Homeಕರ್ನಾಟಕರಾಮನಗರವನ್ನು 'ಬೆಂಗಳೂರು ದಕ್ಷಿಣ' ಜಿಲ್ಲೆ ಎಂದು ಮರುನಾಮಕರಣಕ್ಕೆ ಸಚಿವ ಸಂಪುಟ ಒಪ್ಪಿಗೆ

ರಾಮನಗರವನ್ನು ‘ಬೆಂಗಳೂರು ದಕ್ಷಿಣ’ ಜಿಲ್ಲೆ ಎಂದು ಮರುನಾಮಕರಣಕ್ಕೆ ಸಚಿವ ಸಂಪುಟ ಒಪ್ಪಿಗೆ

- Advertisement -
- Advertisement -

ರಾಮನಗರ ಜಿಲ್ಲೆಯನ್ನು “ಬೆಂಗಳೂರು ದಕ್ಷಿಣ” ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

“ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ… ಅಲ್ಲಿನ ಜನರ ಬೇಡಿಕೆ ಆಧರಿಸಿ ಕಂದಾಯ ಇಲಾಖೆ ಪ್ರಕ್ರಿಯೆ ಆರಂಭಿಸಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್” ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಲ್ಲೆಯ ಹೆಸರು ಮಾತ್ರ ಬದಲಾಗಲಿದೆ, ಉಳಿದೆಲ್ಲವೂ ಹಾಗೆಯೇ ಇರುತ್ತದೆ” ಎಂದರು.

ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಮತ್ತು ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡಿರುವ ನೆರೆಯ ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆ ಇತ್ತೀಚೆಗೆ ಚುರುಕುಗೊಂಡಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ನಿಯೋಗವು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದಾಗ ಜಿಲ್ಲೆಯ ಮರುನಾಮಕರಣದ ಪ್ರಸ್ತಾಪ ಮುನ್ನೆಲೆಗೆ ಬಂದಿತು. ಶಿವಕುಮಾರ್ ಅವರು ರಾಮನಗರದ ಉಸ್ತುವಾರಿ ಸಚಿವರು ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿದ್ದಾರೆ.

“ರಾಮನಗರ ಜಿಲ್ಲೆಯ ಮುಖಂಡರು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನನ್ನನ್ನು ಭೇಟಿ ಮಾಡಿದ್ದು, ಈ ಭಾಗದ ಜನರು ಮೊದಲಿನಿಂದಲೂ ತಮ್ಮನ್ನು ಬೆಂಗಳೂರಿನ ಭಾಗವೆಂದು ಪರಿಗಣಿಸುತ್ತಾರೆ, ಆದ್ದರಿಂದ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಬೇಕು ಎಂದು ಹೇಳಿದ್ದಾರೆ. ಸಚಿವ ಸಂಪುಟದಲ್ಲಿ ಮತ್ತು ಈ ವಿಷಯವನ್ನು ಸಚಿವ ಸಂಪುಟದ ಮುಂದೆ ಇಡುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದ್ದರು.

ಶಿವಕುಮಾರ್ ಅವರು ತಮ್ಮ ತವರು ಜಿಲ್ಲೆ ರಾಮನಗರವನ್ನು ಮರುನಾಮಕರಣಕ್ಕೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮೊದಲು ಪ್ರಸ್ತಾಪಿಸಿದರು. “ರಾಮನಗರವನ್ನು ರಿಯಲ್ ಎಸ್ಟೇಟ್ ಅವಕಾಶಗಳನ್ನು ದುರ್ಬಳಕೆ ಮಾಡಿಕೊಳ್ಳುವುದೇ ಈ ಪ್ರಸ್ತಾಪದ ಹಿಂದಿನ ಉದ್ದೇಶ” ಎಂದು ಮಾಜಿ ಜೆಡಿಎಸ್ ನಾಯಕ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾದಾಗ ಯೋಜನೆ ಹಿಂಪಡೆಯುವುದಾಗಿ ಹೇಳಿದರು. ಆಗಸ್ಟ್ 2007 ರಲ್ಲಿ ರಾಮನಗರ ಜಿಲ್ಲೆಯನ್ನು ಸೃಷ್ಟಿಸಿದಾಗ, ಕುಮಾರಸ್ವಾಮಿ ಅವರು ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದರು.

ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಮೊದಲನೆಯದಾಗಿ ಅವರು ಅಧಿಕಾರಕ್ಕೆ ಬರುವುದಿಲ್ಲ, ಆದ್ದರಿಂದ ಅವರು (ಕುಮಾರಸ್ವಾಮಿ) ಅದನ್ನು ಬದಲಾಯಿಸುವುದು ಭ್ರಮೆ” ಎಂದು ಹೇಳಿದರು.

ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಯೋಜನೆ ವಿರುದ್ಧ ಸರ್ಕಾರವು ಒಂದು ವೇಳೆ ಆಮರಣಾಂತ ಉಪವಾಸ ಮಾಡುವುದಾಗಿ ಕುಮಾರಸ್ವಾಮಿ ಈ ಹಿಂದೆ ಬೆದರಿಕೆ ಹಾಕಿದ್ದರು. ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದ ಕುಮಾರಸ್ವಾಮಿಯವರ ರಾಜಕೀಯ ಕ್ಷೇತ್ರ ರಾಮನಗರ ಜಿಲ್ಲೆಯಾಗಿದೆ.

ಇದನ್ನೂ ಓದಿ; ಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...