Homeಮುಖಪುಟಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು... ಆದರೆ?

ಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು… ಆದರೆ?

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಖಾಯಂ, ಡಿಸೆಂಬರ್ ಮುಗಿಯಲಿ ನೋಡೋಣ, ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆ ಒಳ್ಳೆಯದಲ್ಲ, ಸಂಕ್ರಾಂತಿಯೊಂದು ಆಗಿಬಿಡಲಿ, ದಾವೋಸ್ ಸಮ್ಮೇಳನ ನಂತರ ಸಂಪುಟ ವಿಸ್ತರಣೆ ಖಚಿತ… ಅಬ್ಬಬ್ಬಾ! ಭಾಗಶಃ ಕಳೆದ ಎರಡು ತಿಂಗಳಿನ ಅವಧಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಿಎಎ ನಂತರ ಅತಿಹೆಚ್ಚು ಗಮನ ಸೆಳೆದ ವಿಚಾರ ಎಂದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ಇರಬೇಕು.

ಬಿಎಸ್‌ವೈ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಸಚಿವರಿಲ್ಲದೆ ಒನ್ ಮ್ಯಾನ್ ಶೋ ನೀಡುತ್ತಿದ್ದ ಸಂದರ್ಭದಲ್ಲೂ ಸಹ ಸಂಪುಟ ರಚನೆಗೆ ಇಷ್ಟೇ ವಿಳಂಭವಾಗಿತ್ತು ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ, ಸಂಪುಟ ವಿಸ್ತರಣೆ ಮಾಡುವುದು ಶಿಸ್ತಿನ ಪಕ್ಷ ಎನಿಸಿಕೊಂಡ ಬಿಜೆಪಿಯಲ್ಲಿ ದೊಡ್ಡ ವಿಚಾರ ಏನಲ್ಲ. ಆದರೆ, ಅಧಿಕಾರದ ವಿಚಾರದಲ್ಲಿ ಯಾವ ಶಾಸಕನನ್ನೂ ಮುಂಚಿನಂತೆ ಶಿಸ್ತಿನ ಹೆಸರಲ್ಲಿ ಕಟ್ಟಿಹಾಕಲು ಸಾಧ್ಯವಿಲ್ಲ. ಸ್ವಲ್ಪ ಎಡವಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಂತೆ ಬಿಜೆಪಿ ಸರ್ಕಾರವೂ ಅತೃಪ್ತರ ಭಿನ್ನಮತದಿಂದ ಪತನಗೊಳ್ಳುವುದು ಗ್ಯಾರಂಟಿ ಎಂಬ ವಿಚಾರ ತಿಳಿಯದ ಅಮಾಯಕರೇನಲ್ಲ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್.

ಇದೇ ಕಾರಣಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇತ್ತು. ಆದರೆ, ಎಷ್ಟೇ ದಿನವಾದರೂ ಗಜಪ್ರಸವ ಕೊನೆಗೊಂದು ದಿನ ಆಗಲೇಬೇಕಲ್ಲ. ಆ ಕಾಲ ಸನ್ನಿಹಿತವಾಗಿದೆ. ಜನವರಿ 31 ರಂದು ಶತಾಯಗತಾಯ ಸಂಪುಟ ವಿಸ್ತರಣೆ ಆಗಲೇಬೇಕು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 12ಜನರಿಗೆ ಸಚಿವ ಸ್ಥಾನ ನೀಡಲು ಉದ್ದೇಶಿಸಿರುವ ಯಡಿಯೂರಪ್ಪ 9-3 ಸೂತ್ರಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಪಕ್ಷದೊಳಗಿನ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಇದರ ಎರಡರಷ್ಟಿದೆ. ಇನ್ನೂ ಅರ್ಹ ಶಾಸಕರ ಗುಂಪಿನಲ್ಲೂ ಎದ್ದಿರುವ ಭಿನ್ನಮತವನ್ನು ಶಮನಗೊಳಿಸುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ.

ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಜನರ ಲಾಬಿ

ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಈಗಾಗಲೇ ಸ್ವತಃ ಯಡಿಯೂರಪ್ಪ ಸ್ಪಷ್ಟಪಡಿಸಿರುವಂತೆ 12 ಜನರಿಗೆ ಮಾತ್ರ ಸಚಿವ ಸ್ಥಾನ ಈ ಪೈಕಿ 9 ಸ್ಥಾನ ವಲಸೆ/ಅರ್ಹ ಶಾಸಕರ ಪಾಲಾದರೆ, ಉಳಿದ ಮೂರು ಸ್ಥಾನಗಳು ಮಾತ್ರ ಮೂಲ ಬಿಜೆಪಿಗರಿಗೆ ಎನ್ನಲಾಗುತ್ತಿದೆ.

ಈ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ ಈಗಾಗಲೇ ಶಾಸಕರನ್ನು ಫೈನಲ್ ಮಾಡಲಾಗಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಹಾಗೆ ನೋಡಿದರೆ ಮೂಲ ಬಿಜೆಪಿಗರಿಗೆ ಉಳಿಯುವುದು ಇನ್ನೂ ಒಂದು ಸ್ಥಾನ ಮಾತ್ರ. ಆದರೆ, ಈ ಒಂದು ಸ್ಥಾನಕ್ಕೆ ಸುಮಾರು 30 ಜನ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ.

ಹಿರಿಯ ಶಾಸಕರಾದ ದತ್ತಾತ್ರೇಯ ರೇವೂರ್ ಪಾಟೀಲ್, ಎಸ್. ಅಂಗಾರ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ, ಅಪ್ಪಚ್ಚು ರಂಜನ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಪೂರ್ಣಿಮ ಶ್ರೀನಿವಾಸ್, ಜಿ. ರಾಜುಗೌಡ, ವಿ. ಸುನೀಲ್‌ಕುಮಾರ್, ಹಾಲಪ್ಪ ಆಚಾರ್ ಹೀಗೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.

ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಲಿರುವ ಕತ್ತಿ

ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕರ ಪೈಕಿ ಉಮೇಶ್ ಕತ್ತಿ ಅಗ್ರಗಣ್ಯರು. ಸತತ ೮ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕತ್ತಿ ಬೆನ್ನ ಹಿಂದೆ ರಾಜ್ಯದಲ್ಲಿ ಬೃಹತ್ ಮತಬ್ಯಾಂಕ್ ಹೊಂದಿರುವ ಲಿಂಗಾಯತ ಸಮಾಜ ಇದೆ. ಇದೇ ಧೈರ್ಯದಲ್ಲಿ ಕೆಲ ದಿನಗಳ ಹಿಂದೆ ಅವರು ಸ್ವತಂತ್ರ‍್ಯ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಮುಂದಿತ್ತಿದ್ದರು.

ಆದರೆ, ಬಿಎಸ್‌ವೈ ಸಂಪುಟದಲ್ಲಿ ಎಲ್ಲಾ ಸಮಾಜದವರಿಗೂ ಅವಕಾಶ ಮಾಡಿಕೊಡಬೇಕು ಎಂಬ ಏಕೈಕ ಉದ್ದೇಶದಿಂದ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೇಗಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂದು ನಿರ್ಧರಿಸಿದ್ದ ಕತ್ತಿ ಕಳೆದ ಆರು ತಿಂಗಳಿನಿಂದ ಪ್ರತಿನಿತ್ಯ ಯಡಿಯೂರಪ್ಪನವರ ಮನೆಗೆ ಎಡತಾಕುತ್ತಿದ್ದರು. ಆದರೆ, ಈ ಎಲ್ಲಾ ಪ್ರಯತ್ನ ವಿಫಲವಾಗಿವೆ. ಪರಿಣಾಮ ಇದೀಗ ಕತ್ತಿ ನೇರವಾಗಿ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರಿಂದ ಒತ್ತಡ ಹೇರಲು ಮುಂದಾಗಿದ್ದಾರೆ.

ಇಷ್ಟಾದರೂ ಒಂದು ವೇಳೆ ಉಮೇಶ್ ಕತ್ತಿಗೆ ಸಚಿವ ಸ್ಥಾನ ನಿರಾಕರಿಸಿದರೆ ಅವರು ಸುಮ್ಮನೆ ಕೂರುವವರಲ್ಲ. ರಾಜಕೀಯವಾಗಿ ಭವಿಷ್ಯದಲ್ಲಿ ಅವರು ಏನೇ ತಂತ್ರ ಹೂಡಿದರೂ ಅದರ ಫಲವನ್ನು ಯಡಿಯೂರಪ್ಪ ಅನುಭವಿಸಲೇಬೇಕು.

