Homeಕರ್ನಾಟಕಬಿಜೆಪಿ ಸರ್ಕಾರದ ವಿರುದ್ಧದ 40% ಕಮಿಷನ್ ಆರೋಪ: ತನಿಖೆಗೆ ಎಸ್‌ಐಟಿ ರಚಿಸಲು ಸಂಪುಟ ತೀರ್ಮಾನ

ಬಿಜೆಪಿ ಸರ್ಕಾರದ ವಿರುದ್ಧದ 40% ಕಮಿಷನ್ ಆರೋಪ: ತನಿಖೆಗೆ ಎಸ್‌ಐಟಿ ರಚಿಸಲು ಸಂಪುಟ ತೀರ್ಮಾನ

- Advertisement -
- Advertisement -

ಬಿಜೆಪಿ ಸರ್ಕಾರದ ವಿರುದ್ದ ಗುತ್ತಿಗೆದಾರರು ಮಾಡಿದ್ದ ಶೇಕಡ 40 ಕಮಿಷನ್ ಆರೋಪದ ಕುರಿತು ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ನೇತೃತ್ವದ ವಿಚಾರಣಾ ಆಯೋಗ ನೀಡಿರುವ ವರದಿಯನ್ನು ಶುಕ್ರವಾರ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ಈ ವರದಿಯ ಆಧಾರದಲ್ಲಿ ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ತೀರ್ಮಾನಿಸಲಾಗಿದೆ.

ಸಂಪುಟ ಸಭೆ ಬಳಿಕ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಹೆಚ್‌.ಕೆ ಪಾಟೀಲ್, ನ್ಯಾ. ನಾಗಮೋಹನ್‌ದಾಸ್‌ ಆಯೋಗ ವರದಿಯಲ್ಲಿ ಮಾಡಿರುವ ಶಿಫಾರಸ್ಸುಗಳು ಮತ್ತು ಉಲ್ಲೇಖಿಸಿರುವ ವ್ಯತ್ಯಾಸಗಳನ್ನು ಸಚಿವ ಸಂಪುಟ ಗಂಭೀರವಾಗಿ ಪರಿಗಣಿಸಿದೆ. ಅವುಗಳ ಬಗ್ಗೆ ಚರ್ಚೆ ನಡೆಸಿದೆ ಎಂದಿದ್ದಾರೆ.

ಆಯೋಗವು 3 ಲಕ್ಷ ಕಾಮಗಾರಿಗಳಲ್ಲಿ 1729 ಕಾಮಗಾರಿಗಳನ್ನು ಸ್ಯಾಂಪಲ್‌ ಆಗಿ ತೆಗೆದುಕೊಂಡು ಪರಿಶೀಲನೆ ನಡೆಸಿದೆ. ಕೆಲವು ಪ್ರಕರಣಗಳಲ್ಲಿ ವ್ಯತ್ಯಾಸಗಳಿವೆ. ಕೆಲವು ಕಾಮಗಾರಿಗಳಲ್ಲಿ ಹೆಚ್ಚು ಹಣ ಪಾವತಿಯಾಗಿದೆ. ಕೆಲವು ಕಾಮಗಾರಿಗಳ ಬಗ್ಗೆ ಸಂಶಯವಿದೆ. ಟೆಂಡರ್‌ ಪ್ರಕ್ರಿಯೆಯಲ್ಲಿ ಲೋಪವಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ಎಸ್ಐಟಿಯಲ್ಲಿ ವಿಷಯ ಪರಿಣಿತರು, ಅಧಿಕಾರಿಗಳು ಇರಲಿದ್ದಾರೆ. ಎರಡು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗುವುದು ಎಂದಿದ್ದಾರೆ.

ಮಂಗಳೂರು | ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 18ರಂದು ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...