Homeಮುಖಪುಟಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

- Advertisement -
- Advertisement -

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಎನ್.ಪಿ.ಆರ್ ನಂತಹ ಮಹತ್ವ ಮಸೂದೆಗಳನ್ನು ವ್ಯವಹಾರಗಳ ಸಲಹಾ ಸಮಿತಿ ಮುಂದೆ ಚರ್ಚೆಗಿಡದೆ ನೇರವಾಗಿ ಸಂಸತ್ತಿನಲ್ಲಿ ಅಧಿವೇಶನದಲ್ಲಿ ಮಂಡಿಸಿ ಕಾಯ್ದೆಗಳನ್ನಾಗಿ ಜಾರಿಗೊಳಿಸಿರುವುದು ಅಸಂವಿಧಾನಿಕ ಎಂದು ಸಿಪಿಎಂ ಪಕ್ಷದ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ ಆರೋಪಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಫೆ.23ರಂದು ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಸಿಎಎ, ಎನ್ಆರ್.ಸಿ. ಎನ್.ಪಿ.ಆರ್ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ರಾಜಕೀಯ ಮತ್ತು ಸಂಸದೀಯ ಇತಿಹಾಸದಲ್ಲಿ ಇದೇ ಮೊದಲಿಗೆ ಧರ್ಮಾಧಾರಿತ ಪೌರತ್ವ ನೋಂದಣಿ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಧರ್ಮಾಧಾರಿತ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಅವರ ನಿಜವಾದ ಬಣ್ಣ ಬಯಲಾಗಿದೆ. ಸಂವಿಧಾನಕ್ಕೆ ಪರ್ಯಾಯವಾಗಿ ದೇಶದಲ್ಲಿ ಅಧಿಕಾರ ಕೇಂದ್ರವೊಂದಿದೆ. ಅದು ಆರ್.ಎಸ್.ಎಸ್. ಮೂಲಸ್ಥಾನ ನಾಗಪುರ. ಅಲ್ಲಿ ಸಿದ್ದಗೊಳ್ಳುವ ನಿಯಮಗಳು ಕಾನೂನುಗಳಾಗುತ್ತಿವೆ. ಭಾರತೀಯ ಜನತಾ ಪಕ್ಷ ಆರ್.ಎಸ್.ಎಸ್.ನ ರಾಜಕೀಯ ಅಸ್ತ್ರವಾಗಿದೆ ಎಂದು ಹೇಳಿದರು.

ಹಿಂದೆ ಯಾವುದೇ ಕಾಯ್ದೆಗಳು ರೂಪುಗೊಳ್ಳುವ ಮೊದಲು ಸಾರ್ವಜನಿಕವಾಗಿ ಚರ್ಚೆಗೆ ಒಳಪಡುತ್ತಿದ್ದವು. ಹಲವು ಸಭೆಗಳಲ್ಲಿ, ಸಂಸತ್ ನಲ್ಲಿ ಗಂಭೀರವಾದ ಚರ್ಚೆ ನಡೆದು ಅದರ ಸಾಧಕಬಾಧಕಗಳನ್ನು ಗುರುತಿಸಿ ಆನಂತರ ಕಾಯ್ದೆಗಳು ಜಾರಿಯಾಗುತ್ತಿದ್ದವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಮಸೂಸೆಯ ಬಗ್ಗೆ ಚರ್ಚೆಗಳು ನಡೆದಿಲ್ಲ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇರವಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಸೂದೆಗಳನ್ನು ಮಂಡಿಸಿ ಚರ್ಚಿಸಲು ಅವಕಾಶ ನೀಡದೆ ಕಾಯ್ದೆ ಜಾರಿಗೆ ತರಲಾಗಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದರು.

ಆರ್.ಎಸ್.ಎಸ್ ಹೇಳಿದಂತೆ ಬಿಜೆಪಿ ಕೇಳುತ್ತಿದೆ. ನಾಗಪುರದಲ್ಲಿ ಸಿದ್ದವಾಗುವ ನಿಯಮಗಳನ್ನು ಜನರ ಮೇಲೆ ಹೇರುವ ಕೆಲಸ ನಡೆಯುತ್ತಿದೆ. ಫ್ಯಾಸಿಸ್ಟ್ ಶಕ್ತಿಗಳು ದೇಶವನ್ನು ಹಾಳುಗೆಡವುತ್ತಿವೆ. ಜರ್ಮನಿಯ ಹಿಟ್ಲರ್ ಮಾಡಿದಂತೆ ಭಾರತದಲ್ಲಿ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಬಂಧನ ಕೇಂದ್ರಗಳನ್ನು ಕಟ್ಟಲು ಹೊರಟಿದ್ದಾರೆ. ಇದರ ವಿರುದ್ದ ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.

