Homeಮುಖಪುಟಸಿಎಜಿ ವರದಿ ಗದ್ದಲ; 21 ಜನ ಎಎಪಿ ಶಾಸಕರನ್ನು ಅಮಾನತುಗೊಳಿಸಿದ ದೆಹಲಿ ವಿಧಾನಸಭಾ ಸ್ಪೀಕರ್

ಸಿಎಜಿ ವರದಿ ಗದ್ದಲ; 21 ಜನ ಎಎಪಿ ಶಾಸಕರನ್ನು ಅಮಾನತುಗೊಳಿಸಿದ ದೆಹಲಿ ವಿಧಾನಸಭಾ ಸ್ಪೀಕರ್

- Advertisement -
- Advertisement -

ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಮಂಗಳವಾರ ವಿಧಾನಸಭೆಯಿಂದ 21 ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಮುಂದಿನ ಎರಡು ದಿನಗಳ ಕಾಲ ಅಮಾನತು ಮಾಡಿದ್ದಾರೆ. ಅಬಕಾರಿ ನೀತಿ ಮತ್ತು ಬಿ.ಆರ್. ಅಂಬೇಡ್ಕರ್ ಭಾವಚಿತ್ರದ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಯ ಬಗ್ಗೆ ಕಲಾಪಗಳು ಗದ್ದಲದಿಂದ ಕೂಡಿತ್ತು.

ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣದ ಸಮಯದಲ್ಲಿ ಶಾಸಕರು ಘೋಷಣೆಗಳನ್ನು ಕೂಗಿದರು. ಅಮಾನತುಗೊಳಿಸುವಿಕೆಯು ಎರಡು ಭಾಗಗಳಲ್ಲಿ ನಡೆದಿದ್ದು, 12 ಶಾಸಕರನ್ನು ದಿನದ ಆರಂಭದಲ್ಲಿ, ಉಳಿದವರನ್ನು ನಂತರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಕಚೇರಿಯಿಂದ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಮೂಲಕ ಬಿಜೆಪಿ ಅವರಿಗೆ ಅಗೌರವ ತೋರಿದೆ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕ ಅತಿಶಿ ಸೇರಿದಂತೆ ವರದಿಯಾಗಿದೆ.

ಅತಿಶಿ ಅವರಲ್ಲದೆ, ಗೋಪಾಲ್ ರೈ, ವೀರ್ ಸಿಂಗ್ ಧಿಂಗ್ಯನ್, ಮುಖೇಶ್ ಅಹ್ಲಾವತ್, ಚೌಧರಿ ಜುಬೈರ್ ಅಹ್ಮದ್, ಅನಿಲ್ ಝಾ, ವಿಶೇಷ್ ರವಿ ಮತ್ತು ಜರ್ನೈಲ್ ಸಿಂಗ್ ಅವರನ್ನು ಸಹ ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಎಎಪಿ ಶಾಸಕರು ಮಂಗಳವಾರ ವಿಧಾನಸಭೆ ಆವರಣದಲ್ಲಿ ಅಂಬೇಡ್ಕರ್ ಭಾವಚಿತ್ರಗಳೊಂದಿಗೆ ಪ್ರತಿಭಟನೆ ನಡೆಸಿ, “ಬಾಬಾಸಾಹೇಬ್‌ಗೆ ಈ ಅವಮಾನವನ್ನು ಭಾರತ ಸಹಿಸುವುದಿಲ್ಲ, ಜೈ ಭೀಮ್” ಎಂಬ ಘೋಷಣೆಗಳನ್ನು ಕೂಗಿದರು.

ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಬಿಜೆಪಿ ಸರ್ಕಾರ ಮಂಗಳವಾರ ದೆಹಲಿ ಅಬಕಾರಿ ನೀತಿಯ ಕುರಿತಾದ ಸಿಎಜಿ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿತು.

‘ದೆಹಲಿಯಲ್ಲಿ ಮದ್ಯದ ನಿಯಂತ್ರಣ ಮತ್ತು ಪೂರೈಕೆಯ ಕಾರ್ಯಕ್ಷಮತೆಯ ಲೆಕ್ಕಪರಿಶೋಧನೆ’ 2017-18 ರಿಂದ 2020-21 ರವರೆಗಿನ ನಾಲ್ಕು ವರ್ಷಗಳನ್ನು ಒಳಗೊಂಡಿದೆ. ಇದು ದೆಹಲಿಯಲ್ಲಿ ಭಾರತೀಯ ನಿರ್ಮಿತ ವಿದೇಶಿ ಮದ್ಯ (ಐಎಂಎಫ್‌ಎಲ್‌) ಮತ್ತು ವಿದೇಶಿ ಮದ್ಯದ ನಿಯಂತ್ರಣ ಮತ್ತು ಪೂರೈಕೆಯನ್ನು ಪರಿಶೀಲಿಸುತ್ತದೆ.

