Homeಕರ್ನಾಟಕಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು

- Advertisement -
- Advertisement -

ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ (ಏ.24) ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಿತು.

ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿಎಂ, ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕವಾದ ಸಚಿವ ಸಂಪುಟ ಸಭೆ ನಡೆಸಿದ್ದೇವೆ. ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲು ತೀರ್ಮಾನಿಸಿ ಈಗಾಗಲೇ ಕಲಬುರಗಿ ಆಗಿದೆ. ಈಗ ಮೈಸೂರು ವಿಭಾಗದ್ದು ನಡೆದಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ಹಾಗೂ ಬೆಂಗಳೂರು ವಿಭಾಗದ ಸಭೆಯನ್ನು ಮಾಡಲಿದ್ದೇವೆ. ಬೆಳಗಾವಿ ವಿಭಾಗದ್ದು ವಿಜಯಪುರ ಹಾಗೂ ಬೆಂಗಳೂರು ವಿಭಾಗದ್ದನ್ನು ನಂದಿ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಿದ್ದೇವೆ ಎಂದರು.

ಮೈಸೂರು ವಿಭಾಗದ 78 ವಿಷಯಗಳ ಬಗ್ಗೆ ಚರ್ಚೆ ಆಗಿದೆ. ಕಲಬುರಗಿ ‌ವಿಭಾಗದಲ್ಲಿ 56 ವಿಷಯಗಳ ತೀರ್ಮಾನ ಆಗಿತ್ತು. ಈಗ 3,647 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ‌ದೊರೆತಿದೆ. ಲೋಕೋಪಯೋಗಿ, ನೀರಾವರಿ, ಸಣ್ಣ ನೀರಾವರಿ, ಇಂಧನ, ಆರೋಗ್ಯ, ಆರ್‌ಡಿಪಿಆರ್ ಇಲಾಖೆ, ಕೆರೆಗಳಿಗೆ ನೀರು, ಬುಡಕಟ್ಟು ಅಭಿವೃದ್ಧಿ, ಹಾಡಿಗಳಿಗೆ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.


ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳು

  • ಸಣ್ಣ ನೀರಾವರಿ ಮತ್ತು ಜಲ ಸಂಪನ್ಮೂಲ ಇಲಾಖೆಗಳ ವತಿಯಿಂದ 29 ಕಾಮಗಾರಿಗಳನ್ನು 1,787.87 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಮೂಲಕ ಮೈಸೂರು ಕಂದಾಯ ವಿಭಾಗದ ಜಿಲ್ಲೆಗಳ ಜಲಾಶಯ, ಕೆರೆಗಳು, ಕಾಲುವೆಗಳ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ನೀರಾವರಿ ಚಟುವಟಿಕೆಗಳನ್ನು ಸಮಗ್ರವಾಗಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತದೆ.
  • ಪರಿಶಿಷ್ಟ ಪಂಗಡದ ಜನರು ವಾಸಿಸುವ ಪ್ರದೇಶಗಳ ಅಭಿವೃದ್ಧಿಗಾಗಿ ಪ್ರಮುಖವಾಗಿ ನಾಲ್ಕು ವಿಷಯಗಳಿಗೆ 203.2 ಕೋಟಿ ರೂ.ಗಳನ್ನು ವಿನಿಯೋಗಿಸಲು ನಿರ್ಧರಿಸಲಾಗಿದೆ.
  • ಪರೋಕ್ಷವಾಗಿ ಮಾನವ-ಆನೆ ಸಂಘರ್ಷ ತಡೆಗಟ್ಟಲು 210.2 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
  • ಮೈಸೂರು ಭಾಗದ ನಗರಗಳ ಜನರ ಕುಡಿಯುವ ನೀರಿನ ಯೋಜನೆಗಳಿಗಾಗಿ ನಗರಾಭಿವೃದ್ಧಿ ಇಲಾಖೆ ವತಿಯಿಂದ 315 ಕೋಟಿ ರೂ., ಈ ಭಾಗದ ಜಿಲ್ಲೆಗಳ ಜನರ ಆರೋಗ್ಯ ಸುಧಾರಣೆಗೆ 228.14 ಕೋಟಿ ರೂ. ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸುಮಾರು 300 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.
  • ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಚಿಕ್ಕ ಕಲ್ಲೂರಿನಲ್ಲಿ ಶ್ರೀ ಮಂಟೇಸ್ವಾಮಿ, ಶ್ರೀ ರಾಚಪ್ಪಾಜಿ ಹಾಗೂ ಶ್ರೀ ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸಂಪುಟ ಸಭೆ ತೀರ್ಮಾನಿಸಿದೆ.
  • ಮೈಸೂರಿನ ಇಲವಾಲದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಿದೆ.
  • ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ನಂಜನಗೂಡು ತಾಲೂಕಿನ ಬದನವಾಳು ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಗ್ರಾಮಕ್ಕೆ ಮಹಾತ್ಮ ಗಾಂಧಿಯವರೂ ಭೇಟಿ ಕೊಟ್ಟಿದ್ದರು. ಅದರ ನೆನಪಿಗಾಗಿ ಶತಮಾನೋತ್ಸವ ಭವನ ಮತ್ತು ಗ್ರಾಮೀಣ ಅಭಿವೃದ್ಧಿ ಕೇಂದ್ರವನ್ನು ನಿರ್ಮಿಸಲು ತೀರ್ಮಾನಿಸಿದೆ.
  • ರನ್ ವೇ ವಿಸ್ತರಣೆ ಸೇರಿದಂತೆ ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
  • ಬುಡಕಟ್ಟು ಸಮುದಾಯದ ಜನರು ವಾಸಿಸುವ ಪ್ರದೇಶದಲ್ಲಿ ರಸ್ತೆ, ಚರಂಡಿ, ವಿದ್ಯುತ್ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
  • ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಕೆರೆಗಳನ್ನು ತುಂಬಿಸುವ, ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯವನ್ನು ವಿಸ್ತರಿಸುವ, ವಿವಿಧ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸುವ ತೀರ್ಮಾನವನ್ನೂ ಇಂದು ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ.
  • ಚಾಮರಾಜನಗರದಲ್ಲಿ ಹೊಸ ಪ್ರವಾಸಿ‌ ಮಂದಿರ ನಿರ್ಮಾಣ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಮಾಡಲು ಮತ್ತು ಕ್ರೀಡಾಂಗಣ ಅಭಿವೃದ್ಧಿಗೆ 15 ಕೋಟಿ ರೂ. ನೀಡಲು ಸಂಪುಟ ಸಭೆ ಒಪ್ಪಿದೆ.
  • ಕೊಳ್ಳೇಗಾಲದಲ್ಲಿ ಜಿಲ್ಲಾಸ್ಪತ್ರೆ ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈಗ ಇರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ 250 ಹಾಸಿಗೆಗಳ ಆಸ್ಪತ್ರೆ ಮಾಡಲಾಗುವುದು. ಹೊಸ ತಾಲೂಕಾದ ಹನೂರಿನಲ್ಲಿ ತಾಲೂಕು ಭವನ, ತಾಲೂಕು ಆಸ್ಪತ್ರೆ (50 ಹಾಸಿಗೆ ಸಾಮರ್ಥ್ಯ) ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲೆ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...