Homeಮುಖಪುಟಲೋಕಸಭೆ ಚುನಾವಣೆಗೆ ಮೊದಲೇ ಅಸಂವಿಧಾನಿಕ CAA ಕಾಯ್ದೆ ಜಾರಿ?

ಲೋಕಸಭೆ ಚುನಾವಣೆಗೆ ಮೊದಲೇ ಅಸಂವಿಧಾನಿಕ CAA ಕಾಯ್ದೆ ಜಾರಿ?

- Advertisement -
- Advertisement -

ಲೋಕಸಭೆ ಚುನಾವಣೆಗೆ ಮೊದಲೇ ಅಸಂವಿಧಾನಿಕ ಸಿಎಎ (ಪೌರತ್ವ ತಿದ್ದುಪಡಿ) ಕಾಯ್ದೆ ಜಾರಿ ಸಾಧ್ಯತೆ ಇದೆ. 7 ದಿನಗಳಲ್ಲಿ ಸಿಎಎ ಕಾಯ್ದೆಯನ್ನು ರಾಷ್ಟ್ರವ್ಯಾಪಿ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದು, ವಿವಾದಾತ್ಮಕ ಕಾಯ್ದೆ ಮತ್ತೆ ಮುನ್ನೆಲೆಗೆ ಬಂದಿದೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯಸಚಿವ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ (ದೇವಾಲಯ) ಉದ್ಘಾಟನೆಯಾಗಿದೆ ಮತ್ತು ಮುಂದಿನ 7 ದಿನಗಳಲ್ಲಿ ಸಿಎಎ ದೇಶಾದ್ಯಂತ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ. ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎಯನ್ನು ಒಂದು ವಾರದೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಿಎಎ ಕಾಯ್ದೆ ಕುರಿತ ನಿಯಮಗಳನ್ನು ಲೋಕಸಭೆ ಚುನಾವಣೆ ಘೋಷಣೆಗೆ ಮೊದಲೇ ಸೂಚಿಸುವುದಾಗಿ ಹೇಳಿರುವ ಬಗ್ಗೆ ಪಿಟಿಐ ವರದಿ ಉಲ್ಲೇಖಿಸಿದೆ. ಜನವರಿ 3ರಂದು ಮಾತನಾಡಿದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಸಂವಿಧಾನಿಕ ಎಂದು ಕರೆದಿದ್ದು, ಧರ್ಮದ ಆಧಾರದ ಮೇಲೆ ಕಾಯ್ದೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದರು.

ಕಳೆದ ಡಿಸೆಂಬರ್ 27ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಏಕೆಂದರೆ ಇದು ದೇಶದ ಕಾನೂನಿನಂತೆ ನಿಂತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ವಿಷಯದಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ.  ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದರು.

ಸಂಸದೀಯ ಕಾರ್ಯವಿಧಾನಗಳ ಕೈಪಿಡಿಯ ಪ್ರಕಾರ, ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದ ಆರು ತಿಂಗಳೊಳಗೆ ಮಸೂದೆಯ ಶಾಸನಕ್ಕಾಗಿ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ನಿಯಮಗಳು ನಿರ್ದೇಶಿಸುತ್ತವೆ. ಇಲ್ಲದಿದ್ದರೆ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಅಧೀನ ಶಾಸನಗಳ ಸಮಿತಿಗಳಿಂದ ವಿಸ್ತರಣೆಯನ್ನು ಕೋರಬಹುದಾಗಿದೆ.

9 ರಾಜ್ಯಗಳಲ್ಲಿ 30ಕ್ಕೂ ಹೆಚ್ಚು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಗೃಹ ಕಾರ್ಯದರ್ಶಿಗಳಿಗೆ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಆಗಮಿಸುವ ಹಿಂದೂಗಳು, ಸಿಖ್‌ಗಳು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ಕಾಯ್ದೆಯ-1955ರಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲು ಅಧಿಕಾರವನ್ನು ಪಡೆದಿದ್ದಾರೆ. 2021-22ರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ವರದಿಯ ಪ್ರಕಾರ, ಏಪ್ರಿಲ್ 1, 2021 ರಿಂದ ಡಿಸೆಂಬರ್ 31, 2021ರ ನಡುವೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳ ಒಟ್ಟು 1,414 ವ್ಯಕ್ತಿಗಳಿಗೆ ಪೌರತ್ವ ನೀಡಲಾಗಿದೆ.

 

ಇದನ್ನು ಓದಿ: ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...