರ ಇವರು ರಾಜ್ಯದಲ್ಲಿ 17.4 ಶೇಕಡಾ ಜನಸಂಖ್ಯೆಯನ್ನು ಒಳಗೊಂಡಿದ್ದಾರೆ. ಪೌರತ್ವ ಪಡೆಯುವುದು ಈ ನಿರಾಶ್ರಿತ ಸಮುದಾಯದ ಬಹುಕಾಲದ ಬೇಡಿಕೆಗಳಲ್ಲಿ ಒಂದಾಗಿದೆ. ಅವರ ಬೆಂಬಲವನ್ನು ಪಡೆಯುವ ಪ್ರಯತ್ನದಲ್ಲಿ ಬಿಜೆಪಿ ಕಳೆದ ವರ್ಷ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್‌ನಲ್ಲಿ ಸಿಎಎ ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು.

ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಪ್ರಾಸ್ತವಿತ ಕಾಯ್ದೆಯು ದೇಶದಲ್ಲಿ ಭಾರೀ ಜನ ವಿರೋಧಕ್ಕೆ ಕಾರಣವಾಗಿತ್ತು.

ಇದನ್ನು ಓದಿ: ಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...