Homeಕರ್ನಾಟಕಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

- Advertisement -
- Advertisement -

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರ ಪಕ್ಷಪಾತಿ ನಡೆ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ರಾಜ್ಯಪಾಲರು ತೋರಿದ ಆಸಕ್ತಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದ ಇತರ ಪ್ರಕರಣಗಳಲ್ಲಿ ಕಂಡು ಬರದ ಹಿನ್ನೆಲೆ, ರಾಜ್ಯಪಾಲರಿಗೆ ಸೂಕ್ತ ನೆರವು ಮತ್ತು ಸಲಹೆ ನೀಡುವ ನಿರ್ಣಯವನ್ನು ಸಚಿವ ಸಂಪುಟ ತೆಗೆದುಕೊಂಡಿದೆ. ಇದರಿಂದ ಬಿಜೆಪಿ ಮತ್ತು ಜೆಡಿಎಸ್​​ ನಾಯಕರಿಗೆ ಢವಢವ ಶುರುವಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್​. ಕೆ ಪಾಟೀಲ್, “ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್​​ಗೆ ಬಾಕಿ ಇರುವ ಹಲವು ಪ್ರಕರಣಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಇನ್ನೂ ಕೆಲವು ಪ್ರಕರಣಗಳು ಲೋಕಾಯುಕ್ತದಿಂದ ರಾಜ್ಯಪಾಲರಿಗೆ ಹೋಗಿದೆ. ಕೆಲವು ತನಿಖಾ ಸಂಸ್ಥೆಗಳ ವರದಿ ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ. ಅನೇಕ ಅನುಮೋದನೆ ಅರ್ಜಿಗಳು ರಾಜ್ಯಪಾಲರ ಸಮಕ್ಷಮದಲ್ಲಿ ಬಾಕಿ ಇವೆ. ಈ ಅರ್ಜಿಗಳಲ್ಲಿ ಕೆಲವು ಚಾರ್ಜ್​ಶೀಟ್ ಸಲ್ಲಿಕೆಗೆ ಒಪ್ಪಿಗೆ ಬಾಕಿ ಇವೆ. 1980ರ ಭ್ರಷ್ಟಾಚಾರ ತಡೆಕಾಯ್ದೆ ಸೆಕ್ಷನ್ 19ರಡಿ ಅನುಮೋದನೆಗೆ ಬಾಕಿ ಇದೆ. 17ಎ ಅಡಿಯಲ್ಲೂ ರಾಜ್ಯಪಾಲರ ಪೂರ್ವಾನುಮತಿಗೆ ಬಾಕಿ ಇದೆ. ಆ ಎಲ್ಲ ಪ್ರಕರಣಗಳ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ 163ರ ಅನ್ವಯ ರಾಜ್ಯಪಾಲರಿಗೆ ಸಲಹೆ ಮತ್ತು ನೆರವು ನೀಡಲು ಸಂಪುಟ ಸಭೆ ನಿರ್ಣಯಿಸಿದೆ” ಎಂದು ತಿಳಿಸಿದ್ದಾರೆ.

“ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಲಾಗಿದೆ. ಹೆಚ್‌ಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಲೋಕಾಯುಕ್ತ ಎಸ್‌ಐಟಿಯಿಂದ ಸ್ಪಷ್ಟೀಕರಣ ಕೋರಿದ್ದರು. ಇದಕ್ಕೆ ಅಗತ್ಯವಿರುವ ಸ್ಪಷ್ಟೀಕರಣವನ್ನು ಪತ್ರದ ಮೂಲಕ ಎಸ್‌ಐಟಿ ನೀಡಿದೆ. ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ಅನುಮತಿ ಪ್ರಕರಣಗಳ ಬಗ್ಗೆ ಶೀಘ್ರವಾಗಿ ತೀರ್ಮಾನ ಕೈಗೊಳ್ಳಲು ರಾಜ್ಯಪಾಲರಿಗೆ ಸಲಹೆ ನೀಡುತ್ತೇವೆ” ಎಂದು‌ ಹೆಚ್‌.ಕೆ ಪಾಟೀಲ್ ವಿವರಿಸಿದ್ದಾರೆ.

“ಆ.1 ರಂದು ಸಚಿವ ಸಂಪುಟ ಸಭೆ ನಡೆದಿತ್ತು. ಅಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಭೆ ನಡೆಸಲು ಸೂಚಿಸಿದ್ದರು. ಆರ್ಟಿಕಲ್ 163ರ ಅನ್ವಯ ಏಡ್ ಆ್ಯಂಡ್ ಅಡ್ವೈಸ್ ರಾಜ್ಯಪಾಲರಿಗೆ ನೀಡಿದ್ದೆವು. ದೃಢೀಕರಣ ಸಂದರ್ಭದಲ್ಲಿ ಸಿಎಂ ತಾವಿರುವುದು ಸೂಕ್ತ ಅಲ್ಲ ಎಂದು ಸಭೆಯಿಂದ ಹೊರಗೆ ಇದ್ದರು. ಆ ಸಭೆ ಆದ ಬಳಿಕ ಸಂಪುಟದ ನಿರ್ಣಯವನ್ನು ದೃಢೀಕರಿಸಲು ಇಂದು ಸಭೆ ನಡೆದಿದ್ದು, ಆ.1ರ ನಿರ್ಣಯವನ್ನು ದೃಢೀಕರಿಸಿದ್ದೇವೆ” ಎಂದು ಹೇಳಿದ್ದಾರೆ.

“ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರಕರಣದಲ್ಲಿ ಖಾಸಗಿ ವ್ಯಕ್ತಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ತರಾತುರಿಯಲ್ಲಿ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ಆದರೆ ಈ ನಾಲ್ಕು ಪ್ರಕರಣದಲ್ಲಿ ತನಿಖೆಯಾಗಿದೆ ಹಾಗೂ ಎರಡು ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದರೂ ಏನೂ ಕ್ರಮ ಆಗಿಲ್ಲ. ಹೀಗಿರುವಾಗ ಸಂಪುಟ ಸಲಹೆ ಕೊಡುವುದು ಸೂಕ್ತ” ಎಂದಿದ್ದಾರೆ.

2021ರ ಡಿ.9ರಂದು ಶಶಿಕಲಾ ಜೊಲ್ಲೆ ವಿರುದ್ಧ ಮತ್ತು 2024ರ ಫೆಬ್ರವರಿ 26ರಂದು ಮುರುಗೇಶ್ ನಿರಾಣಿ ವಿರುದ್ಧ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿದೆ. 2023ರ ನವೆಂಬರ್ 21ರಂದು ಹೆಚ್.​ ಡಿ ಕುಮಾರಸ್ವಾಮಿ ವಿರುದ್ಧವೂ ಅರ್ಜಿ ಸಲ್ಲಿಕೆಯಾಗಿದೆ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಲೋಕಾಯಕ್ತ ಎಸ್​ಐಟಿ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿದೆ. ನಿನ್ನೆಯ ಸಂಪುಟ ಸಭೆಯ ನಿರ್ಧಾರ ರಾಜ ಭವನ ವರ್ಸಸ್​ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಕಾನೂನು ಸಮರಕ್ಕೆ ಮುನ್ನುಡಿಯಾಗಿದೆ.

ಇದನ್ನೂ ಓದಿ : ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...