ಬಿಜೆಪಿ ಸರ್ಕಾರದ ವಿರುದ್ದ ಗುತ್ತಿಗೆದಾರರು ಮಾಡಿದ್ದ ಶೇಕಡ 40 ಕಮಿಷನ್ ಆರೋಪದ ಕುರಿತು ನ್ಯಾಯಮೂರ್ತಿ ನಾಗಮೋಹನ್‌ದಾಸ್ ನೇತೃತ್ವದ ವಿಚಾರಣಾ ಆಯೋಗ ನೀಡಿರುವ ವರದಿಯನ್ನು ಶುಕ್ರವಾರ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ಈ ವರದಿಯ ಆಧಾರದಲ್ಲಿ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆ ಬಳಿಕ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್, ನ್ಯಾ. ನಾಗಮೋಹನ್‌ದಾಸ್ ಆಯೋಗ ವರದಿಯಲ್ಲಿ ಮಾಡಿರುವ ಶಿಫಾರಸ್ಸುಗಳು ಮತ್ತು ಉಲ್ಲೇಖಿಸಿರುವ ವ್ಯತ್ಯಾಸಗಳನ್ನು ಸಚಿವ ಸಂಪುಟ ಗಂಭೀರವಾಗಿ ಪರಿಗಣಿಸಿದೆ. ಅವುಗಳ ಬಗ್ಗೆ ಚರ್ಚೆ ನಡೆಸಿದೆ ಎಂದಿದ್ದಾರೆ.
ಆಯೋಗವು 3 ಲಕ್ಷ ಕಾಮಗಾರಿಗಳಲ್ಲಿ 1729 ಕಾಮಗಾರಿಗಳನ್ನು ಸ್ಯಾಂಪಲ್ ಆಗಿ ತೆಗೆದುಕೊಂಡು ಪರಿಶೀಲನೆ ನಡೆಸಿದೆ. ಕೆಲವು ಪ್ರಕರಣಗಳಲ್ಲಿ ವ್ಯತ್ಯಾಸಗಳಿವೆ. ಕೆಲವು ಕಾಮಗಾರಿಗಳಲ್ಲಿ ಹೆಚ್ಚು ಹಣ ಪಾವತಿಯಾಗಿದೆ. ಕೆಲವು ಕಾಮಗಾರಿಗಳ ಬಗ್ಗೆ ಸಂಶಯವಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪವಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಎಸ್ಐಟಿಯಲ್ಲಿ ವಿಷಯ ಪರಿಣಿತರು, ಅಧಿಕಾರಿಗಳು ಇರಲಿದ್ದಾರೆ. ಎರಡು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗುವುದು ಎಂದಿದ್ದಾರೆ.
ಮಂಗಳೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 18ರಂದು ಬೃಹತ್ ಪ್ರತಿಭಟನೆ