ಆರ್.ಎಸ್.ಎಸ್ ಮತ್ತು ಬಿಜೆಪಿ ಜನರನ್ನು ಭೀತರಾಗುವಂತಹ ವಾತಾವರಣ ಸೃಷ್ಟಿಸುತ್ತಿವೆ. ತನ್ನ ಸಿದ್ದಾಂತ ಒಪ್ಪದವರನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಗೌರಿ ಲಂಕೇಶ್, ಎಂ.ಎಂ. ಕಲ್ಬುರ್ಗಿ ಹತ್ಯೆಯಾಗಿದೆ. ದೇಶದಲ್ಲಿ ಅಘೋಷಿತ ತುರ್ತುಪಡಿಸ್ಥಿತಿ ಇದೆ ಎಂದರು.

ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಎ ವಿರುದ್ಧ ವಿದ್ಯಾರ್ಥಿಗಳು, ಯುವಜನರು, ರೈತರು ಮತ್ತು ಮಹಿಳಾ ಸಂಘಟನೆಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರಬಲ ಹೋರಾಟಗಳನ್ನು ಮಾಡಬೇಕು. ಮನೆಮನೆಗೂ ಹೋಗಿ ಜನರಿಗೆ ಈ ಕಾಯ್ದೆಗಳ ಅಪಾಯದ ಕುರಿತು ಮನವರಿಕೆ ಮಾಡಬೇಕು. ದೇಶದಲ್ಲಿ ಕೇರಳ ಸೇರಿದಂತೆ 13 ರಾಜ್ಯಗಳು ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಆರ್ ಜಾರಿಗೊಳಿಸುವುದಿಲ್ಲ ಎಂದು ಹೇಳಿವೆ. ಇದು ಬಿಜೆಪಿಯ ಶಕ್ತಿಯನ್ನು ಕುಂದಿಸುವಂತೆ ಮಾಡಿದೆ ಎಂದರು.

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್.ಸಿ ಪ್ರಕಾರ ಮಹಾತ್ಮ ಗಾಂಧಿಗೂ ಪೌರತ್ವ ನೀಡಲು ಬರುವುದಿಲ್ಲ. ಗಾಂಧೀ ರಾಮ್-ರಹೀಮ್ ಇಬ್ಬರೂ ಒಂದೇ ಎಂದರು. ಈಗಿನ ಪರಿಸ್ಥಿತಿ ರಾಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ರಹೀಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಅಂತಹ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ರಾಮನಿಗೆ ಪೌರತ್ವ ನೀಡಿದರೆ, ರಹೀಮನಿಗೆ ಪೌರತ್ವ ಇಲ್ಲ. ಹಿಂದೂಗಳು ಪೌರತ್ವ ಪಡೆಯುವುದು ಕಷ್ಟದ ಕೆಲಸ. ಹೀಗಾಗಿ ಕೇಂದ್ರದ ಕಾಯ್ದೆಗಳ ವಿರುದ್ಧ ಜನರು ಅಸಹಕಾರ ತೋರಬೇಕು ಎಂದು ವಿವರಿಸಿದರು.

ಕಮ್ಯೂನಿಸ್ಟರು ಎಲ್ಲ ಧರ್ಮಗಳನ್ನ ಸಮಾನವಾಗಿ ಗೌರವಿಸುತ್ತಾರೆ. ಜನರ ನಂಬಿಕೆಗಳನ್ನು ಗೌರವಿಸುತ್ತಾರೆ. ಎಲ್ಲರೂ ಸಮಾನತೆಯಿಂದ ಇರಬೇಕು ಎಂದು ಬಯಸುತ್ತಾರೆ. ಆದರೆ ತಾರತಮ್ಯವನ್ನು ಸಹಿಸುವುದಿಲ್ಲ. ಗಾಂಧಿ, ಬುದ್ಧ ಇದೇ ಹಾದಿಯಲ್ಲಿ ನಡೆದವರು. ಸಂವಿಧಾನವೂ ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡುವುದನ್ನು ವಿರೋಧಿಸುತ್ತದೆ. ಈ ಹಿನ್ನೆಲೆಯಲ್ಲಿ ಜನಪರ ಹೋರಾಟಗಳಲ್ಲಿ ಎಲ್ಲ ಜನವಿಭಾಗವು ಪಾಲ್ಗೊಳ್ಳಬೇಕು. ಜನ ವಿರೋಧಿ ನೀತಿಗಳನ್ನು ವಿರೋಧಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...