ವರದಿಯನ್ನು ಮಂಡಿಸುತ್ತಿದ್ದಂತೆ, ಬಿಜೆಪಿ ನಾಯಕರು ಆಮ್ ಆದ್ಮಿ ಪಕ್ಷವನ್ನು (ಎಎಪಿ) ತರಾಟೆಗೆ ತೆಗೆದುಕೊಂಡರು, ಫಲಿತಾಂಶಗಳ ಭಯದಿಂದ ವಿಧಾನಸಭೆಯ ಕಲಾಪವನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಭ್ರಷ್ಟಾಚಾರಕ್ಕೆ ಹಳೆಯ ನೀತಿಯೇ ಕಾರಣ: ಅತಿಶಿ

ಸಿಎಜಿ ವರದಿಯು ರಾಷ್ಟ್ರ ರಾಜಧಾನಿಯ ಖಜಾನೆಗೆ ₹2002 ಕೋಟಿಗೂ ಹೆಚ್ಚು ನಷ್ಟವನ್ನುಂಟುಮಾಡಿದೆ ಎಂದು ಹೇಳಿಕೊಂಡ ನಂತರ, ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಮಂಗಳವಾರ ರದ್ದಾದ ಹೊಸ ಮದ್ಯ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಹಳೆಯ ಮದ್ಯ ನೀತಿಯ ಅಡಿಯಲ್ಲಿ ಭ್ರಷ್ಟಾಚಾರವನ್ನು ಆಡಿಟ್ ದಾಖಲೆಯು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

ನೆರೆಯ ರಾಜ್ಯಗಳಿಂದ ಅಕ್ರಮವಾಗಿ ಮದ್ಯವನ್ನು ತರಲಾಗುತ್ತಿರುವುದರಿಂದ ದೆಹಲಿಯ ಜನರು ನಷ್ಟ ಅನುಭವಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಮಧ್ಯೆ, ಭಾರತೀಯ ಜನತಾ ಪಕ್ಷವು ವರದಿಯು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ‘ಕಪ್ಪು ಪತ್ರ’ಗಳನ್ನು ಬಹಿರಂಗಪಡಿಸಿದೆ ಎಂದು ಹೇಳಿದೆ.

ಇಂದು ದೆಹಲಿ ವಿಧಾನಸಭೆಯಲ್ಲಿ ಸಿಎಂ ರೇಖಾ ಗುಪ್ತಾ ಮಂಡಿಸಿದ ಸಿಎಜಿ ವರದಿಯಲ್ಲಿ, ಹಿಂದಿನ ಸರ್ಕಾರದ ನಿರ್ಧಾರಗಳು ಮತ್ತು ಮದ್ಯ ನೀತಿಯು ರಾಷ್ಟ್ರ ರಾಜಧಾನಿಯ ಖಜಾನೆಗೆ ₹2002 ಕೋಟಿಗೂ ಹೆಚ್ಚು ನಷ್ಟವನ್ನುಂಟು ಮಾಡಿದೆ ಎಂದು ಹೇಳಲಾಗಿದೆ.

“ಅಬಕಾರಿ ಲೆಕ್ಕಪರಿಶೋಧನಾ ವರದಿಯನ್ನು ಇಂದು ದೆಹಲಿ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಇದರ ಏಳು ಅಧ್ಯಾಯಗಳು 2017-21ರ ಅಬಕಾರಿ ನೀತಿಯ ಬಗ್ಗೆ, ಒಂದು ಅಧ್ಯಾಯವು ಹೊಸ ಅಬಕಾರಿ ನೀತಿಯ ಬಗ್ಗೆ ಇದೆ. ದೆಹಲಿ ಸರ್ಕಾರವು ಹಳೆಯ ಅಬಕಾರಿ ನೀತಿಯ ದೋಷಗಳು ಮತ್ತು ಭ್ರಷ್ಟಾಚಾರವನ್ನು ದೆಹಲಿ ಜನರಿಗೆ ಬಹಿರಂಗಪಡಿಸಿತ್ತು. ಆ ನೀತಿಯಡಿಯಲ್ಲಿ, ಹರಿಯಾಣ ಮತ್ತು ಯುಪಿಯಿಂದ ಅಕ್ರಮವಾಗಿ ಮದ್ಯವನ್ನು ತರಲಾಯಿತು. ಹಳೆಯ ನೀತಿಯಿಂದಾಗಿ ದೆಹಲಿಯ ಜನರು ನಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ನಾವು ಹೇಳಿದ ವಿಷಯವನ್ನು ಈ ವರದಿಯು ಪುನರಾವರ್ತಿಸುತ್ತಿದೆ” ಎಂದು ತಿಳೀದುಬಂದಿದೆ.

“ಈ ವರದಿಯು ನಮ್ಮ ವಾದವನ್ನು ದೃಢಪಡಿಸಿದೆ. ಎಷ್ಟು ಮದ್ಯ ಮಾರಾಟವಾಗುತ್ತಿದೆ ಎಂಬುದರಲ್ಲಿ ಭ್ರಷ್ಟಾಚಾರವಿದೆ. ಈ ವರದಿಯು ಶೇಕಡಾ 28 ಕ್ಕಿಂತ ಹೆಚ್ಚು ಭ್ರಷ್ಟಾಚಾರವನ್ನು ಗುತ್ತಿಗೆದಾರರು ಮಾಡುತ್ತಿದ್ದರು. ಹಣವು ದಲ್ಲಾಳಿಗಳ ಜೇಬಿಗೆ ಹೋಗುತ್ತಿತ್ತು ಎಂದು ತೋರಿಸುತ್ತದೆ. ಈ ವರದಿಯು ಮದ್ಯದ ಬ್ಲಾಕ್‌ ಮಾರ್ಕೆಟ್ ನಡೆಯುತ್ತಿತ್ತು. ಯಾವ ಪಕ್ಷದ ಜನರು ಮದ್ಯದ ಒಪ್ಪಂದಗಳನ್ನು ಹೊಂದಿದ್ದರು ಎಂಬುದು ಎಲ್ಲರಿಗೂ ತಿಳಿದಿದೆ. ಮದ್ಯದ ಗುತ್ತಿಗೆದಾರರು ವೆಚ್ಚದ ತಪ್ಪಾದ ಲೆಕ್ಕಾಚಾರದ ಮೂಲಕ ಲಾಭ ಗಳಿಸಿದರು” ಎಂದು ಅವರು ಹೇಳಿದರು.

ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...