Homeಮುಖಪುಟಯುವತಿಯರ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಸಂಪುಟ ಒಪ್ಪಿಗೆ: ವರದಿ

ಯುವತಿಯರ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಸಂಪುಟ ಒಪ್ಪಿಗೆ: ವರದಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಯುವತಿಯರ ವಿವಾಹ ವಯಸ್ಸನ್ನು ಕನಿಷ್ಠ 18ರಿಂದ 21ಕ್ಕೆ ಏರಿಸುವ ಯೋಜನೆ ಪರಿಶೀಲನೆಯಲ್ಲಿದೆ ಎಂದು ಹೇಳಿ ಒಂದು ವರ್ಷವಾಗಿದ್ದು, ಈ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷದ ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಪ್ರಧಾನಿ ಮೋದಿ ಈ ಯೋಜನೆಯನ್ನು ಪ್ರಸ್ತಾಪಿಸಿದ್ದರು. ‘ಈ ಸರ್ಕಾರವು ಹೆಣ್ಣುಮಕ್ಕಳು ಮತ್ತು ಸಹೋದರಿಯರ ಆರೋಗ್ಯದ ಬಗ್ಗೆ ನಿರಂತರವಾಗಿ ಕಾಳಜಿ ವಹಿಸುತ್ತದೆ. ಹೆಣ್ಣು ಮಕ್ಕಳನ್ನು ಅಪೌಷ್ಟಿಕತೆಯಿಂದ ರಕ್ಷಿಸಲು, ಅವರು ಸರಿಯಾದ ವಯಸ್ಸಿನಲ್ಲಿ ಮದುವೆಯಾಗುವುದು ಅವಶ್ಯಕ’ ಎಂದು ಪ್ರಧಾನಿ ಹೇಳಿದರು.

ಪ್ರಸ್ತುತ, ಪುರುಷರ ಮದುವೆಯ ಕನಿಷ್ಠ ವಯಸ್ಸು 21 ಹಾಗೂ ಯುವತಿಯರಿಗೆ 18 ವಯಸ್ಸು ಆಗಿರುವುದು ಕಡ್ಡಾಯವಾಗಿದೆ. ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಾಲ್ಯವಿವಾಹ ನಿಷೇಧ ಕಾಯ್ದೆ, ವಿಶೇಷ ವಿವಾಹ ಕಾಯ್ದೆ ಮತ್ತು ಹಿಂದೂ ವಿವಾಹ ಕಾಯ್ದೆಗಳಲ್ಲಿ ಬದಲಾವಣೆಗಳನ್ನು ಮಾಡಲು ಸರ್ಕಾರ ಕಣ್ಣು ಹಾಯಿಸಿದೆ.

ಈ ಪ್ರಸ್ತಾಪವನ್ನು ಜಯಾ ಜೇಟ್ಲಿ ನೇತೃತ್ವದ ನೀತಿ ಆಯೋಗದ ಕಾರ್ಯಪಡೆಯು ಬೆಂಬಲಿಸಿದ್ದು, ಸರ್ಕಾರದ ಉನ್ನತ ತಜ್ಞ ವಿಕೆ ಪಾಲ್, ಆರೋಗ್ಯ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಗಳು ಕಳೆದ ವರ್ಷ ಜೂನ್‌ನಲ್ಲಿ ರಚಿಸಲಾದ ಕಾರ್ಯಪಡೆಯ ಸದಸ್ಯರಾಗಿದ್ದರು.

ಮೊದಲ ಗರ್ಭಧಾರಣೆಯ ಸಮಯದಲ್ಲಿ ಯುವತಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎಂದು ಟಾಸ್ಕ್ ಫೋರ್ಸ್ ಒತ್ತಿ ಹೇಳಿದ್ದರಿಂದ ಡಿಸೆಂಬರ್ನಲ್ಲಿ ಪ್ರಸ್ತಾವನೆಯ ಶಿಫಾರಸುಗಳನ್ನು ಸಲ್ಲಿಸಲಾಗಿತ್ತು.

ಮದುವೆಯ ವಿಳಂಬವು ಕುಟುಂಬ, ಸಮಾಜ ಮತ್ತು ಮಕ್ಕಳ ಮೇಲೆ ಧನಾತ್ಮಕ, ಆರ್ಥಿಕ, ಸಾಮಾಜಿಕ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.


ಇದನ್ನೂ ಓದಿ; ಫ್ಯಾಕ್ಟ್‌ಚೆಕ್‌: ಸಿದ್ದರಾಮಯ್ಯ- ಸಿ.ಎಂ. ಇಬ್ರಾಹಿಂ ನಡುವೆ ಜಟಾಪಟಿ ನಡೆಯಿತೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...