Homeಕರ್ನಾಟಕಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

ಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

“ಸಾರ್ವಜನಿಕವಾಗಿ ಮಾಡುತ್ತಿರುವ ವಿವೇಚನೆಯಿಲ್ಲದ ಟೀಕೆಗಳನ್ನು ನಿಲ್ಲಿಸಬೇಕು. ನೆನಪಿಡಿ ಪಕ್ಷ ಮೊದಲು. ವಿವೇಚನೆಯಿಲ್ಲದ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪಕ್ಷಕ್ಕಾಗಿ ದುಡಿಯಬೇಕು” ಎಂದು ಅಮಿತ್ ಶಾ ಎಚ್ಚರಿಸಿದ್ದರು.

- Advertisement -
- Advertisement -

ಸಚಿವ ಸಂಪುಟ ವಿಸ್ತರಣೆಯಿಂದ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ತಲೆದೋರಿತ್ತು. ಇದರೊಟ್ಟಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧವೂ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಗೃಹ ಮಂತ್ರಿ ಅಮಿತ್ ಶಾ ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ್ದರು. ಆದರೆ ಇದಾವುದಕ್ಕೂ ಬಗ್ಗದ ಅತೃಪ್ತರು ಮತ್ತೊಮ್ಮೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಶಾಸಕ ಮತ್ತು ಸಚಿವಾಕಾಂಕ್ಷಿ ಎಂ.ಪಿ.ರೇಣುಕಾಚಾರ್ಯ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ದೂರು ನೀಡಿದ್ದಾರೆ. ಇನ್ನು ಶಾಸಕರಾದ ಜಿ.ಎಚ್‌.ತಿಪ್ಪಾರೆಡ್ಡಿ ಮತ್ತು ಕೆ. ಶಿವನಗೌಡ ನಾಯಕ್‌ ಬೆಂಗಳೂರಿನಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈಗಾಗಲೇ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರಾದ ಅರವಿಂದ ಬೆಲ್ಲದ ಮತ್ತು ಬಿ.ಸಿ.ನಾಗೇಶ್‌ (ತಿಪಟೂರು) ಜತೆ ಮಾತುಕತೆ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅವರನ್ನು ಸಮಾಧಾನಪಡಿಸಿದ್ದಾರೆ.

ಅತೃಪ್ತ ಶಾಸಕರು ಒಂದೆಡೆ ಸೇರಿ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಮೂಲಕ ಶಾಸಕರನ್ನು ಸಂಪರ್ಕಿಸಿ ಸಮಾಧಾನಗೊಳಿಸುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಪ್ರಹ್ಲಾದ್ ಜೋಶಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, “ಸಚಿವ ಸಂಪುಟ ವಿಸ್ತರಣೆ ಮತ್ತು ಆ ಬಳಿಕ ನಡೆದ ರಾಜಕೀಯ ಬೆಳವಣಿಗಳ ಬಗ್ಗೆ ಮಾತನಾಡಿದ್ದೇನೆ. ಸೋತವರನ್ನು ಮಂತ್ರಿ ಮಾಡಿದ್ದು ಸರಿಯಲ್ಲ. ನನಗಿಂತಲೂ ಹಿರಿಯರಾದ ಹಲವು ಶಾಸಕರು ಇದ್ದಾರೆ. ಅವರನ್ನು ಮಂತ್ರಿ ಮಾಡಬಹುದಿತ್ತು ಎಂದು ಹೇಳಿದ್ದೇನೆ. ಯೋಗೇಶ್ವರ್ ಅವರನ್ನು ಮಂತ್ರಿ ಮಾಡಿದ್ದು ಸರಿಯಲ್ಲ ಎಂಬುದನ್ನು ಮುಖ್ಯಮಂತ್ರಿ ಮತ್ತು ವರಿಷ್ಠರಿಗೆ ಹೇಳಿದ್ದೆವು. ಯೋಗೇಶ್ವರ್‌ ಅವರಿಂದಲೇ ಬಿಜೆಪಿ ಸರ್ಕಾರ ಬಂದಿತು ಎಂಬುದನ್ನು ಒಪ್ಪಲು ಸಾಧ್ಯವಿಲ್ಲ” ಎಂದರು.

