Homeಮುಖಪುಟಕೇರಳ, ತಮಿಳುನಾಡಿನಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ: ಸಿಎಂಗಳಿಂದ ಘೋಷಣೆ

ಕೇರಳ, ತಮಿಳುನಾಡಿನಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ: ಸಿಎಂಗಳಿಂದ ಘೋಷಣೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸುವುದಿಲ್ಲ ಎಂದು ಕೇರಳ ಮತ್ತು ತಮಿಳುನಾಡಿನ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಸಿಎಎ ಸಂಪೂರ್ಣ ಅನಗತ್ಯ ಕಾನೂನು ಎಂದು ಕರೆದಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತಮ್ಮ ರಾಜ್ಯದಲ್ಲಿ ಅದನ್ನು ಜಾರಿಗೊಳಿಸುವುದಿಲ್ಲ ಎಂದಿದ್ದಾರೆ.

“ಸಿಎಎಯಿಂದ ಯಾವುದೇ ಉಪಯೋಗ ಇಲ್ಲ. ಇದು ಭಾರತೀಯರಲ್ಲಿ ಒಡಕು ಮೂಡಿಸಲು ಮಾತ್ರ ದಾರಿ ಮಾಡಿಕೊಡುತ್ತದೆ. ಸಿಎಎ ಸಂಪೂರ್ಣ ಅನಪೇಕ್ಷಿತ ಎಂಬುವುದು ತಮಿಳುನಾಡು ಸರ್ಕಾರದ ನಿಲುವು. ಈ ಕಾನೂನು ರದ್ದುಗೊಳಿಸಬೇಕು” ಎಂದು ಸ್ಟಾಲಿನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

“ಬಹುತ್ವ, ಜಾತ್ಯತೀತತೆ, ಅಲ್ಪಸಂಖ್ಯಾತ ಸಮುದಾಯದವರು ಮತ್ತು ಶ್ರೀಲಂಕಾ ತಮಿಳು ನಿರಾಶ್ರಿತರಿಗೆ ವಿರುದ್ಧವಾದ ಸಿಎಎಯನ್ನು ಜಾರಿಗೆ ತರಲು ತಮಿಳುನಾಡು ಸರ್ಕಾರ ಯಾವುದೇ ಅವಕಾಶ ನೀಡುವುದಿಲ್ಲ” ಎಂದು ಸ್ಟಾಲಿನ್ ಘೋಷಿಸಿದ್ದಾರೆ.

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ: ಪಿಣರಾಯಿ ವಿಜಯನ್

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು “ಮುಸ್ಲಿಂ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಪರಿಗಣಿಸುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇರಳದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಎಲ್‌ಡಿಎಫ್ ಸರ್ಕಾರ ಹಲವಾರು ಬಾರಿ ಹೇಳಿದೆ. ನಾವು ಆ ನಿಲುವನ್ನು ಪುನರುಚ್ಚರಿಸುತ್ತೇವೆ. ಈ ಕೋಮುವಾದ ಮತ್ತು ವಿಭಜಕ ಕಾನೂನನ್ನು ವಿರೋಧಿಸಲು ಕೇರಳ ಒಗ್ಗಟ್ಟಾಗಿ ನಿಲ್ಲುತ್ತದೆ ಹೇಳಿದ್ದಾರೆ.

ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಸಿಎಎ ಜಾರಿಗೊಳಿಸುವುದಿಲ್ಲ ಎಂದು ಈಗಾಗಲೇ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿವೆ.

ಕೇರಳದಲ್ಲಿ ಆಡಳಿತರೂಡ ಎಲ್‌ಡಿಎಫ್‌ ಮತ್ತು ಪ್ರತಿಪಕ್ಷ ಯುಡಿಎಫ್ ಜಂಟಿಯಾಗಿ ಸಿಎಎ ವಿರುದ್ದ ಹೋರಾಡುವುದಾಗಿ ಘೋಷಿಸಿವೆ. ಈ ಹಿಂದೆಯೂ ಎರಡು ಬಣಗಳು ಒಂದಾಗಿ ಪ್ರತಿಭಟನೆ ನಡೆಸಿತ್ತು.

ತಮಿಳುನಾಡಿನಲ್ಲೂ ಆಡಳಿತರೂಡ ಡಿಎಂಕೆ ಸಿಎಎ ವಿರೋಧಿಸಿದೆ. ಇದಕ್ಕೆ ಪ್ರತಿಪಕ್ಷ ಎಐಡಿಎಂಕೆ ಹಾಗೂ ಇತ್ತೀಚೆಗೆ ಹೊಸ ಪಕ್ಷ ಸ್ಥಾಪಿಸಿದ ನಟ ವಿಜಯ್ ಕೂಡ ಧ್ವನಿಗೂಡಿಸಿದ್ದಾರೆ.

ಇದನ್ನೂ ಓದಿ : CAA: ಕಾನೂನು ಸವಾಲು ಏನಾಯ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...