Homeಮುಖಪುಟಸಿಎಎ ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗ: ಕೇಜ್ರಿವಾಲ್ ವಾಗ್ಧಾಳಿ

ಸಿಎಎ ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗ: ಕೇಜ್ರಿವಾಲ್ ವಾಗ್ಧಾಳಿ

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿರುವುದು ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದು, ಕಾಯ್ದೆಯನ್ನು ರದ್ದು ಪಡಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ವಿಡಿಯೋ ಹೇಳಿಕೆಯನ್ನು ಹಂಚಿಕೊಂಡಿರುವ ಅರವಿಂದ್ ಕೇಜ್ರಿವಾಲ್‌, ಈ ಕಾನೂನಿನ ಮೂಲಕ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹೆಚ್ಚಿನ ಸಂಖ್ಯೆಯ ಬಡ ಅಲ್ಪಸಂಖ್ಯಾತರು ಪ್ರವಾಹದ ರೀತಿ ಭಾರತಕ್ಕೆ ಬರಲು ಬಾಗಿಲು ತೆರೆದಿದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ 3.5 ಕೋಟಿ ಅಲ್ಪಸಂಖ್ಯಾತರಿದ್ದಾರೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಡ ವಲಸಿಗರಿಗೆ ಇಲ್ಲಿ ಮನೆ ಮತ್ತು ಉದ್ಯೋಗಗಳನ್ನು ನೀಡುವ ಮೂಲಕ ನಮ್ಮ ಜನರ ಹಣವನ್ನು ಖರ್ಚು ಮಾಡಲು ಬಿಜೆಪಿ ಬಯಸಿದೆ ಎಂದು ಹೇಳಿದ್ದಾರೆ.

ನೆರೆಯ ರಾಷ್ಟ್ರಗಳ ಬಡ ಅಲ್ಪಸಂಖ್ಯಾತರು ಭಾರತದಲ್ಲಿ ನೆಲೆಯೂರುವುದರಿಂದ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ಲಾಭವಾಗಲಿದೆ. ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ ಮಾಡಿರುವುದು ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗವಾಗಿದೆ. ದೇಶವು ಸಿಎಎ ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತದೆ ಮತ್ತು ಕಾನೂನನ್ನು ರದ್ದುಗೊಳಿಸದಿದ್ದರೆ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಅವರು ಜನರಿಗೆ ಮನವಿಯನ್ನು ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

2019ರಲ್ಲಿ ಕೈಗೊಂಡ ತಿದ್ದುಪಡಿಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದವರಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ಸೇರಿದವರಿಗೆ ಮಾತ್ರ ಭಾರತದ ಪೌರತ್ವ ನೀಡಬೇಕು ಎಂಬ ಅಂಶವನ್ನು ಸೇರಿಸಲಾಗಿದೆ. ಈ ಸಮುದಾಯಗಳವರು ತಮ್ಮ ದೇಶಗಳಿಂದ ಭಾರತಕ್ಕೆ ಕಾಲಿಟ್ಟ ದಿನಾಂಕದಿಂದಲೇ ಅವರಿಗೆ ಪೌರತ್ವ ಅನ್ವಯವಾಗುತ್ತದೆ. ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

ಇದನ್ನು ಓದಿ: ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...