ಅರ್ಹ/ಅತೃಪ್ತರ ಆತ್ಮಗಳಿಗೂ ಸಿಗದ ಶಾಂತಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಏಕೈಕ ಕಾರಣಕ್ಕ 17 ಜನ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಬೀಳಿಸಿ ಬಿಜೆಪಿಗೆ ಹಾರಿದ್ದರು. ಸಚಿವ ಸ್ಥಾನದ ಆಸೆಯಿಂದಲೇ ಅವರೆಲ್ಲಾ ಬಿಜೆಪಿ ಪಾಲಾದರು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ. ಆದರೆ, ಕಳೆದ ಉಪ ಚುನಾವಣೆಯ ನಂತರ ಈ ಎಲ್ಲಾ ಅರ್ಹ/ಅತೃಪ್ತ ಶಾಸಕರದ್ದೂ ಒಬ್ಬೊಬ್ಬರದ್ದು ಒಂದೊಂದು ಕಥೆ ಎಂಬಂತಾಗಿದೆ.

15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಪೈಕಿ 12 ಕ್ಷೇತ್ರದಲ್ಲಿ ಅನರ್ಹ ಶಾಸಕರು ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮಾತಿಗೆ ಕಟ್ಟುಬಿದ್ದ ರಾಣಿಬೆನ್ನೂರು ಕ್ಷೇತ್ರದ ಆರ್.ಶಂಕರ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡು ಸಚಿವನಾಗುವ ಆಸೆಯಿಂದ ಶಾಸಕ ಸ್ಥಾನವನ್ನೂ ತ್ಯಾಗ ಮಾಡಿದ್ದಾರೆ. ಇನ್ನೂ ಚುನಾವಣೆಯಲ್ಲಿ ಸೋಲನುಭವಿಸಿರುವ ಎಂಟಿಬಿ ನಾಗರಾಜ್ ಮತ್ತು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಹ ಪ್ರಮುಖ ಸಚಿವ ಸ್ಥಾನ ಆಕಾಂಕ್ಷಿಗಳು.

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

ಈ 15 ಜನರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಕಾರಣಕ್ಕೆ ಇವರು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದರು. ಆದರೆ, ಪ್ರಸ್ತುತ ಈ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡದಿದ್ದರೂ ಸಹ ಮುಂದಾಗಬಹುದಾದ ಪರಿಣಾಮ ಏನು? ಎಂಬುದು ಇದೀಗ ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.

ಇನ್ನೂ ಫೆ.17ಕ್ಕೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇರುವ ಒಂದು ಸ್ಥಾನಕ್ಕೆ ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಸ್ಥಾನ ಸವದಿಗೆ ಖಾಯಂ ಎನ್ನಲಾಗುತ್ತಿದೆ. ಇದು ಸಾಧ್ಯವಾದರೆ ಆರ್.ಶಂಕರ್ ಸ್ಥಿತಿ ಇರುವುದಲ್ಲೇ ಶೋಚನೀಯ ಎಂಬಂತಾಗುವುದರಲ್ಲಿ ಎರಡು ಮಾತಿಲ್ಲ.

ಒಟ್ಟಿನಲ್ಲಿ ಬಿಜೆಪಿ ಸಂಪುಟ ರಚನೆಗೆ ತೆಗೆದುಕೊಂಡದ್ದಕ್ಕಿಂತ ಹೆಚ್ಚಿನ ಸಮಯವನ್ನು ಸಂಪುಟ ವಿಸ್ತರಣೆ ತೆಗೆದುಕೊಂಡಿದೆ. ಆದರೂ, ಈವರೆಗೆ ಯಾವುದೇ ವಿವಾದವಿಲ್ಲದೆ, ಸಂಪುಟ ವಿಸ್ತರಣೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರಗಳ ಕಾಲ ಯಡಿಯೂರಪ್ಪನವರದ್ದು ಮಾತ್ರ ಬೆಂಕಿ ಮೇಲಿನ ನಡೆ ಎನ್ನಲು ಅಡ್ಡಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...