Homeಮುಖಪುಟಸಿಎಎ ನಿಬಂಧನೆಗಳು ಭಾರತೀಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ: ಯುಎಸ್ ಕಾಂಗ್ರೆಸ್ ವರದಿ

ಸಿಎಎ ನಿಬಂಧನೆಗಳು ಭಾರತೀಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ: ಯುಎಸ್ ಕಾಂಗ್ರೆಸ್ ವರದಿ

- Advertisement -
- Advertisement -

ಭಾರತದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕಾನೂನಾಗಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಪ್ರಮುಖ ನಿಬಂಧನೆಗಳು ಭಾರತದ ಸಂವಿಧಾನದ ಕೆಲವು ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಯುಎಸ್ ಕಾಂಗ್ರೆಸ್‌ನ ಸ್ವತಂತ್ರ ಸಂಶೋಧನಾ ವಿಭಾಗವು ಬಿಡುಗಡೆ ಮಾಡಿದ ವರದಿ ಹೇಳಿದೆ.

ಭಾರತದಲ್ಲಿ 1955ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಿದ್ದುಪಡಿ ಮಾಡುವ CAA, ಈ ವರ್ಷ ಮಾರ್ಚ್‌ನಲ್ಲಿ ಜಾರಿಗೆ ಬಂದಿದೆ. CAAಯ ಪ್ರಮುಖ ನಿಬಂಧನೆಗಳು, ಮುಸ್ಲಿಮರನ್ನು ಹೊರತುಪಡಿಸಿ ಮೂರು ದೇಶಗಳಿಂದ ಆಗಮಿಸಿದ ಆರು ಧರ್ಮಗಳ ವಲಸಿಗರಿಗೆ ಪೌರತ್ವ ಪಡೆಯುವ ಹಾದಿಯನ್ನು ಸುಗಮಗೊಳಿಸಿದೆ. ಈ ಕಾಯ್ದೆಯು ಭಾರತದ ಸಂವಿಧಾನದ ಕೆಲವು ವಿಧಿಗಳನ್ನು ಉಲ್ಲಂಘಿಸಬಹುದು ಎಂದು ‘ಕಾಂಗ್ರೆಷನಲ್ ರಿಸರ್ಚ್ ಸರ್ವಿಸ್’ (CRS)ತನ್ನ ಸಂಕ್ಷಿಪ್ತ ವರದಿಯಲ್ಲಿ ತಿಳಿಸಿದೆ.

CRS ಎಂಬುವುದು US ಕಾಂಗ್ರೆಸ್‌ನ ಸ್ವತಂತ್ರ ಸಂಶೋಧನಾ ವಿಭಾಗವಾಗಿದ್ದು, ಅದು ಯುಎಸ್‌ ಕಾಂಗ್ರೆಸ್ ಸದಸ್ಯರಿಗೆ ಆಸಕ್ತಿದಾಯಕ ವಿಷಯಗಳ ಕುರಿತು ವರದಿಗಳನ್ನು ಸಿದ್ಧಪಡಿಸುತ್ತದೆ.

