ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ.
ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ನ್ಯಾ.ಕಾಂತರಾಜು ಅವರ ಆಯೋಗ ವರದಿ ಸಲ್ಲಿಸಿ 10 ವರ್ಷ ಕಳೆದಿದೆ. ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ ಸೆಕ್ಷನ್ 11ರ ಪ್ರಕಾರ 10 ವರ್ಷ ಆದ ಬಳಿಕ ಹೊಸ ಸಮೀಕ್ಷೆ ನಡೆಸಬೇಕು ಎಂದು ಹೇಳಿದೆ. ಅಲ್ಲದೆ ಹೈಕಮಾಂಡ್ ಕೂಡಾ ಸಲಹೆ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜಾತಿ ಗಣತಿ ಮರು ಸಮೀಕ್ಷೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ (ಜೂ.12) ವಿಶೇಷ ಸಚಿವ ಸಂಪುಟ ಸಭೆ ನಡೆಯಿತು.
ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಕುರಿತು ಚರ್ಚಿಸಿದ್ದೇವೆ. 2011ರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿ ಬಗ್ಗೆ ಸರ್ವೆ ನಡೆಸಲಾಗಿತ್ತುನಡೆಸಿದ್ದೆವು. 54 ಮಾನದಂಡಗಳು ಇಟ್ಟುಕೊಂಡು ಮನೆ ಮನೆಗೆ ಹೋಗಿ ಸರ್ವೆ ಮಾಡಿರುವ ವರದಿ ಪಡೆದಿದ್ದೇವೆ. 2011ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆ 6.11 ಕೋಟಿ ಇದೆ ಎಂದು ಹೇಳಿದರು.
2015ರಲ್ಲಿ 6.35 ಕೋಟಿ ಜನಸಂಖ್ಯೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಸರ್ವೆ ಆಗಿದ್ದು 5.98 ಕೋಟಿ ಜನರದ್ದು. 2015ರ ಏಪ್ರಿಲ್ 11ರಂದು ಜಾತಿಗಣತಿ ಸರ್ವೆ ಆರಂಭಿಸಿದೆ. 2025ರ ನವೆಂಬರ್ 30ರಂದು ಸರ್ವೆ ಮುಕ್ತಾಯಗೊಂಡಿತ್ತು. 1.60 ಲಕ್ಷ ಸಿಬ್ಬಂದಿ ಜಾತಿಗಣತಿ ಸರ್ವೆಯಲ್ಲಿ ಭಾಗಿಯಾಗಿದ್ದರು ಎಂದರು.
ನ್ಯಾ.ಕಾಂತರಾಜು ಸರ್ವೆಯ ದತ್ತಾಂಶ ಪಡೆದು ಜಯಪ್ರಕಾಶ್ ಹೆಗ್ಡೆ ಅವರು ಶಿಫಾರಸು ಮಾಡಿದರು. 2024ರ ಫೆ.29ರಂದು ಸರ್ಕಾರಕ್ಕೆ ಜಯಪ್ರಕಾಶ್ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಪಾರ್ಲಿಮೆಂಟ್ ಚುನಾವಣೆ ಕಾರಣದಿಂದ ವರದಿ ಚರ್ಚಿಸಲಿಲ್ಲ ಎಂದರು.
ಗುಜರಾತ್ | 200 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ


