Homeಮುಖಪುಟಸಿಎಎ ಈ ನೆಲದ ಕಾನೂನು, ಅದರ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ಸಿಎಎ ಈ ನೆಲದ ಕಾನೂನು, ಅದರ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅನುಷ್ಠಾನವನ್ನು ಯಾರೂ ಕೂಡ ತಡೆಯಲು ಸಾಧ್ಯವಿಲ್ಲ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಈ ಮೂಲಕ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಿಎಎ ಮತ್ತೆ ಮುನ್ನೆಲೆಗೆ ಬಂದಿದೆ.

ಬಂಗಾಳದ ರಾಷ್ಟ್ರೀಯ ಗ್ರಂಥಾಲಯದಲ್ಲಿ ರಾಜ್ಯ ಬಿಜೆಪಿಯ ಸಾಮಾಜಿಕ ಮಾಧ್ಯಮ ಮತ್ತು ಐಟಿ ವಿಭಾಗದ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಸಿಎಎ ಈ ನೆಲದ ಕಾನೂನು, ಅದರ ಅನುಷ್ಠಾನವನ್ನು ಯಾರೂ ಕೂಡ ತಡೆಯಲು ಸಾಧ್ಯವಿಲ್ಲ. ಸಿಎಎ ಜಾರಿಗೊಳಿಸುವುದು ಪಕ್ಷದ ಬದ್ಧತೆಯಾಗಿದೆ ಎಂದು ಹೇಳಿದರು.

ಬಂಗಾಳದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರ್ಕಾರವು ಒಳನುಸುಳುವಿಕೆ, ಗೋವು ಕಳ್ಳಸಾಗಣೆಕೆಯನ್ನು ಕೊನೆಗೊಳಿಸಲಿದೆ ಮತ್ತು ಸಿಎಎ ಮೂಲಕ ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಜನರಿಗೆ ಪೌರತ್ವವನ್ನು ನೀಡುತ್ತದೆ. ಮಮತಾ ಬ್ಯಾನರ್ಜಿಯನ್ನು ಉದ್ದೇಶಿಸಿ, ಅವರು ದೇಶದಲ್ಲಿ ಸಿಎಎ ವಿಚಾರದಲ್ಲಿ ಜನರನ್ನು, ನಿರಾಶ್ರಿತರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಾರೆ. ಸಿಎಎ ದೇಶದ ಕಾನೂನು ಮತ್ತು ಅದರ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಕೋಲ್ಕತ್ತಾದಲ್ಲಿ ನವೆಂಬರ್‌ನಲ್ಲಿ ಮಾತನಾಡಿದ್ದ ಅಮಿತ್‌ ಶಾ,  ಸಿಎಎಯನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದರು.

ಇತ್ತೀಚೆಗೆ ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ದಲಿತ ಮಟುವಾ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿಯ ಅಜಯ್ ಮಿಶ್ರಾ, ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು 2024ರ ಮಾ.30ರೊಳಗೆ ಸಿದ್ಧವಾಗಲಿದೆ  ಎಂದು ಹೇಳಿದ್ದರು. ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಮಾಟುವಾ ಸಮುದಾಯದ ಜನರು ವಿಭಜನೆಯ ನಂತರ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ. ಮಾಟುವಾಗಳಿಗೆ ಪೌರತ್ವದ ಹಕ್ಕುಗಳನ್ನು ನೀಡುತ್ತೇವೆ ಎಂದು ಹೇಳಿದ್ದರು.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪ್ರತಿಪಕ್ಷಗಳಂತೆಯೇ ಸಿಎಎಯನ್ನು ಬಲವಾಗಿ ವಿರೋಧಿಸುತ್ತಿದೆ. ವಿವಾದಾತ್ಮಕ ಸಿಎಎ ಜಾರಿಗೊಳಿಸುವ ಭರವಸೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಅಸ್ತ್ರವಾಗಿತ್ತು. ಕೇಸರಿ ಪಕ್ಷದ ನಾಯಕರು ಬಂಗಾಳದಲ್ಲಿ ಬಿಜೆಪಿಯ ಉದಯಕ್ಕೆ ಕಾರಣವಾದ ಅಂಶವೆಂದು ಇದನ್ನು ಪರಿಗಣಿಸುತ್ತಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಇದೀಗ ಸಿಎಎಯನ್ನು ಮುನ್ನೆಲೆಗೆ ತರುತ್ತಿದ್ದು, ಚುನಾವಣೆಯ ಅಸ್ತ್ರವನ್ನಾಗಿ ಮಾಡಲು ಮುಂದಾಗಿದೆ.

ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಪ್ರಾಸ್ತವಿತ ಕಾಯ್ದೆಯು ದೇಶದಲ್ಲಿ ಭಾರೀ ಜನ ವಿರೋಧಕ್ಕೆ ಕಾರಣವಾಗಿತ್ತು.

ಇದನ್ನು ಓದಿ: ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

0
ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆ ಅಸಿಂಧುಗೊಳಿ, ಮರು ಚುನಾವಣೆ ನಡೆಸಲು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಸಕಾರಣವಿಲ್ಲದೆ ತನ್ನ ನಾಮಪತ್ರ...