ಭಾರತ ಸರ್ಕಾರವು ಯೋಜಿಸಿರುವ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜೊತೆಗೆ, CAA ಸುಮಾರು 200 ಮಿಲಿಯನ್ ಭಾರತದ ದೊಡ್ಡ ಅಲ್ಪಸಂಖ್ಯಾತರಾದ ಮುಸ್ಲಿಮರ ಹಕ್ಕುಗಳಿಗೆ ಬೆದರಿಕೆ ಹಾಕಬಹುದು ಎಂದು ಮೂರು ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಾಂಗ್ರೆಸ್‌ನ ಕೆಲವು ಸದಸ್ಯರು ‘118ನೇ ಕಾಂಗ್ರೆಸ್‌’ನ ಸಭೆಯಲ್ಲಿ ಈ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ, ಹೌಸ್ ರೆಸಲ್ಯೂಶನ್ 542ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಖಂಡಿಸುತ್ತದೆ ಮತ್ತು ಸೆನೆಟ್ ನಿರ್ಣಯ 424ರಲ್ಲಿ ಈ ಕುರಿತ ಹಿಂಸೆಗೆ ತ್ವರಿತ ಅಂತ್ಯವನ್ನು ಬಯಸುತ್ತದೆ ಮತ್ತು ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರ ವಿರುದ್ಧದ ಹಿಂಸಾಚಾರಕ್ಕೆ ವಿರಾಮ ಹಾಕಬೇಕು ಮತ್ತು ಸಿಎಎಯಂತಹ ತಾರತಮ್ಯಯುತ ಕಾನೂನುಗಳನ್ನು ತಿದ್ದುಪಡಿ ಮಾಡಲು ಭಾರತವನ್ನು ಒತ್ತಾಯಿಸುತ್ತದೆ ಎಂದು ವರದಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹಿಂದೂ ರಾಷ್ಟ್ರೀಯವಾದಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂದೂ ಬಹುಸಂಖ್ಯಾತ, ಮುಸ್ಲಿಂ ವಿರೋಧಿ ಅಜೆಂಡಾವನ್ನು ಅನುಸರಿಸುತ್ತಿದೆ ಎಂದು ಕಾಯ್ದೆಯ ವಿರೋಧಿಗಳು ಎಚ್ಚರಿಸಿದ್ದಾರೆ. ಇದು ಅಧಿಕೃತವಾಗಿ ಜಾತ್ಯತೀತ ಗಣರಾಜ್ಯವಾಗಿ ಭಾರತದ ಸ್ಥಾನಮಾನಕ್ಕೆ ಬೆದರಿಕೆ ಹಾಕುತ್ತದೆ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ನಿಯಮಗಳು ಮತ್ತು ಕಟ್ಟುಪಾಡುಗಳನ್ನು ಉಲ್ಲಂಘಿಸುತ್ತದೆ ಎಂದು ವರದಿ ಹೇಳಿದೆ.

ಈ ಮಧ್ಯೆ ಪಶ್ಚಿಮ ಬಂಗಾಳದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಎಯನ್ನು ಸಮರ್ಥಿಸಿಕೊಂಡಿದ್ದು, ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಿಎಎ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಉದ್ದೇಶಿಸಿಲ್ಲ, ಆದರೆ  ಇದು ಧರ್ಮದ ಆಧಾರದ ಮೇಲೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಸ್ಥಳಾಂತರಗೊಂಡ ಜನರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಪೌರತ್ವ ಕಾಯಿದೆ- 1955 ಏನು ಹೇಳುತ್ತದೆ?

ಪೌರತ್ವ ಕಾಯಿದೆ, 1955ರ ಪ್ರಕಾರ ಭಾರತದಲ್ಲಿ ಐದು ವಿಧಾನಗಳ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವವನ್ನು ಹುಟ್ಟಿನಿಂದ, ಭಾರತೀಯ ಮೂಲದವರಾಗಿದ್ದು ಹೊರದೇಶಗಳಲ್ಲಿ ನೆಲೆಸಿದ್ದರೆ, ವಿದೇಶದವರಾಗಿದ್ದರೂ ಭಾರತದಲ್ಲಿ ಸರ್ಕಾರಿ ಸೇವೆಯಲ್ಲಿದ್ದರೆ, ಭಾರತ ಮೂಲದವರಾಗಿದ್ದು ಭಾರತದಲ್ಲಿ ಈಗಾಗಲೇ ವಾಸ್ತವ್ಯ ಹೂಡಿದ್ದರೆ ಅಥವಾ ಭಾರತದೊಳಗೆ ಸೇರಿಸಿಕೊಳ್ಳಲಾದ ಅನ್ಯದೇಶದ ಭೂಭಾಗದ ನಿವಾಸಿಯಾಗಿದ್ದರೆ, ಅಸ್ಸಾಂ ಒಪ್ಪಂದಕ್ಕೆ ಸೇರಿದ ಜನರಿಗೆ ಪೌರತ್ವ ಅವಕಾಶವನ್ನು ನೀಡಲಾಗಿತ್ತು, ಈ ಕಾಯಿದೆಯು ವಿದೇಶಿ ಅಕ್ರಮ ವಲಸಿಗರು ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಿದೆ. ಇದಲ್ಲದೆ 1955ರ ಕಾಯ್ದೆಯ ಪ್ರಕಾರ ಪೌರತ್ವವನ್ನು ಪಡೆಯಬೇಕಿದ್ದರೆ ಆತ ಭಾರತದಲ್ಲಿ ಕನಿಷ್ಠ 11ವರ್ಷ ವಾಸಿಸಿರಬೇಕು.

ಪೌರತ್ವ (ತಿದ್ದುಪಡಿ) ಮಸೂದೆ-2019

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

ಇದನ್ನು ಓದಿ: ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...