ಬುಧವಾರ ನವದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಪಕ್ಷದ ವರಿಷ್ಠರು ಸಂಪುಟ ವಿಸ್ತರಣೆಗೆ ಸಂಬಂಧಿಸಿ ಒಂದೆರೆರಡು ದಿನಗಳಲ್ಲಿ ಪಟ್ಟಿ ಅಂತಿಮಗೊಳಿಸಲಿದ್ದು, ಅದಾದ ನಂತರ ಈ ಕುರಿತು ತೀಮಾರ್ನನ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಬಗ್ಗೆ ನಿನ್ನೆಯೆ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ, “ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ.ಪಿ.ನಡ್ದಾ ರವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ, ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಜೊತೆಗಿದ್ದರು” ಎಂದು ಬರೆದಿದ್ದರು.

ಇದನ್ನೂ ಓದಿ: ‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಮ್ಮ ನಾಯಕರ ಜೊತೆ ಮಾತನಾಡಿದ್ದೇನೆ, ಅವರು ಇನ್ನೆರಡು ಮೂರು ದಿನಗಳಲ್ಲಿ ತೀರ್ಮಾನ ಹೇಳಲಿದ್ದಾರೆ, ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯತ್ನಾಳ್ ಬೆದರಿಕೆಗೆ ಮಣಿದ ಯಡಿಯೂರಪ್ಪ ಸರ್ಕಾರ; ವಿಜಯಪುರಕ್ಕೆ ಅನುದಾನ ಬಿಡುಗಡೆ!

LEAVE A REPLY

Please enter your comment!
Please enter your name here