Homeಕರ್ನಾಟಕಮೈಕ್ರೊ ಫೈನಾನ್ಸ್‌ ಕಡಿವಾಣಕ್ಕೆ ಸುಗ್ರೀವಾಜ್ಞೆ; ಒಪ್ಪಿಗೆ ಸೂಚಿಸಿದ ಸಚಿವ ಸಂಪುಟ

ಮೈಕ್ರೊ ಫೈನಾನ್ಸ್‌ ಕಡಿವಾಣಕ್ಕೆ ಸುಗ್ರೀವಾಜ್ಞೆ; ಒಪ್ಪಿಗೆ ಸೂಚಿಸಿದ ಸಚಿವ ಸಂಪುಟ

- Advertisement -
- Advertisement -

ಮೈಕ್ರೋ ಫೈನಾನ್ಸ್ ಹಾವಳಿಯಿಂದ ರಾಜ್ಯದಲ್ಲಿ ಆತ್ಮಹತ್ಯೆ ಹಾಗೂ ಕುಟುಂಬಗಳು ಊರು ತೊರೆಯುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಹೊಸದಾಗಿ ಮಸೂದೆ ತರಲು ಒಪ್ಪಿಗೆ ಪಡೆಯಲಾಗಿದೆ. ಕಿರುಕುಳ ತಡೆಗೆ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯಪಾಲರ ಬಳಿ ಅಂಕಿತ ಪಡೆಯಲು ಸಂಪುಟ ಸಭೆ ಇಂದು ನಿರ್ಧರಿಸಿದೆ.

ಕೆಲವು ಪ್ರಮುಖ ಅಂಶಗಳನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ, ಮೈಕ್ರೋ ಫೈನಾನ್ಸ್ ವಿಚಾರವಾಗಿ ಸುಗ್ರೀವಾಜ್ಞೆಗೆ ಸಂಬಂಧಿಸಿ ಮತ್ತೊಂದು ಹಂತದ ಸಭೆ ನಡೆಯಲಿದೆ. ನಿರ್ಣಯ ಕೈಗೊಳ್ಳುವ ಪರಮಾಧಿಕಾರವನ್ನು ಸಚಿವ ಸಂಪುಟ ಮುಖ್ಯಮಂತ್ರಿಗಳಿಗೆ ನೀಡಿದೆ.

“ಖಾಸಗಿ ಫೈನಾನ್ಸ್​​​ ಕಂಪನಿಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಅಮಾನವೀಯವಾಗಿ ಮೈಕ್ರೋ ಪೈನಾನ್ಸ್​ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ನಡೆದಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶ ಚರ್ಚಿಸಿದ್ದೇವೆ. ಇಂದು ಸಂಜೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಆಗ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ” ಎಂದು ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ತಿಳಿಸಿದರು.

“ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆಗಲಿವೆ; ಕೆಲವು ಮೈನಸ್ ಆಗಲಿವೆ. ಆದ್ದರಿಂದ, ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ. ಸುಗ್ರೀವಾಜ್ಞೆ ತರಲು ಸಿಎಂಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆ. ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ಗೋಡ್ಸೆಗೆ ಮಹಾತ್ಮ ಗಾಂಧಿಯ ಮೌಲ್ಯ ಕೊಲ್ಲಲು ಅಸಾಧ್ಯ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...