HomeUncategorizedಎನ್‌ಪಿಎಸ್ ರದ್ದತಿ ಬಗ್ಗೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಎನ್‌ಪಿಎಸ್ ರದ್ದತಿ ಬಗ್ಗೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದತಿ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಪದಾಧಿಕಾರಿಗಳು ಶನಿವಾರ ಸಿಎಂ ಭೇಟಿಯಾಗಿ ಎನ್‌ಪಿಎಸ್‌ ರದ್ದತಿ ಬಗ್ಗೆ ಚರ್ಚಿಸಿದ್ದಾರೆ.

ಈ ವೇಳೆ, ಎನ್‌ಪಿಎಸ್ ರದ್ದತಿಯ ಸಾಧ್ಯಾ ಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಸಿಎಂ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ. ತ್ರಿಲೋಕ್ ಚಂದ್ರ , ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ : ಮುಖ್ಯಮಂತ್ರಿ ಜೊತೆಗಿನ ಸಭೆ ಯಶಸ್ವಿ: ಮುಷ್ಕರ ಕೈಬಿಟ್ಟ ಅತಿಥಿ ಉಪನ್ಯಾಸಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಾಲ್ಕು ನೂರು ಗೆಲ್ಲಲು ಇಷ್ಟು ಸುಳ್ಳುಗಳು ಸಾಕಾಗುವುದಿಲ್ಲವೇ!?

ಚುನಾವಣೆಯ ಸಮಯದಲ್ಲಿ ವಿವಿಧ ಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗುವುದು, ಕೆಲವೊಮ್ಮೆ ಮಾತಿನ ಭರದಲ್ಲಿ ಗೆರೆ ದಾಟುವುದು- ಇವೆಲ್ಲಾ ಸಾಮಾನ್ಯ. ಇಂಥದನ್ನು ಹದ್ದುಬಸ್ತಿನಲ್ಲಿ ಇಡಲೆಂದೇ ಚುನಾವಣಾ ಆಯೋಗ ಹಲವು ನೀತಿಸಂಹಿತೆಗಳನ್ನು ಸೃಷ್ಟಿಸಿ ಹದ್ದಿನ ಕಣ್ಣಿಟ್ಟು ಕಾಯಬೇಕಿದೆ;...