“ಈಗಿರುವ ಎಲ್ಲ 32 ಸಚಿವರನ್ನೂ ಕೈಬಿಟ್ಟು, ಹೊಸದಾಗಿ ಸಂಪುಟ ರಚಿಸಬೇಕು. ಕೈಬಿಟ್ಟವರಿಗೆ ಪಕ್ಷದ ಸಂಘಟನೆ ಹೊಣೆ ಮತ್ತು ಹಿರಿತನ ಆಧರಿಸಿ ಹೊಸಬರಿಗೆ ಅವಕಾಶ ನೀಡಬೇಕು” ಎಂದು ದೇವದುರ್ಗ ಶಾಸಕ ಶಿವನಗೌಡ ನಾಯಕ್ ಒತ್ತಾಯಿಸಿದ್ದಾರೆ

ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಾವು ಬಿಜೆಪಿ ಒಳಗೆ ಏರುತ್ತಲೇ ಇದೆ. ಒಬ್ಬರ ನಂತರ ಮತ್ತೊಬ್ಬರು ತಮ್ಮ ಅಸಮಾಧಾನವನ್ನು ನೇರವಾಗಿಯೇ ಹೊರಹಾಕುತ್ತಿದ್ದಾರೆ. ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ.

ಇದನ್ನೂ ಓದಿ: ಯಾವನಾದ್ರು *** ಮಗ ನನ್ನ ಕೇಳಿದ್ದೀರಾ: ರೈತರ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಕ್ಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ವಿಶ್ವನಾಥ್, ಶಾಸಕ ಯತ್ನಾಳ್, ಶಾಸಕ ರೇಣುಕಾಚಾರ್ಯ ಸೇರಿದಂತೆ ಹತ್ತಾರು ನಾಯಕರು ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಲಾಬಿ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಆರೋಪಿಸಿದ್ದರು. ಸಿ.ಡಿ ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮತ್ತೆ ಕೆಲವರು ಕಿಡಿ ಕಾರಿದ್ದರು.

ಇವುಗಳನ್ನು ಗಮನಿಸಿದ ಯಡಿಯೂರಪ್ಪ, ನಿಮಗೆ ಅಸಮಾಧಾನವಿದ್ದರೆ ದೆಹಲಿಗೆ ಹೋಗಿ ದೂರು ನೀಡಿ ಎಂದು ಸಚಿವಾಕಾಂಕ್ಷಿಗಳಿಗೆ ಖಡಕ್ ಆಗಿ ಹೇಳಿದ್ದರು. ಈ ಬೆನ್ನಲ್ಲೇ ಅಮಿತ್ ಶಾ ನೀಡಿರುವ ಈ ಹೇಳಿಕೆ ಸಚಿವಾಕಾಂಕ್ಷಿಗಳಿಗೆ ಆಘಾತ ನೀಡಿದಂತಾಗಿತ್ತು.

ಕರ್ನಾಟಕ ಪ್ರವಾಸದಲ್ಲಿದ್ದ ಗೃಹ ಮಂತ್ರಿ ಅಮಿತ್ ಶಾ ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದರು. “ಸಾರ್ವಜನಿಕವಾಗಿ ಮಾಡುತ್ತಿರುವ ವಿವೇಚನೆಯಿಲ್ಲದ ಟೀಕೆಗಳನ್ನು ನಿಲ್ಲಿಸಬೇಕು. ನೆನಪಿಡಿ ಪಕ್ಷ ಮೊದಲು. ವಿವೇಚನೆಯಿಲ್ಲದ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪಕ್ಷಕ್ಕಾಗಿ ದುಡಿಯಬೇಕು” ಎಂದು ಎಚ್ಚರಿಸಿದ್ದರು.


ಇದನ್ನೂ ಓದಿ: ರಾಜ್ಯದಲ್ಲಿ ಟಿಆರ್‌ಪಿ ಹಗರಣ ಸುಳ್ಳು: ಯಾವುದೇ ದೂರು ದಾಖಲಾಗಿಲ್ಲ ಎಂದ ಸಿಸಿಬಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....